Connect with us

Cinema

ಹಿಂದಿನ ಚಿತ್ರದ ಸಂಭಾವನೆ ಎಷ್ಟು? – ಶಿವಣ್ಣರನ್ನು ವಿಚಾರಿಸುತ್ತಿರುವ ಐಟಿ ಅಧಿಕಾರಿಗಳು

Published

on

ಬೆಂಗಳೂರು: ಇಂದು ಬೆಳಗ್ಗೆ ಸುಮಾರು ಎಂಟು ಗಂಟೆ ಸುಮಾರಿಗೆ ಹ್ಯಾಟ್ರಿಕ್ ಹೀರೋ ಶಿವರಾಜ್ ಕುಮಾರ್ ಮನೆ ಮೇಲೆ ಐಟಿ ದಾಳಿ ನಡೆದಿದೆ. ದಾಳಿ ನಡೆಸಿದ ಬಳಿಕ ಐಟಿ ಅಧಿಕಾರಿಗಳು ಶಿವಣ್ಣ ಅವರನ್ನು ವಿಚಾರಣೆ ನಡೆಸುತ್ತಿದ್ದಾರೆ.

ಮಾನ್ಯತಾ ಟೆಕ್ ಪಾರ್ಕ್ ನಲ್ಲಿರುವ ಶ್ರೀಮುತ್ತು ನಿವಾಸದ ಮೇಲೆ ಐಟಿ ಅಧಿಕಾರಿಗಳು ದಾಳಿ ನಡೆಸಿ ದಾಖಲೆಗಳನ್ನು ಪರಿಶೀಲಿಸುತ್ತಿದ್ದಾರೆ.

ಹಿಂದಿನ ಚಿತ್ರದ ಸಂಭಾವನೆ ಎಷ್ಟು? ಎಷ್ಟು ಸಂಭಾವನೆ ಪಡೆದುಕೊಂಡಿದ್ದೀರಿ? ಅದಕ್ಕೆ ಸಂಬಂಧಿಸಿದ ದಾಖಲಾತಿಗಳು ನೀಡುವಂತೆ ಅಧಿಕಾರಿಗಳು ಶಿವಣ್ಣನಿಗೆ ಸೂಚಿಸಿದ್ದಾರೆ ಎನ್ನುವ ವಿಚಾರ ಮೂಲಗಳಿಂದ ತಿಳಿದುಬಂದಿದೆ.

ಮನೆಯಲ್ಲಿ ಶಿವರಾಜ್ ಕುಮಾರ್ ಪತ್ನಿ ಗೀತಾ ಶಿವರಾಜ್ ಕುಮಾರ್ ಇರುವ ಹಿನ್ನೆಲೆಯಲ್ಲಿ ವಿಚಾರಣೆ ನಡೆಸಲು ಮಹಿಳಾ ಅಧಿಕಾರಿ ಆಗಮಿಸಿದ್ದಾರೆ. ಅಧಿಕಾರಿಗಳು ಸ್ಥಳೀಯ ಪೊಲೀಸರಿಗೆ ಮಾಹಿತಿ ನೀಡದೇ ಐಟಿ ದಾಳಿ ನಡೆಸಿದ್ದಾರೆ. ದಾಳಿ ನಂತರ ಭದ್ರತೆ ಒದಗಿಸುವಂತೆ ಐಟಿ ಅಧಿಕಾರಿಗಳು ಸೂಚಿಸಿದ್ದಾರೆ.

ಪಬ್ಲಿಕ್ ಟಿವಿಯನ್ನು ಇನ್ ಸ್ಟಾಗ್ರಾಮ್ ನಲ್ಲಿ ಫಾಲೋ ಮಾಡಿ www.instagram.com/publictv , ಪಬ್ಲಿಕ್ ಟಿವಿ ಆ್ಯಪ್ ಡೌನ್‍ಲೋಡ್ ಮಾಡಿ: play.google.com/publictv