ನವದೆಹಲಿ: ಮಹಿಳೆಯೊಬ್ಬರಿಗೆ ಕಿರುಕುಳ ನೀಡಿ ಚಪ್ಪಲಿ ಹಾಕಿ ಮೆರವಣಿಗೆ ನಡೆಸಿದ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಈ ಕುರಿತಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಇದು ತುಂಬಾ ನಾಚಿಗೇಡಿನ ಸಂಗತಿ ಎಂದು ಕಿಡಿಕಾರಿದ್ದಾರೆ.
ಘಟನೆ ಸಂಬಂಧಿಸಿ ಆರೋಪಿಗಳ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಬೇಕು ಎಂದು ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಒತ್ತಾಯಿಸಿದ್ದಾರೆ. ಇದನ್ನೂ ಓದಿ: ನಾವೇನು ದೊಡ್ಡ ಸಮಾವೇಶ ಮಾಡಿ ವಿದ್ಯಾರ್ಥಿಗಳ ದುರ್ಬಳಕೆ ಮಾಡಿಲ್ಲ: ಜಗದೀಶ್ ಶೆಟ್ಟರ್
Advertisement
Advertisement
ಈ ಕುರಿತಂತೆ ಅರವಿಂದ್ ಕೇಜ್ರಿವಾಲ್ ಅವರು ತಮ್ಮ ಟ್ವಿಟ್ಟರ್‌ನಲ್ಲಿ, ಇದು ನಾಚಿಗೇಡಿನ ಸಂಗತಿಯಾಗಿದೆ. ಆರೋಪಿಗಳಿಗೆ ಇಷ್ಟೊಂದು ಧೈರ್ಯ ಎಲ್ಲಿಂದ ಬಂತು? ಈ ಘಟನೆ ಕುರಿತಂತೆ ಆರೋಪಿಗಳ ವಿರುದ್ಧ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳುವಂತೆ ಪೊಲೀಸರಿಗೆ ಸೂಚಿಸಬೇಕೆಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಮತ್ತು ಲೆಫ್ಟಿನೆಂಟ್ ಗವರ್ನರ್ ಅನಿಲ್ ಬೈಜಾಲ್ ಅವರಿಗೆ ಒತ್ತಾಯಿಸುತ್ತೇನೆ. ಕ್ರಮ ಮತ್ತು ಕಾನೂನು ಸುವ್ಯವಸ್ಥೆಯ ಪರಿಸ್ಥಿತಿಗಳ ಬಗ್ಗೆ ಗಮನ ಕೊಡಿ. ದೆಹಲಿಯಲ್ಲಿ ಇಂತಹ ಘೋರ ಅಪರಾಧಗಳಿಗೆ ಮತ್ತು ಅಪರಾಧಿಗಳಿಗೆ ಯಾವುದೇ ಬೆಲೆ ನೀಡುವುದನ್ನು ಸಹಿಸಲಾಗುವುದಿಲ್ಲ ಎಂದು ಟ್ವೀಟ್ ಮಾಡಿದ್ದಾರೆ.
Advertisement
ये बेहद शर्मनाक है। अपराधियों की इतनी हिम्मत हो कैसे गई? केंद्रीय गृहमंत्री जी और उपराज्यपाल जी से मैं आग्रह करता हूँ कि पुलिस को सख़्त एक्शन लेने के निर्देश दें, क़ानून व्यवस्था पर ध्यान दें। दिल्लीवासी इस तरह के जघन्य अपराध और अपराधियों को किसी भी क़ीमत पर बर्दाश्त नहीं करेंगे। https://t.co/aAinx2Sbti
— Arvind Kejriwal (@ArvindKejriwal) January 27, 2022
Advertisement
ಆರೋಪಿಯೊಂದಿಗೆ ಮಹಿಳೆ ವೈಯಕ್ತಿಕ ದ್ವೇಷ ಹೊಂದಿದ್ದರಿಂದ ಈ ಘಟನೆ ಜರುಗಿದೆ ಎಂದು ಪೊಲೀಸರು ಶಂಕಿಸಿದ್ದು, ಮಹಿಳೆ ಕೂದಲನ್ನು ಕತ್ತರಿಸಿ, ಚಪ್ಪಲಿ ಹಾರ ಹಾಕಿ ಆರೋಪಿಗಳು ಮೆರವಣಿಗೆ ಮಾಡಿದ್ದಾರೆ. ಅಲ್ಲದೇ ಇದನ್ನು ಸ್ಥಳೀಯರು ಸಂಭ್ರಮಿಸಿದ್ದಾರೆ. ಇದನ್ನೂ ಓದಿ: ಜೂ.ಎನ್‍ಟಿಆರ್ ಜೊತೆ ನಟಿಸಬೇಕು ಎಂದಾಗ ಶಾಕ್ ಆಗಿತ್ತು: ರಾಮ್ ಚರಣ್
ಸಂತ್ರಸ್ತೆ ಮದುವೆಯಾಗಿದ್ದು, ಒಂದು ಮಗುವಿದೆ. ಆಕೆಯನ್ನು ನೆರೆಹೊರೆಯ ಯುವಕನೊಬ್ಬ ಹಿಂಬಾಲಿಸುತ್ತಿದ್ದನು. ಆದರೆ ಕಳೆದ ವರ್ಷ ಆತ ನವೆಂಬರ್‍ನಲ್ಲಿ ಆತ್ಮಹತ್ಯೆಗೆ ಶರಣಾಗಿದ್ದನು. ಈ ಆತ್ಮಹತ್ಯೆಗೆ ಯುವತಿಯೇ ಕಾರಣ ಎಂದು ಯುವಕನ ಮನೆಯವರು ಆರೋಪಿಸಿದ್ದಾರೆ. ಈ ಕುರಿತಂತೆ ಮಹಿಳೆಯ ಕಿರಿಯ ಸಹೋದರಿ ಪೊಲೀಸರಿಗೆ ಮಾಹಿತಿ ನೀಡಿದ್ದು, ಇದೀಗ ಮಹಿಳೆಗೆ ಕೌನ್ಸೆಲಿಂಗ್ ನಡೆಸಲಾಗುತ್ತಿದೆ. ದೆಹಲಿ ಶಾಹದಾರ ಜಿಲ್ಲೆಯಲ್ಲಿ ನಡೆದ ಈ ಘಟನೆ ಸಂಬಂಧಿಸಿದಂತೆ ಪೊಲೀಸರು ಸದ್ಯ ನಾಲ್ವರು ಆರೋಪಿಗಳನ್ನು ಬಂಧಿಸಿದ್ದು, ತನಿಖೆ ಮುಂದುವರಿಸಿದ್ದಾರೆ.