ನವದೆಹಲಿ: ಯುನೆಸ್ಕೊ (UNESCO) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಕರ್ನಾಟಕದ ಹೊಯ್ಸಳ ದೇವಾಲಯಗಳನ್ನು (Hoysala Temples Karnataka) ಸೇರ್ಪಡೆ ಮಾಡಲಾಗಿದೆ.
ಈ ವಿಚಾರವನ್ನು ವಿಶ್ವಸಂಸ್ಥೆಯು ಸಾಮಾಜಿಕ ಜಾಲತಾಣ ಎಕ್ಸ್‌ನಲ್ಲಿ ಪೋಸ್ಟ್ ಮಾಡಿದೆ. ಹೊಯ್ಸಳರ ಕಾಲದ ಪವಿತ್ರ ದೇವಾಲಯಗಳು. ಯುನೆಸ್ಕೊ ವಿಶ್ವ ಪಾರಂಪರಿಕ ತಾಣಗಳ ಪಟ್ಟಿ ಸೇರಿವೆ. ಭಾರತಕ್ಕೆ ಅಭಿನಂದನೆಗಳು ಎಂದು ಪೋಸ್ಟ್‌ನಲ್ಲಿ ಬರೆದುಕೊಂಡಿದೆ. ಇದನ್ನೂ ಓದಿ: ಹಳೆ ಸಂಸತ್ ಭವನಕ್ಕೆ ಬೀಳ್ಕೊಡುಗೆ – ನೆಹರೂ ಸ್ಮರಿಸಿದ ಪ್ರಧಾನಿ ಮೋದಿ
Advertisement
????BREAKING!
Just inscribed on the @UNESCO #WorldHeritage List: Sacred Ensembles of the Hoysalas, #India ????????. Congratulations! ????????
➡️ https://t.co/69Xvi4BtYv #45WHC pic.twitter.com/Frc2IGlTkf
— UNESCO ????️ #Education #Sciences #Culture ???????? (@UNESCO) September 18, 2023
Advertisement
ಕರ್ನಾಟಕದ ಬೇಲೂರು, ಹಳೇಬೀಡು ಮತ್ತು ಸೋಮನಾಥಪುರದ ಪ್ರಸಿದ್ಧ ಹೊಯ್ಸಳ ದೇವಾಲಯಗಳನ್ನು ವಿಶ್ವಸಂಸ್ಥೆಯ ಶೈಕ್ಷಣಿಕ, ವೈಜ್ಞಾನಿಕ ಮತ್ತು ಸಾಂಸ್ಕೃತಿಕ ಸಂಸ್ಥೆ (ಯುನೆಸ್ಕೊ) ವಿಶ್ವ ಪಾರಂಪರಿಕ ತಾಣಗಳ ಪಟ್ಟಿಗೆ ಸೇರಿಸಲಾಗಿದೆ.
Advertisement
ಹೊಯ್ಸಳ ದೇವಾಲಯಗಳು, ಏಪ್ರಿಲ್ 2014 ರಿಂದಲೂ ಯುನೆಸ್ಕೊದ ತಾತ್ಕಾಲಿಕ ಪಟ್ಟಿಯಲ್ಲಿದ್ದವು. ಜನವರಿ 2022 ರಲ್ಲಿ, 2022-23 ಕ್ಕೆ ವಿಶ್ವ ಪಾರಂಪರಿಕ ತಾಣವಾಗಿ ಪರಿಗಣಿಸಲು ಭಾರತದಿಂದ ನಾಮನಿರ್ದೇಶನ ಮಾಡಲಾಗಿತ್ತು. ಸರ್ಕಾರದ ಮನವಿಗೆ ಒಪ್ಪಿ ಈಗ ಯುನೆಸ್ಕೊ ಪಟ್ಟಿಗೆ ಸೇರ್ಪಡೆ ಮಾಡಿದೆ.
Advertisement
ಈ ಮೂರು ಹೊಯ್ಸಳ ದೇವಾಲಯಗಳು ಈಗಾಗಲೇ ಭಾರತೀಯ ಪುರಾತತ್ವ ಸರ್ವೇಕ್ಷಣೆಯ (ASI) ರಕ್ಷಿತ ಸ್ಮಾರಕಗಳಾಗಿವೆ. ಇದನ್ನೂ ಓದಿ: ಕರ್ನಾಟಕ ಸರ್ಕಾರಕ್ಕೆ ಮತ್ತೆ ಕಾವೇರಿ ಶಾಕ್ – ತ.ನಾಡಿಗೆ ಪ್ರತಿದಿನ 5,000 ಕ್ಯೂಸೆಕ್ ನೀರು ಹರಿಸಲು ಆದೇಶ
Web Stories