ಭುವನೇಶ್ವರ: ಒಡಿಶಾದಲ್ಲಿ ಶುಕ್ರವಾರ ರಾತ್ರಿ ಸಂಭವಿಸಿದ ರೈಲು ದುರಂತದಲ್ಲಿ ಈವರೆಗೆ 233 ಮಂದಿ ಬಲಿಯಾಗಿದ್ದು, ಗಾಯಗೊಂಡವರ ಸಂಖ್ಯೆ 900ಕ್ಕೆ ಏರಿದೆ. ಈ ನಡುವೆ ಭೀಕರ ರೈಲು ದುರಂತ (Train Accident) ಹೇಗಾಯ್ತು ಅನ್ನೋ ಸ್ಫೋಟಕ ಮಾಹಿತಿ ಹೊರಬಿದ್ದಿದೆ.
#WATCH | Latest visuals from the site of the deadly train accident in Odisha’s Balasore. Rescue operations underway
The current death toll stands at 233 pic.twitter.com/H1aMrr3zxR
— ANI (@ANI) June 3, 2023
ಹೌದು.. ಘಟನಾ ಸ್ಥಳದಲ್ಲಿ 3 ರೈಲು ಮಾರ್ಗಗಳಿದ್ದವು. ಈ ವೇಳೆ ಕೋಲ್ಕತ್ತಾದ ಶಾಲಿಮಾರ್ ರೈಲು ನಿಲ್ದಾಣದಿಂದ ಚೆನ್ನೈಗೆ ಮೇನ್ ಲೈನ್‌ನಲ್ಲಿ ಸಂಜೆ 7:30ಕ್ಕೆ ಹೊರಟಿದ್ದ ಕೋರಮಂಡಲ್ ಎಕ್ಸ್‌ಪ್ರೆಸ್ (ಸಂಖ್ಯೆ: 12841) (Coromandel Express) ಒಡಿಶಾದ ಬಹನಗಾ ಬಜಾರ್ ಸ್ಟೇಷನ್ ಬಳಿ ಹಳಿ ತಪ್ಪಿದೆ. ಇದರಿಂದಾಗಿ ಪಕ್ಕದ ಹಳಿಯಲ್ಲಿ ನಿಂತಿದ್ದ ಗೂಡ್ಸ್ ರೈಲಿಗೆ ಮೊದಲು ಡಿಕ್ಕಿ ಹೊಡೆದಿದೆ. ಡಿಕ್ಕಿ ಹೊಡೆದ ಪರಿಣಾಮ ಕೋರಮಂಡಲ್ ಎಕ್ಸ್‌ಪ್ರೆಸ್‌ನ 12 ಬೋಗಿಗಳು ಹಳಿ ತಪ್ಪಿ 3ನೇ ರೈಲು ಮಾರ್ಗದ ಮೇಲೆ ಬಿದ್ದಿವೆ. ಇದನ್ನೂ ಓದಿ: Odisha Train Accident; ಕ್ಷಣ ಕ್ಷಣಕ್ಕೂ ಸಾವಿನ ಸಂಖ್ಯೆ ಏರಿಕೆ – 233 ಮಂದಿ ಬಲಿ, 900 ಮಂದಿಗೆ ಗಾಯ
ಕೆಲವು ಸಮಯದ ಬಳಿಕ ಇದೇ ಮಾರ್ಗವಾಗಿ ಮತ್ತೊಂದು ಹಳಿಯಲ್ಲಿ ವಿರುದ್ಧ ದಿಕ್ಕಿನಲ್ಲಿ ಬಂದ ಬೆಂಗಳೂರಿನ ಹೌರ ಎಕ್ಸ್‌ಪ್ರೆಸ್ (ಸಂಖ್ಯೆ: 12864) ಕೋರಮಂಡಲ್‌ನ ಬೋಗಿಗಳಿಗೆ ಡಿಕ್ಕಿ ಹೊಡೆದಿದೆ. ಪರಿಣಾಮ ನಾಲ್ಕು ಬೋಗಿಗಳು ಹಳಿ ತಪ್ಪಿವೆ. ಬೆಂಗಳೂರು – ಹೌರಾ ಎಕ್ಸ್‌ಪ್ರೆಸ್ ಬೈಯಪ್ಪನಹಳ್ಳಿಯ ಎಸ್‌ಎಂವಿಟಿ ರೈಲು ನಿಲ್ದಾಣದಿಂದ ಹೊರಟಿತ್ತು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಒಡಿಶಾದಲ್ಲಿ ಗೂಡ್ಸ್ ರೈಲಿಗೆ ಕೋರಮಂಡಲ್ ಎಕ್ಸ್‌ಪ್ರೆಸ್ ರೈಲು ಡಿಕ್ಕಿ – ಹಲವರ ಸಾವಿನ ಶಂಕೆ
ಈಗಾಗಲೇ ಮೃತಪಟ್ಟವರ ಸಂಖ್ಯೆ 233ಕ್ಕೆ ಏರಿದ್ದು, ಕಾರ್ಯಾಚರಣೆ ನಡೆಯುತ್ತಿದೆ. ರೈಲ್ವೆ ಇಲಾಖೆ ದುರಂತದಲ್ಲಿ ಮೃತಪಟ್ಟವರ ಕುಟುಂಬಕ್ಕೆ 10 ಲಕ್ಷ ರೂ, ಗಂಭೀರ ಗಾಯಗೊಂಡವರಿಗೆ 2 ಲಕ್ಷ ರೂ. ಹಾಗೂ ಸಣ್ಣ ಗಾಯಗಳಾದ ಪ್ರಯಾಣಿಕರಿಗೆ 50,000 ರೂ. ಪರಿಹಾರ ಘೋಷಿಸಿದೆ.