ಚಿಕನ್ನಿಂದ ಮಾಡುವ ಹತ್ತು ಹಲವು ಪದಾರ್ಥಗಳನ್ನು ನೀವು ಸೇವಿಸಿರಬಹುದು. ಆದರೆ ನಾವು ಇಂದು ಹೇಳಲು ಹೊರಟಿರುವ ಚಿಕನ್ ರೋಸ್ಟ್ ನಿಮ್ಮ ಮನೆ ಮಂದಿಗೆ ಎಲ್ಲರಿಗೂ ಇಷ್ಟವಾಗುತ್ತದೆ. ಈ ಖಾದ್ಯ ನಿಮ್ಮ ಬಾಯಿ ರುಚಿ ಹೆಚ್ಚಿಸುವಲ್ಲಿ ಸಂಶಯವಿಲ್ಲ. ಹಾಗಿದ್ದರೆ ಇನ್ಯಾಕೆ ತಡ ಬನ್ನಿ ಮನೆಯಲ್ಲಿ ಸರಳವಾಗಿ ಚಿಕನ್ ರೋಸ್ಟ್ ಹೇಗೆ ಮಾಡುವುದು ಎನ್ನುವುದನ್ನು ನೋಡೋಣ…
ಬೇಕಾಗುವ ಸಾಮಗ್ರಿಗಳು:
* ಚಿಕನ್ – 1 ಕೆಜಿ
* ಮೆಣಸಿನ ಪುಡಿ – 1 ಚಮಚ
* ಗರಂ ಮಸಾಲ – 1 ಚಮಚ
* ಅರಿಶಿನ – ಅರ್ಧ ಚಮಚ
* ರುಚಿಗೆ ತಕ್ಕಷ್ಟು ಉಪ್ಪು
* ಶುಂಠಿ ಬೆಳ್ಳುಳ್ಳಿ ಪೇಸ್ಟ್ – 1 ಚಮಚ
* ಕೊತ್ತಂಬರಿ ಸೊಪ್ಪು, ಪುದೀನ ಪೇಸ್ಟ್ – ಸ್ವಲ್ಪ
* ಕೊಬ್ಬರಿ ಎಣ್ಣೆ- 1 ಕಪ್
Advertisement
ಮಾಡುವ ವಿಧಾನ:
Advertisement
* ಚಿಕನ್ ತೊಳೆದಿಟ್ಟುಕೊಳ್ಳಬೇಕು.
Advertisement
* ಒಂದು ಪಾತ್ರೆಯಲ್ಲಿ ಮೆಣಸಿನಪುಡಿ, ಗರಂ ಮಸಾಲ, ಅರಿಶಿನ ಪುಡಿ, ಉಪ್ಪು, ಶುಂಠಿ ಬೆಳ್ಳುಳ್ಳಿ ಪೇಸ್ಟ್ ಮತ್ತು ಕೊತ್ತಂಬರಿ ಮತ್ತು ಪುದೀನ ಪೇಸ್ಟ್ ಸೇರಿಸಿ ಚೆನ್ನಾಗಿ ಮಿಶ್ರಣ ಮಾಡಿ.
Advertisement
* ಈ ಮಸಾಲೆ ಮಿಶ್ರಣವನ್ನು ಒಂದು ಗಂಟೆ ನೆನೆಸಿಟ್ಟುಕೊಳ್ಳಬೇಕು. ಇದನ್ನೂ ಓದಿ: ಸ್ಪೆಷಲ್ ಮಟನ್ ಬಿರಿಯಾನಿ ಮಾಡುವ ವಿಧಾನ ನಿಮಗಾಗಿ
* ಬಾಣಲೆಗೆ ಕೊಬ್ಬರಿ ಎಣ್ಣೆ ಹಾಕಿ ಬಿಸಿ ಮಾಡಿ ಚಿಕನ್, ತಯಾರಿಸಿದ ಮಸಾಲೆ, ರುಚಿಗೆ ತಕ್ಕಷ್ಟು ಉಪ್ಪನ್ನು ಹಾಕಿ ಬೇಯಿಸಿದರೆ ಚಿಕನ್ ರೋಸ್ಟ್ ಸವಿಯಲು ಸಿದ್ಧವಾಗುತ್ತದೆ. ಇದನ್ನೂ ಓದಿ: ಖಾರವಾದ ಮಟನ್ ಖೀಮಾ ಮಾಡಿ ಟೇಸ್ಟ್ ನೋಡಿ