ಸಿಹಿ ತಿಂಡಿಯನ್ನು ಹಲವರು ತುಂಬಾ ಇಷ್ಟ ಪಡುತ್ತಾರೆ. ಅಂತಹವರಿಗಾಗಿ ನಾವು ಇಂದು ಜಿಲೇಬಿ ಮಾಡುವುದನ್ನು ತಿಳಿಸಿಕೊಡುತ್ತೇವೆ. ಬಗೆಗೆಯ ಸಿಹಿ ತಿನಿಸು ಹಬ್ಬದಲ್ಲಿ ಪ್ರಮುಖ ಪಾತ್ರವಹಿಸುತ್ತವೆ. ನಾವು ಇಂದು ಈ ಸಿಹಿಯಾದ ಜಿಲೇಬಿ ಮಾಡಲು ಬೇಕಾಗಿರುವ ಪದಾರ್ಥಗಳ ಪಟ್ಟಿಗಳ ಜೊತೆಗೆ ಮಾಡುವ ಸರಳ ವಿಧಾನವನ್ನು ವಿವರಿಸಿದ್ದೇವೆ.
Advertisement
ಬೇಕಾಗುವ ಪದಾರ್ಥಗಳು:
* ಸಕ್ಕರೆ- 2 ಕಪ್
* ಮೈದಾ ಹಿಟ್ಟು-2 ಕಪ್
* ಮೊಸರು-1 ಕಪ್
* ಬೇಕಿಂಗ್ ಸೋಡಾ- ಸ್ವಲ್ಪ
* ಕೇಸರಿ ದಳ- ಸ್ವಲ್ಪ
* ಹಾಲು- 1 ಕಪ್
* ನಿಂಬೆ ರಸ- ಸ್ವಲ್ಪ
* ಏಲಕ್ಕಿ ಪುಡಿ- ಸ್ವಲ್ಪ
* ಅಡುಗೆ ಎಣ್ಣೆ-ಅಗತ್ಯಕ್ಕೆ ತಕ್ಕಷ್ಟು ಇದನ್ನೂ ಓದಿ: ಹಬ್ಬಕ್ಕೆ ಮಾಡಲು ಮರೆಯದಿರಿ ಸಿಹಿಯಾದ ಬಾಸುಂದಿ
Advertisement
Advertisement
ಮಾಡುವ ವಿಧಾನ:
Advertisement
* ಮೊದಲಿಗೆ ಹಾಲನ್ನು ಕಾಯಿಸಿ ಅದಕ್ಕೆ ಕೇಸರಿ ದಳವನ್ನು ಹಾಕಿ ನೆನೆಯಲು ಬಿಡಿ.
* ನಂತರ ಒಂದು ಪಾತ್ರೆಗೆ ಸಕ್ಕರೆ ಹಾಗೂ ನೀರು ಹಾಕಿ ಅಂಟಿನ ಹದಕ್ಕೆ ಪಾಕವಾಗುವಂತೆ ಕಾಯಿಸಿ.
* ನಂತರ ಈ ಸಕ್ಕರೆ ಪಾಕಕ್ಕೆ ಏಲಕ್ಕಿ ಪುಡಿ, ಹಾಗೂ ಹಾಲಿನಲ್ಲಿ ನೆನೆಸಿದ ಕೇಸರಿಯನ್ನು ಅರ್ಧ ಹಾಕಿ, ಮತ್ತರ್ಧ ತೆಗೆದಿಡಿ.
* ಬಳಿಕ ಒಂದು ಪಾತ್ರೆಗೆ ಮೈದಾ ಹಿಟ್ಟು, ಮೊಸರು ಸ್ವಲ್ಪ ನೀರು ಹಾಕಿಕೊಂಡು ಇಡ್ಲಿ ಹಿಟ್ಟಿನಂತೆ ಮಾಡಿಕೊಳ್ಳಿ. ಇದನ್ನೂ ಓದಿ: ನಿಮ್ಮ ಮನೆಯಲ್ಲಿ ದಸರಾ ಹಬ್ಬದ ಸಂಭ್ರಮ ಹೆಚ್ಚಿಸಲು ಮಾಡಿ ಹುರಿಗಡಲೆ ಪೇಡಾ
* ನಂತರ ಉಳಿದರ್ಧ ಕೇಸರಿ ಹಾಗೂ ಬೇಕಿಂಗ್ ಸೋಡಾ ಹಾಕಿ ಚೆನ್ನಾಗಿ ಮಿಶ್ರಣ ಮಾಡಿ.
* ಒಲೆಯ ಮೇಲೆ ಬಾಣಲೆಯಿಟ್ಟು ಅಡುಗೆ ಎಣ್ಣೆ ಕಾಯಿಸಿಕೊಳ್ಳಿ. ನಂತರ ಹಿಟ್ಟನ್ನು ಖಾಲಿ ಸಾಸ್ ಬಾಟಲಿಗೆ ಹಾಕಿ ಎಣ್ಣೆಗೆ ಸುರುಳಿಯಾಕಾರದಲ್ಲಿ ಬಿಡಿ.
* ಎರಡೂ ಬದಿಯಲ್ಲಿ ಚಿನ್ನದ ಬಣ್ಣ ಬರುವವರೆಗೆ ಕರಿಯಿರಿ. ನಂತರ ತೆಗೆದು ಸಕ್ಕರೆ ಪಾಕಕ್ಕೆ ಹಾಕಿ ಎರಡೂ ಬದಿಯಲ್ಲೂ ಎರಡೆರಡು ನಿಮಿಷ ನೆನೆಸಿ ತೆಗೆದರೆ ರುಚಿಕರವಾದ ಜಿಲೇಬಿ ಸವಿಯಲು ಸಿದ್ಧವಾಗುತ್ತದೆ.