ಬೆಂಗಳೂರು: ಕಳೆದ ಬಾರಿಯ ಕಾಂಗ್ರೆಸ್ ಸರ್ಕಾರವನ್ನು ಕಮೀಷನ್ ಸರ್ಕಾರವೆಂದಿದ್ದ ಪ್ರಧಾನಿ ನರೇಂದ್ರ ಮೋದಿಗೆ ಕಾಂಗ್ರೆಸ್ ಹಾಗೂ ಜೆಡಿಎಸ್ ಸಮ್ಮಿಶ್ರ ಸರ್ಕಾರದ ಸಮನ್ವಯ ಸಮಿತಿ ಅಧ್ಯಕ್ಷ ಹಾಗೂ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಟ್ವೀಟ್ ಮಾಡಿ ಖಾರವಾದ ಪ್ರಶ್ನೆ ಕೇಳಿದ್ದಾರೆ.
ಸಿದ್ದರಾಮಯ್ಯನವರ ಅಧಿಕಾರವಿದ್ದಾಗ ಪ್ರಧಾನಿ ಮೋದಿಯವರು ರಾಜ್ಯ ಸರ್ಕಾರವನ್ನು ಕಮೀಷನ್ ಸರ್ಕಾರ ಎಂದು ಆರೋಪ ಮಾಡಿತ್ತು. ಈ ಕುರಿತು ತಮ್ಮ ಟ್ವಿಟ್ಟರ್ ನಲ್ಲಿ ಪ್ರಧಾನಿ ಕಾಲೆಳೆದಿರುವ ಅವರು, ಹಿಂದೊಮ್ಮೆ ನಮ್ಮ ರಾಜ್ಯ ಸರ್ಕಾರವನ್ನು 10% ಕಮಿಷನ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದೀರಿ. ಆದರೆ ಈಗ ರಫೇಲ್ ಡೀಲ್‍ನಲ್ಲಿ ನಿಮಗೆಷ್ಟು ಪ್ರತಿಶತ ಕಮಿಷನ್ ಸಿಕ್ಕಿದೆ. ಇದರ ಬಗ್ಗೆ ದೇಶದ ಜನತೆಗೆ ಉತ್ತರಿಸುವ ಸಮಯ ನಿಮಗೆ ಬಂದಿದೆ. ನಿಮ್ಮಂತಹ ಮಹಾನ್ ಭಾಷಣಕಾರರು ಹೀಗೆ ಮೌನವಾದರೆ ಹೇಗೆ ಎಂದು ಪ್ರಶ್ನಿಸಿದ್ದಾರೆ.
Advertisement
ಹಿಂದೊಮ್ಮೆ ನಮ್ಮ ರಾಜ್ಯ ಸರ್ಕಾರವನ್ನು 10% ಕಮಿಷನ್ ಸರ್ಕಾರ ಎಂದು ಆಧಾರ ರಹಿತ ಆರೋಪ ಮಾಡಿದ್ದ ಪ್ರಧಾನಿ @narendramodi ಅವರೇ, ಈ #RafaleDeal ನಲ್ಲಿ ತಮಗೆಷ್ಟು ಪ್ರತಿಶತ ಕಮಿಷನ್ ಸಿಕ್ಕಿದೆ ಎಂದು ನೀವು ದೇಶದ ಜನತೆಗೆ ಉತ್ತರಿಸುವ ಸಮಯ ಬಂದಿದೆ. ನಿಮ್ಮಂತಹ ಮಹಾನ್ ಭಾಷಣಕಾರರು ಹೀಗೆ ಮೌನವಾದರೆ ಹೇಗೆ?#RahulGandhiWithHAL pic.twitter.com/kvYB9ELRhR
— Siddaramaiah (@siddaramaiah) October 13, 2018
Advertisement
ದೇಶದ ಪ್ರಧಾನಿಯೊಬ್ಬರು ಬಂಡವಾಳಶಾಹಿಗಳ ಪರವಾಗಿ ವ್ಯವಹಾರ ಕುದುರಿಸಲು ವಿದೇಶ ಯಾತ್ರೆಗಳನ್ನು ಮಾಡಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು. ಪ್ರಧಾನಿಯೇ ಖಾಸಗಿ ಸಂಸ್ಥೆಗಳ ಪರವಾಗಿ ಮಧ್ಯವರ್ತಿಯಾದಾಗ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಗತಿಯೇನು? ನೀವು ದೇಶದ ಪ್ರಧಾನ ಸೇವಕರಾಗಿ ಜನ ಸೇವೆಯನ್ನು ಮಾಡಲಿಲ್ಲ. ಚೌಕಿದಾರರಾಗಿ ಕಣ್ಣ ಮುಂದೆಯೇ ಸಾಲಗಾರರು ಓಡಿ ಹೋದರೂ ಮಾತನಾಡಲಿಲ್ಲ ಎಂದು ಕಿಡಿಕಾರಿದ್ದಾರೆ.
