ಯಾವುದೇ ವಿಶೇಷವಿಲ್ಲ. ಆದರೂ ರುಚಿಯಾಗಿ ಎನಾದರೂ ತಿನ್ನಬೇಕು ಅನ್ನಿಸುತ್ತದೆ. ಇಂದು ಸಿಹಿಯಾಗಿ ಏನಾದರೂ ಮಾಡಿ ತಿಂದರೆ ಚೆನ್ನಾಗಿರುತ್ತದೆ. ಹೀಗಾಗಿ ನೀವು ಇಂದು ಸುಲಭವಾಗಿ ಮತ್ತು ರುಚಿಯಾಗಿ ಫಟಾ ಫಟ್ ಎಂದು ತಯಾರಿಸುವ ಹೆಸರುಬೆಳೆ ಪಾಯಸ ಮಾಡಿ ಸವಿಯಿರಿ.
Advertisement
ಬೇಕಾಗುವ ಸಾಮಗ್ರಿಗಳು:
* ಹೆಸರುಬೇಳೆ – 1ಕಪ್
* ಸಬ್ಬಕ್ಕಿ – 1ಕಪ್
* ಬೆಲ್ಲ- 2 ಕಪ್
* ಒಣದ್ರಾಕ್ಷಿ, ಗೋಡಂಬಿ, ಬಾದಾಮಿ- ಸ್ವಲ್ಪ
* ಏಲಕ್ಕಿ 4 (ಕುಟ್ಟಿ ಪುಡಿ ಮಾಡಿದ್ದು)
* ತುಪ್ಪ- ಅರ್ಧ ಕಪ್
* ಹಾಲು- 2 ಕಪ್ ಇದನ್ನೂ ಓದಿ: ಮಂಗಳೂರು ಸ್ಟೈಲ್ ಚಿಕನ್ ಸುಕ್ಕಾ ಮಾಡೋ ಸುಲಭ ವಿಧಾನ
Advertisement
ಮಾಡುವ ವಿಧಾನ:
Advertisement
* ಸಬ್ಬಕ್ಕಿಯನ್ನು ಅರ್ಧ ಗಂಟೆಗಳ ಕಾಲ ನೆನೆಸಿಡಿ. ನಂತರ ಹೆಸರುಬೇಳೆ ತೊಳೆದು ಇಟ್ಟುಕೊಳ್ಳಬೇಕು.
* ಈಗ ಸ್ಟವ್ ಮೇಲೆ ಕುಕ್ಕರ್ ಇರಿಸಿ ಅದಕ್ಕೆ ತುಪ್ಪ ಹಾಕಿ. ಅದಕ್ಕೆ ಹೆಸರುಬೇಳೆ ಹಾಕಿ ಕೆಂಬಣ್ಣ ಬರುವವರೆಗೂ ಹುರಿದುಕೊಳ್ಳಿ.
Advertisement
* ಇದಕ್ಕೆ 2ಕಪ್ ನೀರು ಸೇರಿಸಿ. ನಂತರ ಅದಕ್ಕೆ ನೆನೆದ ಸಬ್ಬಕ್ಕಿ ಹಾಕಿ 4 ವಿಷಲ್ ಕೂಗಿಸಿ.
* ಈಗ ಪಾತ್ರೆಯೊಂದಕ್ಕೆ ಬೆಲ್ಲ, 1 ಕಪ್ ನೀರು ಹಾಕಿ ಕರಗಿಸಿಕೊಳ್ಳಿ.
* ಈಗ ಕುಕ್ಕರ್ಗೆ ಹಾಲು, ಕರಗಿಸಿದ ಬೆಲ್ಲ ನೀರು, ಏಲಕ್ಕಿ ಪುಡಿ, ಸೇರಿಸಿ ಮಿಶ್ರಣ ಮಾಡಿ.
* ಈಗ ತುಪ್ಪದಲ್ಲಿ ಒಣ ದ್ರಾಕ್ಷಿ, ಗೋಡಂಬಿ, ಬಾದಾಮಿ ಹುರಿದು ಪಾಯಸಕ್ಕೆ ಸೇರಿಸಿ ಚೆನ್ನಾಗಿ ಕುದಿಸಿದರೆ ರುಚಿಯಾದ ಪಾಯಸ ಸವಿಯಲು ಸಿದ್ಧವಾಗುತ್ತದೆ.