ಮಕ್ಕಳಿಗೆ ಸಿಹಿ ತಿಂಡಿಗಳು ಎಂದರೆ ತುಂಬಾ ಇಷ್ಟ. ಆದರೆ ಪೋಷಕರು ಸಿಹಿ ತಿಂಡಿ ಕೊಟ್ರೆ ಎಲ್ಲಿ ಮಕ್ಕಳ ಹಲ್ಲಿಗೆ ತೊಂದರೆ ಆಗುತ್ತೆ ಎಂದು ಭಯಪಡುತ್ತಾರೆ. ಆದರೆ ಇಂದು ನಾವು ಹೇಳಿಕೊಡುತ್ತಿರುವ ಸಿಹಿ ತಿಂಡಿ ಆರೋಗ್ಯಕ್ಕೂ ಒಳ್ಳೆಯದು ಮತ್ತು ಮಕ್ಕಳು ಸಹ ಆಟಾಡಿಕೊಂಡು ಇಷ್ಟಪಟ್ಟು ತಿನ್ನುತ್ತಾರೆ. ಅದು ಯಾವ ತಿಂಡಿ ಎಂದು ಯೋಚನೆ ಮಾಡುತ್ತಿದ್ದೀರಾ ಅದೇ ‘ತಂಬಿಟ್ಟಿನ ಉಂಡೆ’. ಈ ಉಂಡೆಯನ್ನು ಧಾನ್ಯಗಳನ್ನು ಬಳಸಿ ಮಾಡುವುದರಿಂದ ಮಕ್ಕಳ ಆರೋಗ್ಯಕ್ಕೆ ಮತ್ತು ದೊಡ್ಡವರಿಗೆ ಶಕ್ತಿ ಹೆಚ್ಚಿಸಲು ಸಹಾಯವಾಗುತ್ತೆ.
Advertisement
ಬೇಕಾಗುವ ಪದಾರ್ಥಗಳು:
* ಕಡಲೆ ಕಾಳು – 1 ಕಪ್
* ಹೆಸರು ಕಾಳು – 1 ಕಪ್
* ಅಕ್ಕಿ – 1/3 ಕಪ್
* ಉದ್ದಿನ ಬೇಳೆ – 1/8 ಕಪ್
Advertisement
* ಬೆಲ್ಲ – ಒಂದುವರೆ ಕಪ್
* ತೆಂಗಿನ ತುರಿ – 1 ಕಪ್
* ಹುರಿದು ಸಿಪ್ಪೆ ತೆಗೆದ ಶೇಂಗಾ ಬೀಜ – 1/2 ಕಪ್
* ಏಲಕ್ಕಿ ಪುಡಿ – 1/2 ಟೀಸ್ಪೋನ್
Advertisement
Advertisement
ಮಾಡುವ ವಿಧಾನ:
* ಮೊದಲು ಒಂದು ಬಾಣಲೆಗೆ ಕಡಲೆ ಕಾಳು ಹಾಕಿ 5 ರಿಂದ 6 ನಿಮಿಷ ಮಧ್ಯಮ ಉರಿಯಲ್ಲಿ ಹುರಿದು ತೆಗೆಯಿರಿ. ನಂತರ ಅದೇ ಬಾಣಲೆಗೆ ಹೆಸರು ಕಾಳು ಹಾಕಿ 5 ರಿಂದ 6 ನಿಮಿಷ ಮಧ್ಯಮ ಉರಿಯಲ್ಲಿ ಹುರಿದು ತೆಗೆಯಿರಿ. ಅದೇ ರೀತಿ ಕ್ರಮವಾಗಿ ಅಕ್ಕಿ, ಉದ್ದಿನ ಬೇಳೆ ಹಾಕಿ 5 ನಿಮಿಷ ಮಧ್ಯಮ ಉರಿಯಲ್ಲಿ ಹುರಿದು ತೆಗೆಯಿರಿ.
* ಹುರಿದ ಶೇಂಗಾಬೀಜಗಳನ್ನೊಂದು ಹೊರತು ಪಡಿಸಿ ಉಳಿದೆಲ್ಲವುಗಳನ್ನು ಒಂದು ಪಾತ್ರೆಗೆ ಹಾಕಿ ಕಲಸಿ. ಒಂದು ಮಿಕ್ಸಿ ಜಾರಿಗೆ ಈ ಸಾಮಾಗ್ರಿಗಳನ್ನು ಹಾಕಿ ನುಣ್ಣಗೆ ರುಬ್ಬಿ ಪುಡಿ ಮಾಡಿಕೊಳ್ಳಿ.
* ಒಂದು ಬಾಣಲೆಯಲ್ಲಿ ಒಂದು ಮುಕ್ಕಾಲು ಕಪ್ ಬೆಲ್ಲ, ಅರ್ಧ ಕಪ್ ನೀರು ಹಾಕಿ ಕಲಕಿ. ಮಧ್ಯಮ ಉರಿಯಲ್ಲಿ 4 ರಿಂದ 5 ನಿಮಿಷ ಬೆಲ್ಲ ಕರಗುವ ತನಕ ಕುದಿಸಿ. ತೆಂಗಿನ ತುರಿ ಹಾಕಿ ಕಲಸಿ.
* ಬೆಲ್ಲ ಸ್ವಲ್ಪ ಅಂಟಿಕೊಳ್ಳಲು ಪ್ರಾರಂಭಿಸಿದಾಗ ಇದಕ್ಕೆ 2 ಕಪ್ ರುಬ್ಬಿದ ಹಿಟ್ಟು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿ. ಕೊನೆಯಲ್ಲಿ ಅರ್ಧ ಕಪ್ ಶೇಂಗಾ ಬೀಜ, ಅರ್ಧ ಚಮಚ ಏಲಕ್ಕಿ ಪುಡಿ ಹಾಕಿ ಚೆನ್ನಾಗಿ ಕಲಸಿ.
* ಈಗ ಇದನ್ನು ಚಿಕ್ಕ, ಚಿಕ್ಕ ಉಂಡೆಗಳನ್ನು ಮಾಡಿ.
– ಪೌಷ್ಟಿಕವಾದ ತಂಬಿಟ್ಟಿನ ಉಂಡೆ ತಿನ್ನಲು ಸಿದ್ಧ.