ಬೆಳಗ್ಗಿನ ಉಪಹಾರಕ್ಕೆ ಏನು ಮಾಡುವುದು ಎಂದು ನೀವು ಯೋಚಿಸುತ್ತಿದ್ದಿರಾ? ಚಳಿ ಇರುವುದರಿಂದ ಬಿಸಿಯಾ ಟೀ, ಕಾಫಿ ಜೊತೆಗೆ ರವೆ ರೊಟ್ಟಿ ಮಾಡಿದರೆ ಸಖತ್ ರುಚಿಯಾಗಿರುತ್ತದೆ. ಈ ರೊಟ್ಟಿ ಎಷ್ಟು ಸುಲಭ ಅಷ್ಟೇ ರುಚಿಯಾಗಿದೆ. ರವೆ ರೊಟ್ಟಿ ಮಾಡುವ ಸರಳ ವಿಧಾನ ಈ ಕೆಳಗಿನಂತಿದೆ.
Advertisement
ಬೇಕಾಗುವ ಸಾಮಗ್ರಿಗಳು:
* ಚಿರೋಟಿ ರವೆ-2ಕಪ್
* ಈರುಳ್ಳಿ-2
* ಕರೀಬೇವು- ಸ್ವಲ್ಪ
* ಹಸಿಮೆಣಸು- 3
* ಜೀರಿಗೆ- 2 ಚಮಚ
* ರುಚಿಗೆ ತಕ್ಕಷ್ಟು ಉಪ್ಪು
* ಕೊತ್ತಂಬರಿ- ಸ್ವಲ್ಪ
* ಮೊಸರು- ಸ್ವಲ್ಪ
Advertisement
Advertisement
ಮಾಡುವ ವಿಧಾನ:
* ಒಂದು ಪಾತ್ರೆಯನ್ನು ತೆಗೆದುಕೊಂಡು ಅದಕ್ಕೆ ರವೆ, ಇರುಳ್ಳಿ, ಕೊತ್ತಂಬರಿ, ಜೀರಿಗೆ, ರುಚಿಗೆ ತಕ್ಕಷ್ಟು ಉಪ್ಪು, ಮೊಸರು, ಕರಿಬೇವು, ಹಸಿಮೆಣಸು ಹಾಕಿ ಚೆನ್ನಾಗಿ ಮಿಶ್ರಣ ಮಾಡಬೇಕು.
Advertisement
* ನಂತರ ಈ ಮಿಶ್ರಣವನ್ನು ಅರ್ಧ ಗಂಟೆ ಹಾಗೇ ಇಟ್ಟಿರಬೇಕು. ಇದನ್ನೂ ಓದಿ: ಮನೆಮಂದಿಗೆ ಇಷ್ಟವಾಗುವ ಫಿಶ್ ಫ್ರೈ ಮಾಡುವ ಸುಲಭ ವಿಧಾನ
* ಈಗ ಒಂದು ತವಾವನ್ನು ತೆಗೆದುಕೊಂಡು ಅದಕ್ಕೆ ಅಡುಗೆ ಎಣ್ಣೆಯನ್ನು ಚೆನ್ನಾಗಿ ಸವರಿ ನಂತ್ರ ಅದಕ್ಕೆ ಈ ಮಿಶ್ರಣವನ್ನು ಹಾಕಿ ರೊಟ್ಟಿಯ ಆಕಾರದಲ್ಲಿ ತಟ್ಟಿಕೊಳ್ಳಿ. ಇದನ್ನೂ ಓದಿ: ಸ್ಪೆಷಲ್ ಪೈನಾಪಲ್ ಪಾಯಸ ಮಾಡಿ ಹಬ್ಬವನ್ನು ಸಂಭ್ರಮಿಸಿ
* ಇದೀಗ ಚೆನ್ನಾಗಿ ಬೇಯಿಸಿದರೆ ರುಚಿಯಾದ ರವೆ ರೊಟ್ಟಿ ಸವಿಯಲು ಸಿದ್ಧವಾಗುತ್ತದೆ.