ಬೆಂಗಳೂರು: ನಾನು ಐಐಟಿ ಪ್ರೊಫೆಸರ್ ಅಲ್ಲ. ಸಚಿವ ಬಿ.ಸಿ ನಾಗೇಶ್ ಅವರು ಬಾಯಿ ತಪ್ಪಿ ಹೇಳಿದ್ದಾರೆ ಎಂದು ಪಠ್ಯ ಪರಿಷ್ಕರಣೆ ಸಮಿತಿ ಅಧ್ಯಕ್ಷ ರೋಹಿತ್ ಚಕ್ರತೀರ್ಥ ಸ್ಪಷ್ಟನೆ ನೀಡಿದ್ದಾರೆ.
Advertisement
ಪಠ್ಯ ಪರಿಷ್ಕರಣೆ ವಿವಾದ ಸಂಬಂಧ ಪಬ್ಲಿಕ್ ಟಿವಿ ಜೊತೆ ಎಕ್ಸ್ ಕ್ಲೂಸಿವ್ ಆಗಿ ಮಾತನಾಡಿದ ಅವರು, ಉಪನ್ಯಾಸಕನಾಗಿ ನಾನು ನನ್ನ ವೃತ್ತಿ ಜೀವನ ಆರಂಭಿಸಿದ್ದೇನೆ. ಕಳೆದ 10-15 ವರ್ಷಗಳಿಂದ ನಾನು ಶಿಕ್ಷಣ ಕ್ಷೇತ್ರದಲ್ಲಿಯೇ ಇದ್ದೇನೆ. ಶಿಕ್ಷಣ ಸಚಿವರು ಮಾತಿನ ಭರದಲ್ಲಿ ಬಾಯಿ ತಪ್ಪಿ ಹೇಳಿದ್ದಾರೆ ಎಂದು ತಿಳಿಸಿದರು. ಇದನ್ನೂ ಓದಿ: ವೀಸಾ ಹಗರಣ – ಕಾರ್ತಿ ಚಿದಂಬರಂಗೆ ನಿರೀಕ್ಷಣಾ ಜಾಮೀನು ನಿರಾಕರಿಸಿದ ಕೋರ್ಟ್
Advertisement
Advertisement
ನಾನು ನನ್ನ ವೃತ್ತಿ ಜೀವನ ಪ್ರಾರಂಭಿಸಿದಾಗಿನಿಂದ ಐಐಟಿ ಪ್ರವೇಶ ಪರೀಕ್ಷೆಗಳಿಗೆ ತರಬೇತಿ ಕೊಡುತ್ತಿದ್ದೆ. ಮಕ್ಕಳಿಗೆ ಐಐಟಿ, ಜೆಇಇಗೆ ಬೇಕಾದ ಶಿಕ್ಷಣವನ್ನು ನೀಡುತ್ತಿದ್ದೆ ಎಂದು ಹೇಳಿದರು.
Advertisement
ನನ್ನ ಕೆಲಸ ನಾನು ಮಾಡಿದ್ದೇನೆ. ನನ್ನನ್ನು ಸಮಿತಿಯಿಂದ ವಜಾ ಮಾಡಿದ್ರೂ ಸರಿ. ನನ್ನ ಕೆಲಸ ನನಗೆ ತೃಪ್ತಿ ನೀಡಿದೆ. ನಾನು ಎಲ್ಲದಕ್ಕೂ ಸಿದ್ಧನಿದ್ದೇನೆ ಎಂದು ರೋಹಿತ್ ಚಕ್ರತೀರ್ಥ ಸ್ಪಷ್ಟನೆ ಕೊಟ್ಟರು.