– 10 ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್‌ಆಫ್ ಆಗಿತ್ತು; ರಹಸ್ಯ ಸ್ಫೋಟ
ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ (Bengaluru) ಡೆಡ್ಲಿ ಮರ್ಡರ್‌ವೊಂದು ನಡೆದಿದೆ. 29 ವರ್ಷದ ಮಹಾಲಕ್ಷ್ಮಿ ಎಂಬ ಮಹಿಳೆಯನ್ನ ವ್ಯಕ್ತಿಯೋರ್ವ ರಣಭೀಕರವಾಗಿ ಹತ್ಯೆಗೈದಿದ್ದಾನೆ. ಮಹಿಳೆಯ ಮೃತದೇಹವನ್ನು ಒಂದಲ್ಲ, ಎರಡಲ್ಲ ಬರೋಬ್ಬರಿ 50ಕ್ಕೂ ಹೆಚ್ಚು ಪೀಸ್ ಮಾಡಿ ಫ್ರಿಡ್ಜ್‌ನಲ್ಲಿಟ್ಟಿರುವ (Fridge) ಘಟನೆ ಇಡೀ ಬೆಂಗಳೂರನ್ನೇ ಬೆಚ್ಚಿಬೀಳಿಸಿದೆ. ನಗರದ ವೈಯಾಲಿಕಾವಲ್‌ನ ಮುನೇಶ್ವರ ಬ್ಲಾಕ್‌ನಲ್ಲಿ ನಡೆದಿರುವ ಈ ಪ್ರಕರಣದಲ್ಲಿ ಒಂದೊಂದೇ ಸ್ಫೋಟಕ ವಿಚಾರಗಳು ಬೆಳಕಿಗೆ ಬರುತ್ತಿವೆ.
Advertisement
10 ದಿನಗಳ ಹಿಂದೆಯೇ ಮೊಬೈಲ್ ಸ್ವಿಚ್‌ಆಫ್:
ಪೊಲೀಸರ ಪ್ರಾಥಮಿಕ ತನಿಖೆಯಲ್ಲಿ ಹಲವು ವಿಚಾರಗಳು ಬೆಳಕಿಗೆ ಬಂದಿವೆ. ಹತ್ತು ದಿನಗಳ ಹಿಂದೆಯೇ ಮಹಿಳೆ ಕೊಲೆಯಾಗಿರುವ ಶಂಕೆ ವ್ಯಕ್ತವಾಗಿದೆ. ಕೊಲೆಯಾದ ಮಹಾಲಕ್ಷ್ಮಿ ಕಳೆದ ಒಂದು ವಾರದಿಂದ ಕೆಲಸಕ್ಕೆ ಹೋಗಿಲ್ಲ. ವಾಸವಿರುವ ಮನೆಯ ಬಳಿಯೂ ಯಾರ ಕಣ್ಣಿಗೂ ಕಾಣಿಸಿಕೊಂಡಿಲ್ಲ. 10 ದಿನಗಳ ಹಿಂದೆಯೇ ಮಹಾಲಕ್ಷ್ಮಿ ಮೊಬೈಲ್ (Mobile) ಸಹ ಸ್ವಿಚ್‌ಆಫ್ ಆಗಿದೆ. ಹಾಗಾಗಿ 10 ದಿನಗಳ ಹಿಂದೆಯೇ ಕೊಲೆಯಾಗಿರುವ ಶಂಕೆ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಬೆಂಗಳೂರಿನಲ್ಲಿ ಮಹಿಳೆ ಕಗ್ಗೊಲೆ; ದೇಹವನ್ನು ಪೀಸ್ ಪೀಸ್ ಮಾಡಿ ಫ್ರಿಡ್ಜ್‌ನಲ್ಲಿ ಇಟ್ಟಿದ್ಯಾಕೆ ಹಂತಕ?
Advertisement
ಬೌರಿಂಗ್ ಆಸ್ಪತ್ರೆಯಲ್ಲಿಂದು ಮರೋಣತ್ತರ ಪರೀಕ್ಷೆ:
ಮಹಾಲಕ್ಷ್ಮಿ ಮೃತದೇಹ ತುಂಡುಗಳ ಮರಣೋತ್ತರ ಪರೀಕ್ಷೆ ಭಾನುವಾರ (ಇಂದು) ನಗರದ ಬೌರಿಂಗ್ ಆಸ್ಪತ್ರೆಯಲ್ಲಿ (Bowring Hospital) ನಡೆಯಲಿದೆ. ಬೆಳಗ್ಗೆ 10 ಘಂಟೆ ಬಳಿಕ ಪೋಸ್ಟ್ ಮಾರ್ಟಂ ಪ್ರಕ್ರಿಯೆ ಶುರುವಾಗಲಿದೆ. ಇದನ್ನೂ ಓದಿ: ಗಾಜಾದಲ್ಲಿ ಹಮಾಸ್ ಉಗ್ರರ ಮೇಲೆ ಇಸ್ರೇಲ್ ದಾಳಿ – 13 ಮಕ್ಕಳು ಸೇರಿ 22 ಮಂದಿ ಸಾವು
Advertisement
Advertisement
ಹೇಗೆ ನಡೆಯುತ್ತೆ ಭೀಕರ ಕೊಲೆಯ ಪೋಸ್ಟ್ ಮಾರ್ಟಂ?