Advertisement
ನೀವು ಈಗಲಾದರೂ ರಫೇಲ್ ಡೀಲ್ ಬಗ್ಗೆ ಮಾತನಾಡಿ. ಅಲ್ಲದೇ ರಫೇಲ್ ಡೀಲ್‍ನಲ್ಲಿ ತಾವು ಅಂಬಾನಿಯವರಿಗೆ ತೋರುತ್ತಿರುವ ನಿಷ್ಠೆಯನ್ನು ದೇಶದ ಕಡೆ ತೋರಿದ್ದರೇ, ಡಾಲರ್ ಮೌಲ್ಯ ಇಂದು 74 ರೂಪಾಯಿಯ ಗಡಿ ದಾಟುತ್ತಿರಲಿಲ್ಲ ಎಂದು ಟ್ವಿಟ್ಟರ್ ನಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ.
Advertisement
ದೇಶದ ಪ್ರಧಾನಿಯೊಬ್ಬರು ಬಂಡವಾಳ ಶಾಹಿಗಳ ಪರವಾಗಿ ವ್ಯವಹಾರ ಕುದುರಿಸಲು ವಿದೇಶ ಯಾತ್ರೆಗಳನ್ನು ಮಾಡಿರುವುದು ಭಾರತದ ಇತಿಹಾಸದಲ್ಲಿ ಇದೇ ಮೊದಲು. ಪ್ರಧಾನಿಯೇ ಖಾಸಗಿ ಸಂಸ್ಥೆಗಳ ಪರವಾಗಿ ಮಧ್ಯವರ್ತಿಯಾದಾಗ ಸರ್ಕಾರಿ ಸ್ವಾಮ್ಯದ ಸಂಸ್ಥೆಗಳ ಗತಿಯೇನು? #RahulGandhiWithHAL pic.twitter.com/18uzl29MoU
— Siddaramaiah (@siddaramaiah) October 13, 2018
ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv
ಮಾನ್ಯ @narendramodi ಅವರೇ, ಪ್ರಧಾನ ಸೇವಕರಾಗಿ ಜನ ಸೇವೆಯನ್ನು ಮಾಡಲಿಲ್ಲ, ಚೌಕಿದಾರರಾಗಿ ಕಣ್ಣ ಮುಂದೆಯೇ ಸಾಲಗಾರರು ಓಡಿ ಹೋದರೂ ಮಾತನಾಡಲಿಲ್ಲ, #RafaleDeal ಬಗ್ಗೆಯಾದರೂ ಮಾತನಾಡಿ.#RafaleDeal ನಲ್ಲಿ ತಾವು ಅಂಬಾನಿಯವರಿಗೆ ತೋರುತ್ತಿರುವ ನಿಷ್ಠೆಯನ್ನು ದೇಶದ ಬಗೆಗೆ ತೋರಿದ್ದರೆ ಡಾಲರ್ ಮೌಲ್ಯ ಇಂದು ರೂ.74ರ ಗಡಿ ದಾಟುತ್ತಿರಲಿಲ್ಲ.
— Siddaramaiah (@siddaramaiah) October 13, 2018