ರಾಗಿ, ಗೋಧಿ ಎಂದು ವಿಧ ವಿಧವಾದ ದೋಸೆ ಮಾಡುವ ನಾವು ಪಾಲಕ್ ದೋಸೆ ಮಾಡಲು ಒಮ್ಮೆ ಟ್ರೈ ಮಾಡಬಹುದಾಗಿದೆ. ಪಾಲಕ್ ಸೊಪ್ಪನ್ನು ಬಳಸಿ ನೀವು ರುಚಿ ರುಚಿಯಾದ ದೋಸೆ ಮಾಡಬಹುದು. ನಿಮ್ಮ ಹಸಿವನ್ನು ಇಂಗಿಸಿ ನಾಲಗೆಯಲ್ಲಿ ಆ ರುಚಿ ಇನ್ನೂ ಇರುವಂತೆ ಈ ದೋಸೆ ಮಾಡುತ್ತದೆ. ರಾಗಿ ದೋಸೆ, ಗೋಧಿ ದೋಸೆಗಳಿಗಿಂತ ಈ ದೋಸೆ ವಿಭಿನ್ನವಾಗಿದೆ.
ಬೇಕಾಗುವ ಸಾಮಗ್ರಿಗಳು:
* ಪಾಲಕ್ ಸೊಪ್ಪು- 1 ಕಟ್ಟು
* ರುಬ್ಬಿದ ದೋಸೆ ಹಿಟ್ಟು – 2ಕಪ್
* ಅಡುಗೆ ಎಣ್ಣೆ- ಅರ್ಧ ಕಪ್
* ರುಚಿಗೆ ತಕ್ಕಷ್ಟು ಉಪ್ಪು
* ಈರುಳ್ಳಿ-1
* ಜೀರಿಗೆ- ಸ್ವಲ್ಪ
* ಬೆಳ್ಳುಳ್ಳಿ- 1
* ಕೊತ್ತಂಬರಿ ಸೊಪ್ಪು- ಸ್ವಲ್ಪ
* ಹಸಿಮೆಣಸಿನಕಾಯಿ-4
* ಮೆಣಸಿನಪುಡಿ- ಸ್ವಲ್ಪ ಇದನ್ನೂ ಓದಿ: ನೀವೂ ಮಾಡಿ ಗರಿಗರಿಯಾದ ಚಿಕನ್ ಪಕೋಡಾ
Advertisement
Advertisement
ಮಾಡುವ ವಿಧಾನ:
* ಒಂದು ಬಾಣಲೆಗೆ ಅಡುಗೆ ಎಣ್ಣೆಯನ್ನು ಹಾಕಿ ಜೊತೆಗೆ ತೊಳೆದ ಪಾಲಕ್ ಸೊಪ್ಪು ಹಾಕಿ ಬಾಡುವ ತನಕ ಹುರಿಯಿರಿ.
* ನಂತರ ಒಂದು ಮಿಕ್ಸಿಯಲ್ಲಿ ಸೊಪ್ಪು ಮತ್ತು ಉಪ್ಪನ್ನು ಹಾಕಿ ನುಣ್ಣಗೆ ಪೇಸ್ಟ್ ಮಾಡಿಕೊಳ್ಳಿ. ಇದನ್ನೂ ಓದಿ: ನಾಲಿಗೆ ಚಪ್ಪರಿಸಿ ತಿನ್ನುವ ಶುಂಠಿ ಉಪ್ಪಿನಕಾಯಿ ಮಾಡುವ ವಿಧಾನ
Advertisement
Advertisement
* ನಂತರ ಒಂದು ಚಿಕ್ಕ ಪಾತ್ರೆ ಅಥವಾ ಬಾಣಲೆಯಲ್ಲಿ ಎಣ್ಣೆ ಹಾಕಿ ಮಧ್ಯಮ ಉರಿಯಲ್ಲಿ ಬಿಸಿ ಮಾಡಿ ಇದಕ್ಕೆ ಜೀರಿಗೆ, ಬೆಳ್ಳುಳ್ಳಿ, ಈರುಳ್ಳಿ, ಮೆಣಸಿನ ಪುಡಿ, ಹಸಿಮೆಣಸು, ಕೊತ್ತಂಬರಿ ಸೊಪ್ಪು ಹಾಕಿ ಹುರಿದುಕೊಳ್ಳಿ. ಅದನ್ನು ಆರಲು ಬಿಡಿ. ಎಲ್ಲ ಪದಾರ್ಥಗಳು ಆರಿದ ನಂತರ ಮತ್ತೊಮ್ಮೆ ಮಿಕ್ಸಿಯಲ್ಲಿ ಹಾಕಿ ನುಣ್ಣಗೆ ಪೇಸ್ಟ್ ಮಾಡಿಕೊಳ್ಳಿ.
* ನಂತರ ಒಂದು ಪಾತ್ರೆಯಲ್ಲಿ ದೋಸೆಹಿಟ್ಟನ್ನು ಹಾಕಿ ಇದಕ್ಕೆ ಪಾಲಕ್ ಬೆರೆಸಿ ಚೆನ್ನಾಗಿ ಮಿಶ್ರಣ ಮಾಡಿ. ಇದಕ್ಕೆ ಕೊಂಚ ಉಪ್ಪು ಸೇರಿಸಿ ಇನ್ನಷ್ಟು ಚೆನ್ನಾಗಿ ಮಿಶ್ರಣ ಮಾಡಿ. ಇದನ್ನೂ ಓದಿ: ಚಳಿಗೆ ಬಿಸಿ ಬಿಸಿಯಾದ ಇಡ್ಲಿ ಮಂಚೂರಿ ಸಖತ್ ಟೇಸ್ಟ್
* ನಂತರ ದೋಸೆ ಕಾವಲಿಯನ್ನು ಒಲೆಯ ಮೇಲಿಟ್ಟು ಎಣ್ಣೆ ಹಚ್ಚಿ ದೋಸೆ ಹಾಕಬೇಕು. ಚೆನ್ನಾಗಿ ಬೇಯಿಸಿದರೆ ರುಚಿಯಾದ ಪಾಲಕ್ ದೋಸೆ ಸವಿಯಲು ಸಿದ್ಧವಾಗುತ್ತದೆ.