1 ಮೊದಲು ಪ್ರತಿ ಪೀಸ್‌ಗೂ ನಂಬರಿಂಗ್ ಮಾಡಲಾಗುತ್ತೆ
2 ಪ್ರತಿ ಪೀಸ್ಸ್‌ನ ರೆಡಿಯಾಲಿಜಿಕಲ್ ಎಕ್ಸಾಮೀನೇಶನ್ ಮಾಡಲಾಗುತ್ತೆ, ಸಿಟಿ ಸ್ಕ್ಯಾನ್ ಎಕ್ಸರೇ ಹೀಗೆ
3 ಆಯ್ದ ತುಂಡುಗಳ ಟಾಕ್ಸಿಕಲ್ ಎಕ್ಸಾಮಿನೇಷನ್ ಮಾಡಲಾಗುತ್ತೆ
4 ಆಯ್ದ ತುಂಡುಗಳ ಪ್ಯಾಥಾಲಿಜಿಕಲ್ ಎಕ್ಸಾಮಿನೇಷನ್ ಮಾಡಲಾಗುತ್ತೆ
5 DNA ಪರೀಕ್ಷೆ ಮಾಡಲಾಗುತ್ತೆ
6 ಅವಶ್ಯವಿದ್ದರೆ ಬಾಡಿ ರಿ ಅಸ್ಸೆಂಬಲ್ ಮಾಡಲಾಗುತ್ತೆ
7 ಅಂತಿಮವಾಗಿ ಕಂಡು ಬಂದ ಅಂಶಗಳ ಕುರಿತು ವರದಿಯನ್ನ ಸಿದ್ಧಪಡಿಸಲಾಗುತ್ತೆ
ಫ್ರಿಡ್ಜ್‌ನಿಂದ ರಕ್ತ ತೊಟ್ಟಿಕ್ಕುತ್ತಿತ್ತು:
ದೇಹದ ಪೀಸ್‌ಗಳನ್ನ ನೀಟಾಗಿ ಜೋಡಿಸಿ ಫ್ರಿಡ್ಜ್ ಆನ್ ಮಾಡಿದ್ದ ಕಾರಣ ದೇಹದ ಪೀಸ್‌ಗಳು ಕೊಳೆಯುವ ಹಂತಕ್ಕೆ ಹೋಗಿರಲಿಲ್ಲ. ಬಿಲ್ಡಿಂಗ್‌ಗೆ ಎಫ್‌ಎಸ್‌ಎಲ್ ಟೀಂ ಎಂಟ್ರಿ ಕೊಟ್ಟಾಗ ಮೃತದೇಹದ ದುರ್ವಾಸನೆ ಬರುತ್ತಿತ್ತಂತೆ, ಅಷ್ಟೇ ಅಲ್ಲ ಫ್ರಿಡ್ಜ್‌ನೊಳಗೆ ಇಟ್ಟಿದ್ದ ದೇಹದ ತುಂಡುಗಳಿಂದ ರಕ್ತ ತೊಟ್ಟಿಕ್ಕುತ್ತಿದ್ದವು ಎನ್ನಲಾಗಿದೆ. ಕರೆಂಟ್ ಹೋದಂತ ಸಂಧರ್ಬದಲ್ಲಿ ಒಂದಷ್ಟು ರಕ್ತ ಫ್ರಿಡ್ಜ್ ನಿಂದ ಕೆಳ ಬಿದ್ದಿತ್ತು ಅಂತ ಪೊಲೀಸರು ಮಾಹಿತಿ ನೀಡಿದ್ದಾರೆ. ಇದನ್ನೂ ಓದಿ: ಕುಮಾರಸ್ವಾಮಿ ಡಿಸಿಗೆ ಧಮ್ಕಿ ಹಾಕ್ತಿದ್ದಾರೆ, ನಿಮ್ಮ ಗೊಡ್ಡು ಬೆದರಿಕೆಗೆ ಹೆದರಲ್ಲ: ಡಿಕೆಶಿ ಗರಂ