ಸುರಂಗದಲ್ಲಿ ಸಿಲುಕಿದ ಕಾರ್ಮಿಕರ ರಕ್ಷಣೆಗೆ ಮಾಸ್ಟರ್‌ ಪ್ಲ್ಯಾನ್‌ – ಏನಿದು ರ‍್ಯಾಟ್‌ಹೋಲ್‌ ಮೈನಿಂಗ್‌?

Public TV
2 Min Read
Uttarakhand Tunnel 2

ಡೆಹ್ರಾಡೂನ್‌: ಉತ್ತರಾಖಂಡದ ಉತ್ತರಕಾಶಿ ಸುರಂಗದಲ್ಲಿ ಸಿಲುಕಿದ 41 ಕಾರ್ಮಿಕರ (Uttarakhand Tunnel Collapse) ರಕ್ಷಣಾ ಕಾರ್ಯ ಭರದಿಂದ ಸಾಗಿದೆ. ಯಂತ್ರಗಳನ್ನು ಬಳಸದೇ ಮ್ಯಾನುವಲ್‌ ಡ್ರಿಲ್ಲಿಂಗ್‌ ಮೂಲಕವೇ ರಕ್ಷಣಾ ಕಾರ್ಯಾಚರಣೆಗೆ ತಯಾರಿ ನಡೆದಿದೆ.

ಹೌದು. ಡ್ರಿಲ್ಲಿಂಗ್‌ ಯಂತ್ರಗಳ ಸಮಸ್ಯೆಯಿಂದಾಗಿ ಯಂತ್ರಗಳನ್ನು ಬಳಸದೆಯೇ ಮ್ಯಾನುವಲ್‌ (Manual Drilling) ಡ್ರಿಲ್ಲಿಂಗ್‌ ಕೈಗೊಳ್ಳಲಾಗುತ್ತಿದೆ. ಅದರಲ್ಲೂ, ರ‍್ಯಾಟ್‌ ಹೋಲ್‌ ಮೈನಿಂಗ್‌ (Rat Hole Mining) ಮೂಲಕ 41 ಜನರನ್ನು ರಕ್ಷಿಸಲು ಮಾಸ್ಟರ್‌ ಪ್ಲ್ಯಾನ್‌ ರೂಪಿಸಲಾಗಿದೆ. ಈಗಾಗಲೇ ಸುಮಾರು 12 ತಜ್ಞರ ತಂಡವು ರ‍್ಯಾಟ್‌ ಹೋಲ್‌ ಮೈನಿಂಗ್‌ ಡ್ರಿಲ್ಲಿಂಗ್‌ ಆರಂಭಿಸಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆ; ಪ್ರತಿ ತಿಂಗಳು 2,000 ರೂ. ಹಣ ಮೊದಲು ಚಾಮುಂಡೇಶ್ವರಿಗೆ ಅರ್ಪಣೆ

Uttarakhand Tunnel 1

ಏನಿದು ರ‍್ಯಾಟ್‌ ಹೋಲ್‌ ಮೈನಿಂಗ್‌?
ಚಿಕ್ಕದಾದ ರಂಧ್ರಗಳನ್ನ ಕೊರೆದು ಮನುಷ್ಯರು ಸುಲಭವಾಗಿ ಆ ರಂಧ್ರದಿಂದ ಮೂಲಕ ಹೊರಬರುವಂತೆ ಮಾಡುವುದು. ಉತ್ತರಕಾಶಿ ಸುರಂಗದಲ್ಲಿ ಯಂತ್ರಗಳಿಂದಲೂ ಕೊರೆಯಲು ಸಾಧ್ಯವಾಗದ ಕಾರಣ ಈ ಪ್ಲ್ಯಾನ್‌ ರೂಪಿಸಲಾಗಿದೆ. ಲಂಬವಾಗಿ 86 ಮೀಟರ್‌ ಕೊರೆಯುವ ಸವಾಲಿದ್ದು, ಈಗಾಗಲೇ 36 ಮೀಟರ್‌ ಕೊರೆಯಲಾಗಿದೆ. ಈಗ ಅಡ್ಡಲಾಗಿ ರ‍್ಯಾಟ್‌ ಹೋಲ್‌ ಮೈನಿಂಗ್‌ ತಂತ್ರದ ಮೂಲಕ ಕೊರೆಯುವ ಕೆಲಸ ಆರಂಭಿಸಲಾಗಿದೆ. ಈ ಪ್ಲ್ಯಾನ್‌ ಯಶಸ್ವಿಯಾದರೂ ಕಾರ್ಮಿಕರ ರಕ್ಷಣೆಗೆ ಇನ್ನೂ 3 ದಿನ ಬೇಕಾಗುತ್ತದೆ ಎಂದು ಮೂಲಗಳು ತಿಳಿಸಿವೆ. ಇದನ್ನೂ ಓದಿ: 1 ವರ್ಷದ ಬಳಿಕ ರೇಣುಕಾಚಾರ್ಯ ಅಣ್ಣನ ಮಗ ಸಾವು ಪ್ರಕರಣ ಮುಕ್ತಾಯ; ಅಪಘಾತದಿಂದಲೇ ಸಾವು ಎಂದು ವರದಿ

ಉತ್ತರಕಾಶಿ ಜಿಲ್ಲೆಯ ಸಿಲ್‌ಕ್ಯಾರ ಹಾಗೂ ದಂಡಲ್‌ಗಾಂವ್‌ಗೆ ಸಂಪರ್ಕ ಕಲ್ಪಿಸಲು ಚಾರ್‌ ಧಾಮ್‌ ರಸ್ತೆ ಯೋಜನೆ ಅಡಿಯಲ್ಲಿ ಸುರಂಗ ಮಾರ್ಗ ನಿರ್ಮಿಸಲಾಗುತ್ತಿದೆ. 4.5 ಕಿಲೋ ಮೀಟರ್‌ ದೂರದ ಸುರಂಗ ನಿರ್ಮಾಣದ ವೇಳೆ ಸುಮಾರು 150 ಮೀಟರ್‌ ಉದ್ದದ ಸುರಂಗ ಕುಸಿದಿತ್ತು. ನವೆಂಬರ್‌ 12ರಂದು ಜಾವ 4 ಗಂಟೆ ಸುಮಾರಿಗೆ ಸುರಂಗ ಕುಸಿದಿದ್ದು, ಕೂಡಲೇ ರಕ್ಷಣಾ ಕಾರ್ಯಾಚರಣೆ ಆರಂಭಿಸಲಾಗಿತ್ತು. ಇಷ್ಟಾದರೂ ಕ್ಷಿಪ್ರವಾಗಿ ಕಾರ್ಮಿಕರನ್ನು ರಕ್ಷಣೆ ಮಾಡಲು ಆಗಿರಲಿಲ್ಲ. ಇದನ್ನೂ ಓದಿ: ಬೆಂಗ್ಳೂರಲ್ಲಿ ಹಸುಗೂಸುಗಳ ಮಾರಾಟ ದಂಧೆ – ಬೃಹತ್ ಜಾಲ ಭೇದಿಸಿದ ಸಿಸಿಬಿ, 8 ಮಂದಿ ಅರೆಸ್ಟ್ 

Share This Article