ಶಿಮ್ಲಾ: ಮೂರೂವರೆ ವರ್ಷದ ಕಂದಮ್ಮನ ಮೇಲೆ ಕಾಮುಕನೊಬ್ಬ ಅತ್ಯಾಚಾರವೆಸಗಿದ ಘಟನೆ ಹಿಮಾಚಲಪ್ರದೇಶದಲ್ಲಿ ಸೋಮವಾರ ನಡೆದಿದೆ.
ಪ್ರಕರಣ ಸಂಬಂಧ ಇದೀಗ ಸ್ಥಳೀಯ ಪೊಲೀಸರು 25 ವರ್ಷದ ಬಂಟಿ ಎಂಬಾತನನ್ನು ಬಂಧಿಸಿದ್ದಾರೆ. ಘಟನೆ ಸಂಬಂಧ ಬಾಲಕಿಯ ಪೋಷಕರು ಹರಿಪುರ ಪೊಲೀಸ್ ಠಾಣೆಗೆ ತೆರಳಿ ದೂರು ದಾಖಲಿಸಿದ ಬಳಿಕ ಬೆಳಕಿಗೆ ಬಂದಿದೆ.
ಕೂಡಲೇ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿದ ಪೊಲೀಸರು ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಸದ್ಯ ಬಾಲಕಿಯ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿ, ಹೆಚ್ಚಿನ ಪರೀಕ್ಷೆಗಾಗಿ ತಂಡಾ ಮೆಡಿಕಲ್ ಕಾಲೇಜು ಹಾಗೂ ಆಸ್ಪತ್ರೆಗೆ ದಾಖಲಿಸಲಾಗಿದೆ.
ಇತ್ತ ಆರೋಪಿ ವಿರುದ್ಧ ಐಪಿಸಿ ಸೆಕ್ಷನ್ 376(ಅತ್ಯಾಚಾರ) ರ ಅಡಿಯಲ್ಲಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ.