ಬೆಂಗಳೂರು: ನಿರುದ್ಯೋಗ ಭತ್ಯೆ ನೀಡುವುದರೊಂದಿಗೆ ಈ ಯುವಕರಿಗೆ ಇಂಡಸ್ಟ್ರಿ ಲಿಂಕೆಜ್ ಸೆಲ್ ಅಡಿ ಭವಿಷ್ಯ ಕೌಶಲ್ಯ ತರಬೇತಿ ನೀಡಲಾಗುವುದು ಎಂದು ಸಿಎಂ ಸಿದ್ದರಾಮಯ್ಯ (Siddaramaiah) ಅವರು 2025-26ನೇ ಬಜೆಟ್‌ನಲ್ಲಿ ತಿಳಿಸಿದರು.
ಈ ಬಾರಿ ದಾಖಲೆಯ 16ನೇ ಬಜೆಟ್ ಮಂಡಿಸುತ್ತಿರುವ ಸಿಎಂ, ನಿರುದ್ಯೋಗಿಗಳಾಗಿರುವ ಪದವೀಧರರಿಗೆ ಹಾಗೂ ಡಿಪ್ಲೋಮ ಪಡೆದವರಿಗೆ ನಿರುದ್ಯೋಗ ಭತ್ಯೆಯನ್ನು ನೀಡಲು ನಮ್ಮ ಸರ್ಕಾರವು ‘ಯುವನಿಧಿ’ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಈಗಾಗಲೇ ಸುಮಾರು 2.58 ಲಕ್ಷ ಯುವಕರು ಈ ಯೋಜನೆಯಡಿ ನೋಂದಾಯಿಸಿಕೊಂಡಿದ್ದು, 286 ಕೋಟಿ ರೂ. ನೇರ ನಗದು ವರ್ಗಾವಣೆ ಮಾಡಲಾಗಿದೆ ಎಂದರು. ಇದನ್ನೂ ಓದಿ: Olympics 2028 | ತರಬೇತಿಗಾಗಿ 60 ಕ್ರೀಡಾಪಟುಗಳಿಗೆ ವಾರ್ಷಿಕ ತಲಾ 10 ಲಕ್ಷ ಪ್ರೋತ್ಸಾಹ ಧನ
Advertisement
Advertisement
ಯುವನಿಧಿ ಯೋಜನೆ ಮೂಲಕ ನಿರುದ್ಯೋಗಿ ಪದವೀಧರರಿಗೆ ಮಾಸಿಕ 3000 ರೂಪಾಯಿ ಮತ್ತು ಡಿಪ್ಲೊಮಾ ಪಾಸಾದ ನಿರುದ್ಯೋಗಿಗಳಿಗೆ ಮಾಸಿಕ 1500 ರೂ. ನೀಡಲಾಗುತ್ತದೆ. ಯುವ ನಿಧಿ ಯೋಜನೆಯಿಂದ ನಿರುದ್ಯೋಗ ಭತ್ಯೆಯನ್ನು 2 ವರ್ಷಗಳ ಅವಧಿಗೆ ಮಾತ್ರ ನೀಡಲಾಗುತ್ತದೆ. ಫಲಾನುಭವಿಗೆ 2 ವರ್ಷಗಳ ನಂತರ ಅಥವಾ 2 ವರ್ಷದೊಳಗೆ ಕೆಲಸ ಸಿಕ್ಕರೆ ತಕ್ಷಣವೇ ನಿರುದ್ಯೋಗ ಭತ್ಯೆ ನಿಲ್ಲಿಸಲಾಗುತ್ತದೆ. ಇದನ್ನೂ ಓದಿ: ಮಲ್ಟಿಪ್ಲೆಕ್ಸ್ ಟಿಕೆಟ್ ದರ 200 ರೂ.ಗೆ ಸೀಮಿತ – ಕನ್ನಡ ಚಿತ್ರಗಳಿಗೆ OTT
Advertisement
ನಮ್ಮ ಸರ್ಕಾರದ ಹಿಂದಿನ ಆಡಳಿತಾವಧಿಯಲ್ಲಿ, ಮುಖ್ಯಮಂತ್ರಿಗಳು ಕೌಶಲ್ಯ ಕರ್ನಾಟಕ ಪ್ರಾರಂಭಿಸಲಾಗಿತ್ತು. ಯೋಜನೆಯನ್ನು (ಸಿಎಂಕೆಕೆವೈ) ಪ್ರಾರಂಭಿಸಲಾಗಿತ್ತು. ಪ್ರಸ್ತುತ, ರಾಜ್ಯದ ಯುವಕರಿಗೆ ಉದ್ಯೋಗಾರ್ಹತೆ ಮತ್ತು ಉದ್ಯಮಶೀಲತೆಯನ್ನು ಇನ್ನಷ್ಟು ಉತ್ತೇಜಿಸಲು ಯೋಜನೆಯ ಮಾರ್ಗಸೂಚಿಗಳನ್ನು ಪರಿಷ್ಕರಿಸಿ ಸಿಎಂಕೆಕೆವೈ 2.0 ಅನ್ನು ಜಾರಿಗೊಳಿಸಲಾಗುವುದು. ಈ ಯೋಜನೆಯಡಿ ಸಾಂಪ್ರದಾಯಿಕ ಕೌಶಲ್ಯಾಭಿವೃದ್ಧಿ ಕಾರ್ಯಕ್ರಮಗಳೊಂದಿಗೆ ಈ ಕೆಳಗಿನ ಉಪಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದು ಹೇಳಿದರು. ಇದನ್ನೂ ಓದಿ: ಅನುದಾನ ಘೋಷಣೆಯಾಗಿದ್ದರೂ ಬಿಡುಗಡೆಯಾಗಿಲ್ಲ: ಬಜೆಟ್ ಭಾಷಣದಲ್ಲಿ ಕೇಂದ್ರಕ್ಕೆ ಸಿದ್ದು ಗುದ್ದು
Advertisement
ರಾಜ್ಯದ ನರ್ಸಿಂಗ್ ವಿದ್ಯಾರ್ಥಿಗಳಿಗೆ ಜರ್ಮನ್, ಇಟಾಲಿಯನ್, ಸ್ಪ್ಯಾನಿಷ್ ಮತ್ತು ಇತರೆ ವಿದೇಶೀ ಭಾಷಾ ಕೌಶಲ್ಯ ತರಬೇತಿ ನೀಡಲಾಗುವುದು. ವಿದೇಶದಲ್ಲಿ ಉದ್ಯೋಗಾವಕಾಶ ಕಲ್ಪಿಸಲು ಅಂತಾರಾಷ್ಟ್ರೀಯ ವಲಸೆ ಕೇಂದ್ರದ ಮೂಲಕ ಬೆಂಗಳೂರಿನಲ್ಲಿ ಅಂತಾರಾಷ್ಟ್ರೀಯ ಉದ್ಯೋಗ ಮೇಳವನ್ನು ಆಯೋಜಿಸಲಾಗುವುದು. ವಿದ್ಯಾರ್ಥಿಗಳು ಭವಿಷ್ಯದಲ್ಲಿ ಸೂಕ್ತ ವೃತ್ತಿಯನ್ನು ಆಯ್ಕೆ ಮಾಡಿಕೊಳ್ಳಲು ಮಾರ್ಗದರ್ಶನವನ್ನು ಒದಗಿಸಲು `ನನ್ನ ವೃತ್ತಿ, ನನ್ನ ಆಯ್ಕೆ’ ಕಾರ್ಯಕ್ರಮದಡಿ ಸರ್ಕಾರಿ ಶಾಲಾ/ಕಾಲೇಜುಗಳಲ್ಲಿನ 2.30 ಲಕ್ಷ ವಿದ್ಯಾರ್ಥಿಗಳಿಗೆ ವೃತ್ತಿ ಮಾರ್ಗದರ್ಶನ ನೀಡಲಾಗುವುದು ಎಂದು ತಿಳಿಸಿದರು. ಇದನ್ನೂ ಓದಿ: ಅಬಕಾರಿ ಇಲಾಖೆಗೆ 40,000 ಕೋಟಿ ತೆರಿಗೆ ಸಂಗ್ರಹ ಟಾರ್ಗೆಟ್
ವಿಶ್ವ ಕೌಶಲ್ಯ ಸ್ಪರ್ಧೆಯ ಪೂರ್ವಸಿದ್ಧತೆಗಾಗಿ ಆಯೋಜಿಸಲಾಗುವ ರಾಷ್ಟ್ರೀಯ ಮಟ್ಟದ ಇಂಡಿಯಾ ಸ್ಕಿಲ್-2026 ಸ್ಪರ್ಧೆಯನ್ನು ಬೆಂಗಳೂರಿನಲ್ಲಿ ಆಯೋಜಿಸಲು ಉದ್ದೇಶಿಸಲಾಗಿರುತ್ತದೆ. ಅಳಿವಿನಂಚಿನಲ್ಲಿರುವ ಪಾರಂಪರಿಕ ಮತ್ತು ಪ್ರಾದೇಶಿಕ ಕೌಶಲ್ಯಗಳನ್ನು ಮುಂದಿನ ಪೀಳಿಗೆಗೆ ತಲುಪಿಸಲು 2,000 ಅಭ್ಯರ್ಥಿಗಳಿಗೆ ಅಗತ್ಯವಿರುವ ಟೂಲ್‌ಕಿಟ್‌ಗಳೊಂದಿಗೆ ಅಲ್ಪಾವಧಿ ತರಬೇತಿಯನ್ನು ನೀಡಲಾಗುವುದು. ಲಂಬಾಣಿ ಜನಾಂಗದ ಕಸೂತಿ ಕಲೆಯ ಬಗ್ಗೆ ತರಬೇತಿಯನ್ನು 1.000 ಅಭ್ಯರ್ಥಿಗಳಿಗೆ ದಾವಣಗೆರೆ ಮತ್ತು ಬೀದರ್ ಜಿಲ್ಲೆಗಳಲ್ಲಿನ ಕೌಶಲ್ಯ ತರಬೇತಿ ಕೇಂದ್ರಗಳಲ್ಲಿ ನೀಡಲಾಗುವುದು ಎಂದರು. ಇದನ್ನೂ ಓದಿ: ಬೆಂಗಳೂರು ನಗರ ವಿವಿ ಇನ್ಮುಂದೆ ಪ್ರಧಾನಿ ಮನಮೋಹನ್ ಸಿಂಗ್ ವಿವಿ
ರಾಷ್ಟ್ರೀಯ ಜೀವನೋಪಾಯ ಅಭಿಯಾನದ ಸ್ವಸಹಾಯ ಗುಂಪುಗಳ ಮಹಿಳೆಯರಿಗೆ ಜೀವನೋಪಾಯ ಚಟುವಟಿಕೆ ಕೈಗೊಳ್ಳಲು ತ್ವರಿತ ಸಾಲ ಸೌಲಭ್ಯ ಒದಗಿಸಿ, ಆರ್ಥಿಕ ಅಗತ್ಯತೆಗಳ ಪೂರೈಕೆ ಮತ್ತು ಭದ್ರತೆ ಒದಗಿಸಿ, ಉಳಿತಾಯ ಮತ್ತು ಉದ್ಯಮಶೀಲತೆ ಹೆಚ್ಚಿಸುವ ಉದ್ದೇಶದಿಂದ ರಾಜ್ಯ ಮಟ್ಟದಲ್ಲಿ `ಅಕ್ಕ ಕೋ-ಆಪರೇಟಿವ್ ಸೊಸೈಟಿ’ ಸ್ಥಾಪಿಸಲಾಗುವುದು. `ಗೃಹಲಕ್ಷ್ಮಿ’ ಯೋಜನೆಯ ಯಜಮಾನಿಯರನ್ನು ಸ್ವಸಹಾಯ ಗುಂಪುಗಳ ಸದಸ್ಯರುಗಳನ್ನಾಗಿಸಿ ರಾಜ್ಯಮಟ್ಟದಲ್ಲಿ `ಅಕ್ಕ ಕೋ-ಆಪರೇಟಿವ್ ಸೊಸೈಟಿ’ ವ್ಯಾಪ್ತಿಗೆ ತರಲಾಗುವುದು ಎಂದು ಹೇಳಿದರು.