ಬೆಂಗಳೂರಿನ ಪ್ರತಿಷ್ಠಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ತೆಲುಗು ನಟ ನಂದಮೂರಿ ತಾರಕರತ್ನ (Nandamuri Tarakaratna) ಅವರ ಸದ್ಯದ ಆರೋಗ್ಯ (Health) ಸ್ಥಿತಿ ತಿಳಿದುಕೊಳ್ಳಲು ಅಭಿಮಾನಿಗಳು ಆಸ್ಪತ್ರೆಯ ಮುಂದೆ ಜಮಾಯಿಸಿದ್ದಾರೆ. ಎರಡು ದಿನಗಳ ಹಿಂದೆ ಆಸ್ಪತ್ರೆಯು ನಂದಮೂರಿ ಅವರ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಿತ್ತು. ಆನಂತರ ಅವರ ಆರೋಗ್ಯ ಸ್ಥಿತಿಯ ಬಗ್ಗೆ ಯಾವುದೇ ಮಾಹಿತಿ ನೀಡಿಲ್ಲ. ಹಾಗಾಗಿ ಸಹಜವಾಗಿಯೇ ಅಭಿಮಾನಿಗಳಲ್ಲಿ ಆತಂಕ ಮನೆ ಮಾಡಿದೆ. ಮೂಲಗಳ ಪ್ರಕಾರ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣಿಸಿಕೊಂಡಿದೆ ಎಂದು ಹೇಳಲಾಗುತ್ತಿದೆ.
Advertisement
ನಿನ್ನೆ ಅವರ ಆರೋಗ್ಯದಲ್ಲಿ ಯಾವುದೇ ಬದಲಾವಣೆ ಆಗದೇ ಇರುವ ಹಿನ್ನೆಲೆಯಲ್ಲಿ ಅವರ ಕುಟುಂಬದ ಸದಸ್ಯರು ಒಬ್ಬೊಬ್ಬರೇ ಬೆಂಗಳೂರಿಗೆ ಆಗಮಿಸಿ, ಅವರ ಆರೋಗ್ಯ ಸ್ಥಿತಿಯನ್ನು ವಿಚಾರಿಸಿದ್ದರು. ಅವರ ಆರೋಗ್ಯ ಸ್ಥಿತಿ ಇನ್ನೂ ಗಂಭೀರವಾಗಿರುವ (Serious) ಕಾರಣ, ಎರಡು ದಿನಗಳ ಕಾಲ ಏನೂ ಹೇಳಲು ಆಗುವುದಿಲ್ಲ ಎಂದು ವೈದ್ಯರು ತಿಳಿಸಿರುವುದಾಗಿ ಮಾತನಾಡಿದ್ದರು. ಬಾಲಕೃಷ್ಣ ಹಾಗೂ ಜ್ಯೂನಿಯರ್ ಎನ್.ಟಿ.ಆರ್ ಕೂಡ ಆರೋಗ್ಯ ವಿಚಾರಿಸಲು ಇಂದು ಬೆಂಗಳೂರಿಗೆ ಆಗಮಿಸಿದ್ದರು. ಇದನ್ನೂ ಓದಿ: ‘ದಸರಾ’ ಸಿನಿಮಾ ಟೀಸರ್ ಬಿಡುಗಡೆ ಮಾಡಲಿದ್ದಾರೆ ಸೂಪರ್ ಸ್ಟಾರ್ಸ್
Advertisement
Advertisement
ಮೊನ್ನೆಯಷ್ಟೇ ಆಂಧ್ರದ ಮಾಜಿ ಸಿಎಂ ಚಂದ್ರಬಾಬು ನಾಯ್ಡು ಬೆಂಗಳೂರಿಗೆ ಬಂದು ನಾರಾಯಣ ಹೃದಯಾಲಯಕ್ಕೆ ತೆರಳಿ ನಂದಮೂರಿ ಅವರ ಆರೋಗ್ಯ ವಿಚಾರಿಸಿದ್ದರು. ತಾರಕರತ್ನ ಆರೋಗ್ಯ ಸ್ಥಿತಿ ಗಂಭೀರವಾಗಿದ್ದ ಹಿನ್ನೆಲೆಯಲ್ಲಿ ಅವರು ಆಗಮಿಸಿದ್ದರು. ಮೊನ್ನೆ ಸಂಜೆ ನಂದಮೂರಿ ಅವರ ಆರೋಗ್ಯದ ಕುರಿತು ಹೆಲ್ತ್ ಬುಲೆಟಿನ್ ರಿಲೀಸ್ ಮಾಡಿದ್ದು, ಆರೋಗ್ಯ ತೀರಾ ಹದಗೆಟ್ಟಿದೆ ಹಾಗೂ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಿರುವುದಾಗಿ ಆಸ್ಪತ್ರೆ ತಿಳಿಸಿದ್ದರು.
Advertisement
ಇಂಟ್ರಾ ಅಯೋರ್ಟಿಕ್ ಪಂಪ್, ವ್ಯಾಸೋಆಕ್ಟಿವ್ ನೆರವಿನಿಂದಲೂ ಚಿಕಿತ್ಸೆ ನೀಡಲಾಗಿದ್ದು, ಆಂಜಿಯೋಪ್ಲಾಸ್ಟಿ ಮೂಲಕ ಹಾನಿಯಾದ ರಕ್ತನಾಳಗಳಿಗೆ ಸ್ಟಂಟ್ ಹಾಕಲಾಗಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ಉಲ್ಲೇಖಿಸಲಾಗಿದೆ. ಸ್ಟಂಟ್ ಅಳವಡಿಕೆಯ ನಂತರವೂ ರಕ್ತಸ್ರಾವ ನಿಲ್ಲದೇ ಇರುವುದು ಆತಂಕಕ್ಕೆ ಕಾರಣವಾಗಿದೆ. ಆದರೂ, ನುರಿತ ವೈದ್ಯರ ತಂಡ ಚಿಕಿತ್ಸೆಯನ್ನು ಮುಂದುವರೆಸಿದೆ ಎಂದು ಹೆಲ್ತ್ ಬುಲೆಟಿನ್ ನಲ್ಲಿ ತಿಳಿಸಲಾಗಿತ್ತು
Live Tv
[brid partner=56869869 player=32851 video=960834 autoplay=true]
Join our Whatsapp group by clicking the below link
https://chat.whatsapp.com/E6YVEDajTzH06LOh77r25k