ಕಡಲೆ ಹಿಟ್ಟಿನಿಂದ ಬಜ್ಜಿಯನ್ನು ತಯಾರಿಸಿ ಗೊತ್ತಿದೆ. ಆದರೆ ಕಡಲೆ ಹಿಟ್ಟಿನಿಂದ ಸಿಹಿಯಾದ ತಿಂಡಿಯನ್ನು ತಯಾರಿಸಬಹುದು. ಯಾವುದೇ ವಿಶೇಷ ದಿನ ಅಥವಾ ಹಬ್ಬದ ಸಂದರ್ಭದಲ್ಲಿ ರುಚಿಯಾಗಿ ಏನಾದರೂ ತಿನ್ನಬೇಕು. ಸಿಹಿಯಾಗಿ ಏನಾದರೂ ಮಾಡಿ ತಿಂದರೆ ಚೆನ್ನಾಗಿರುತ್ತದೆ ಅನ್ನಿಸುತ್ತಿರುತ್ತದೆ. ಹೀಗಾಗಿ ನೀವು ಸುಲಭವಾಗಿ ಮತ್ತು ರುಚಿಯಾಗಿ ಫಟಾ ಫಟ್ ಎಂದು ತಯಾರಿಸುವ ಲಾಡು ಮಾಡಿ, ಸವಿಯಿರಿ.
Advertisement
ಬೇಕಾಗುವ ಸಾಮಗ್ರಿಗಳು:
* ಕಡಲೆ ಹಿಟ್ಟು- 3 ಕಪ್
* ಎಳ್ಳು – 4-5 ಚಮಚ
* ತೆಂಗಿನ ತುರಿ -1 ಕಪ್
* ಬೆಲ್ಲ-2 ಕಪ್
* ತುಪ್ಪ- ಅರ್ಧ ಕಪ್
* ಗೋಡಂಬಿ- ಸ್ವಲ್ಪ ಇದನ್ನೂ ಓದಿ: ಬಿಸ್ಕೆಟ್ ನಿಂದ ತಯಾರಿಸಿ ಸಿಹಿಯಾದ ಬರ್ಫಿ
Advertisement
ಮಾಡುವ ವಿಧಾನ:
* ಪಾತ್ರೆಗೆ ಕಡಲೆ ಹಿಟ್ಟನ್ನು ಹಾಕಿ, ಅದಕ್ಕೆ ಸ್ವಲ್ಪ ನೀರು ಸೇರಿಸಿ ಕಲೆಸಿ, ಮಿಶ್ರಣ ತಯಾರಿಸಿಕೊಳ್ಳಬೇಕು.
* ನಂತರ ತವಾಗೆ ತುಪ್ಪ ಹಾಕಿ ಬಿಸಿಯಾದಾಗ ಅದರಲ್ಲಿ ಕಡಲೆ ಹಿಟ್ಟು ಹಾಕಿ ಫ್ರೈ ಮಾಡಿ. ಬಳಿಕ ಇದೇ ರೀತಿ ಎಳ್ಳು ಮತ್ತು ತೆಂಗಿನ ತುರಿ ಹಾಕಿ ಫ್ರೈ ಮಾಡಿಕೊಳ್ಳಬೇಕು. ಇದನ್ನೂ ಓದಿ: ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ
Advertisement
Advertisement
* ನಂತರ ಉಳಿದ ತುಪ್ಪವನ್ನು ಪ್ಯಾನ್‍ಗೆ ಹಾಕಿ 2 ನಿಮಿಷ ಬಿಸಿ ಮಾಡಿ. ಬಳಿಕ ಅದಕ್ಕೆ ಸ್ವಲ್ಪ ಬೆಲ್ಲ ಹಾಕಿ ಬೆಲ್ಲ ಕರಗುವಷ್ಟು ಹೊತ್ತು ಬಿಸಿ ಮಾಡಿ. ಫ್ರೈ ಮಾಡಿಟ್ಟ ಹಿಟ್ಟು, ಎಳ್ಳು ಮತ್ತು ತೆಂಗಿನ ತುರಿಯನ್ನು ಹಾಕಿ ಚೆನ್ನಾಗಿ ಮಿಕ್ಸ್ ಮಾಡಿಕೊಳ್ಳಬೇಕು. ಇದನ್ನೂ ಓದಿ: ಮಂಗಳೂರು ಸ್ಟೈಲ್ ಚಿಕನ್ ಸುಕ್ಕಾ ಮಾಡೋ ಸುಲಭ ವಿಧಾನ
* ಕೈಗೆ ತುಪ್ಪ ಸವರಿಕೊಂಡು ಆ ಮಿಶ್ರಣದಿಂದ ಚಿಕ್ಕ ಚಿಕ್ಕ ಉಂಡೆ ಕಟ್ಟಿದರೆ ಲಾಡು ಸಿದ್ಧವಾಗುತ್ತದೆ. ಇದನ್ನೂ ಓದಿ: ಅಕ್ಕಿ ರೊಟ್ಟಿಗೆ ಕಾಂಬಿನೇಷನ್ ಖಾರವಾದ ಚಿಕನ್ ಮಸಾಲ