ಡೆಹ್ರಾಡೂನ್: ಉತ್ತರಕಾಶಿಯ (Uttarkashi) ಸಿಲ್ಕ್ಯಾರಾ ಸುರಂಗದಲ್ಲಿ (Tunnel Collapse) ಕಳೆದ 13 ದಿನಗಳಿಂದ ಸಿಲುಕಿರುವ 41 ಕಾರ್ಮಿಕರನ್ನು ಹೇಗೆ ಸುರಕ್ಷಿತವಾಗಿ ಹೊರಕರೆತರಲಾಗುವುದು ಎಂಬುದನ್ನು ಪ್ರಾತ್ಯಕ್ಷಿಕೆ ಮೂಲಕ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ ತೋರಿಸಿದೆ. ಅದರ ವಿಡಿಯೋವನ್ನು ಹಂಚಿಕೊಳ್ಳಲಾಗಿದೆ.
ಕಾರ್ಮಿಕರನ್ನು ಸುರಕ್ಷಿತವಾಗಿ ಹೊರತರುವುದಕ್ಕೆ ಮಾರ್ಗ ಸಿದ್ಧಪಡಿಸಲು ಅವಶೇಷಗಳ ಮೂಲಕ ಪೈಪ್‌ಲೈನ್ ಹಾಕಲಾಗಿದೆ. ಅದರ ಮೂಲಕ ಗಾಲಿ ಸ್ಟ್ರೆಚರ್‌ಗಳಲ್ಲಿ (wheeled stretchers) ಒಬ್ಬೊಬ್ಬರಾಗಿ ಕಾರ್ಮಿಕರನ್ನು ಹೊರಕ್ಕೆ ಕರೆತರಲಾಗುವುದು ಎಂದು ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (NDRF) ಸಿಬ್ಬಂದಿ ತಿಳಿಸಿದ್ದಾರೆ. ಇದನ್ನೂ ಓದಿ: ತಾಂತ್ರಿಕ ಅಡಚಣೆ – ಉತ್ತರಕಾಶಿ ಸುರಂಗದಲ್ಲಿ ಸಿಲುಕಿದವರ ರಕ್ಷಣೆ ವಿಳಂಬ
Advertisement
#WATCH | | Uttarkashi (Uttarakhand) tunnel rescue: NDRF demonstrates the movement of wheeled stretchers through the pipeline, for the rescue of 41 workers trapped inside the Silkyara Tunnel once the horizontal pipe reaches the other side. pic.twitter.com/mQcvtmYjnk
— ANI (@ANI) November 24, 2023
Advertisement
ಕಾರ್ಮಿಕರನ್ನು ಸುರಕ್ಷಿತವಾಗಿ ಹೇಗೆ ಕರೆತರಲಾಗುತ್ತದೆ ಎಂಬುದನ್ನು ಪ್ರಾತ್ಯಕ್ಷಿಕೆ ಮಾಡಿರುವ ವಿಡಿಯೋವನ್ನು ಹಂಚಿಕೊಂಡಿದೆ. ಅವಶೇಷಗಳ ಮೂಲಕ ಹಾಕಿರುವುದು ವೆಲ್ಡಿಂಗ್ ಮಾಡಿರುವ ಪೈಪ್‌ಲೈನ್. ಎನ್‌ಡಿಆರ್‌ಎಫ್ ಸಿಬ್ಬಂದಿ, ಗಾಲಿ ಸ್ಟ್ರೆಚರ್ ಅನ್ನು ಹಗ್ಗದಿಂದ ಎಳೆಯುವಾಗ ಕಾರ್ಮಿಕರ ಕೈಕಾಲುಗಳಿಗೆ ವೆಲ್ಡಿಂಗ್ ಭಾಗದ ಪೈಪ್‌ಲೈನ್ ತಾಗಿ ಗಾಯಗಳಾಗದಂತೆ ನೋಡಿಕೊಳ್ಳಲು, ಅವರು ಸ್ಟ್ರೆಚರ್‌ನಲ್ಲಿ ಮಲಗುವಂತೆ ಮಾಡಲಾಗುವುದು ಎಂದು ಅಧಿಕಾರಿಗಳು ಮಾಹಿತಿ ನೀಡಿದ್ದಾರೆ.
Advertisement
ಉತ್ತರಾಖಂಡದ ಸಿಲ್ಕ್ಯಾರಾ ಸುರಂಗದಲ್ಲಿ ಸಿಲುಕಿರುವ 41 ಕಾರ್ಮಿಕರ ರಕ್ಷಣಾ ಕಾರ್ಯಾಚರಣೆಯು ಈಗ ಅಂತಿಮ ಹಂತ ತಲುಪಿದೆ. ಸದ್ಯ ಎಲ್ಲಾ ಕಾರ್ಮಿಕರು ಸುರಕ್ಷಿತವಾಗಿದ್ದು, ಉಕ್ಕಿನ ಪೈಪ್‌ಗಳ ಮೂಲಕ ಆಹಾರ ಮತ್ತು ನೀರನ್ನು ಸರಬರಾಜು ಮಾಡಲಾಗುತ್ತಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಇದನ್ನೂ ಓದಿ: ಸುರಂಗದಲ್ಲಿ ಸಿಲುಕಿದವರ ಹೊರತರಲು ಕ್ಷಣಗಣನೆ – ಆರೈಕೆಗೆ ಆಸ್ಪತ್ರೆ ರೆಡಿ
Advertisement
ನಿರ್ಮಾಣ ಹಂತದಲ್ಲಿರುವ ಸುರಂಗವು ಮಹತ್ವಾಕಾಂಕ್ಷೆಯ ಚಾರ್ ಧಾಮ್ ಯೋಜನೆಯ ಭಾಗವಾಗಿದೆ. ಇದು ಹಿಂದೂ ಯಾತ್ರಾ ಸ್ಥಳಗಳಾದ ಬದರಿನಾಥ್, ಕೇದಾರನಾಥ, ಗಂಗೋತ್ರಿ ಮತ್ತು ಯಮುನೋತ್ರಿಗಳಿಗೆ ಸಂಪರ್ಕವನ್ನು ಹೆಚ್ಚಿಸಲು ರಾಷ್ಟ್ರೀಯ ಮೂಲಸೌಕರ್ಯ ಉಪಕ್ರಮವಾಗಿದೆ.