ಪಂಚಾಗದ ಪ್ರಕಾರ ಹೊಸ ವರ್ಷದ ಆಚರಣೆ ಪ್ರಾರಂಭವಾಗುವುದು ಯುಗಾದಿ (Ugadi) ಹಬ್ಬದಂದು. ಭಾರತದಲ್ಲಿ ಹಬ್ಬ ಹರಿದಿನಗಳಿಗೆ ವಿಶೇಷ ಪ್ರಾಶಸ್ತ್ಯವಿದೆ. ನಮ್ಮ ಸಂಸ್ಕೃತಿಯ ಪ್ರತೀಕವಾಗಿರುವ ಹಬ್ಬಗಳನ್ನು ಅದ್ಧೂರಿತನವಿಲ್ಲದೇ ಹೋದರೂ ಸರಳವಾಗಿ ಸಿಹಿತಿಂಡಿಗಳನ್ನು ತಯಾರಿಸಿ ದೇವರಿಗೆ ನೈವೇದ್ಯವನ್ನು ಅರ್ಪಿಸಿ, ತರಹೇವಾರಿ ಅಡುಗೆಗಳನ್ನು ಮಾಡಿಕೊಂಡು ಕುಟುಂಬದ ಸದಸ್ಯರೆಲ್ಲರೂ ಜೊತೆಗೆ ಕುಳಿತು ಊಟ ಮಾಡುವ ಸಂಭ್ರಮವೇ ಬೇರೆ. ಇವತ್ತಿನ ನಮ್ಮ ರೆಸಿಪಿಯಲ್ಲಿ ಸುಲಭವಾಗಿ ಮಾವಿನಕಾಯಿ ಚಿತ್ರಾನ್ನ (Mango Lemonrice) ಯಾವ ರೀತಿ ಮಾಡುವುದು ಎಂಬುದನ್ನು ತಿಳಿಸಿಕೊಡುತ್ತಿದ್ದೇವೆ. ಹಾಗಿದ್ರೆ ಇದನ್ನು ಹೇಗೆ ತಯಾರಿಸುವುದು ಎಂಬುದನ್ನು ತಿಳಿದುಕೊಳ್ಳಿ.
Advertisement
ಬೇಕಾಗುವ ಸಾಮಗ್ರಿಗಳು:
ಮಾವಿನಕಾಯಿ – 1 (ತುರಿದಿಟ್ಟುಕೊಂಡದ್ದು)
ಎಣ್ಣೆ – 5-6 ಚಮಚ
ಹಸಿಮೆಣಸಿನಕಾಯಿ – 4-5
ಕಡಲೆಕಾಯಿ ಬೀಜ – 4 ಚಮಚ
ಕೊತ್ತಂಬರಿ ಸೊಪ್ಪು – ಸ್ವಲ್ಪ
ಕರಿಬೇವಿನ ಸೊಪ್ಪು – ಸ್ವಲ್ಪ
Advertisement
Advertisement
ಒಗ್ಗರಣೆಗೆ ಬೇಕಾಗುವ ಸಾಮಗ್ರಿಗಳು:
ಸಾಸಿವೆ – ಅಗತ್ಯಕ್ಕೆ ತಕ್ಕಷ್ಟು
ಅರಿಶಿನ ಪುಡಿ – ಅಗತ್ಯಕ್ಕೆ ತಕ್ಕಷ್ಟು
ಜೀರಿಗೆ -1 ಚಮಚ
ಕಡ್ಲೆಬೇಳೆ -2 ಚಮಚ
ಉದ್ದಿನಬೇಳೆ – 2 ಚಮಚ
ಉಪ್ಪು- ರುಚಿಗೆ ತಕ್ಕಷ್ಟು
Advertisement
ಮಾಡುವ ವಿಧಾನ:
* ಮೊದಲಿಗೆ ಬಾಣಲೆಗೆ 4 ಚಮಚ ಎಣ್ಣೆ ಹಾಕಿ, ಎಣ್ಣೆ ಬಿಸಿಯಾದ ಮೇಲೆ ಸಾಸಿವೆ ಹಾಕಿ ಸಿಡಿಸಿ.
* ಬಳಿಕ ಅದಕ್ಕೆ ಜೀರಿಗೆ, ಕಡ್ಲೆಬೇಳೆ, ಉದ್ದಿನಬೇಳೆಯನ್ನೂ ಸೇರಿಸಿ ಹೊಂಬಣ್ಣ ಬರುವವರೆಗೆ ಹುರಿದುಕೊಳ್ಳಿ.
* ಈಗ ಇದಕ್ಕೆ ಸಣ್ಣಗೆ ಹೆಚ್ಚಿಟ್ಟುಕೊಂಡ ಹಸಿ ಮೆಣಸಿನಕಾಯಿ, ಕರಿಬೇವಿನ ಸೊಪ್ಪು ಹಾಕಿ ಬಾಡಿಸಿಕೊಳ್ಳಿ. ಈಗ ಉಪ್ಪು ಸೇರಿಸಿ ತುರಿದಿಟ್ಟ ಮಾವಿನಕಾಯಿಯನ್ನು ಹಾಕಿ 1 ನಿಮಿಷಗಳ ಕಾಲ ಬಿಸಿ ಮಾಡಿಕೊಳ್ಳಿ.
* ನಂತರ ಅರಿಶಿನ ಪುಡಿ ಸೇರಿಸಿಕೊಂಡು ಚನ್ನಾಗಿ ಮಿಕ್ಸ್ ಮಾಡಿಕೊಂಡ ನಂತರ ಗ್ಯಾಸ್ ಆಫ್ ಮಾಡಿ.
* ಈಗ ಚಿಕ್ಕ ಕಡಾಯಿಯಲ್ಲಿ 1 ಚಮಚ ಎಣ್ಣೆ ಹಾಕಿಕೊಂಡು ಕಡ್ಲೆಬೀಜಗಳನ್ನು ಬಣ್ಣ ಬದಲಾಗುವ ತನಕ ಹುರಿದುಕೊಂಡು ಬಾಣಲೆಗೆ ಸೇರಿಸಿಕೊಂಡು ಸಣ್ಣಗೆ ಹೆಚ್ಚಿಕೊಂಡ ಕೊತ್ತಂಬರಿ ಸೊಪ್ಪನ್ನು ಸೇರಿಸಿ.
* ನಂತರ ಅರ್ಧ ಕೆಜಿಯಷ್ಟು ಉದುರುದುರಾಗಿ ಬೇಯಿಸಿಕೊಂಡಿರುವ ಅನ್ನವನ್ನು ಈ ಮಿಶ್ರಣಕ್ಕೆ ಸೇರಿಸಿಕೊಂಡು ಚೆನ್ನಾಗಿ ಮಿಶ್ರ ಮಾಡಿಕೊಂಡರೆ ಮಾವಿನಕಾಯಿ ಚಿತ್ರಾನ್ನ ಸವಿಯಲು ಸಿದ್ಧ.