– 30 ಲಕ್ಷ ಮೌಲ್ಯದ ವಸ್ತುಗಳು ಬೆಂಕಿಗಾಹುತಿ
ಬಳ್ಳಾರಿ: ಆಕಸ್ಮಿಕ ಬೆಂಕಿ ತಗುಲಿ ಮೂರು ಅಂಗಡಿಗಳು ಸುಟ್ಟು ಕರಕಲಾಗಿರುವ ಘಟನೆ ಬಳ್ಳಾರಿ (Ballari) ಜಿಲ್ಲೆಯ ಸಂಡೂರು (Sandur) ತಾಲೂಕಿನ ತೋರಣಗಲ್‌ನ ಜಿಂದಾಲ್ ಕಾರ್ಖಾನೆ ಬೈಪಾಸ್ ಬಳಿ ನಡೆದಿದೆ.
ಘಟನೆಯಲ್ಲಿ ಆಟೋಮೊಬೈಲ್ ಶಾಪ್, ಎಲೆಕ್ಟ್ರಿಕಲ್ ಹಾಗೂ ಹೋಟೆಲ್ ಬೆಂಕಿಗಾಹುತಿಯಾಗಿದ್ದು, ಬೆಂಕಿಯ ಕೆನ್ನಾಲೆಗೆ ಸಿಕ್ಕು ಅಂಗಡಿಯಲ್ಲಿನ ವಸ್ತುಗಳೆಲ್ಲವೂ ಸುಟ್ಟು ಕರಕಲಾಗಿವೆ. ಎಲೆಕ್ಟ್ರಿಕ್ ಬ್ಯಾಟರಿಗಳು, ಎಲೆಕ್ಟ್ರಿಕ್ ವಸ್ತುಗಳು ಹಾಗೂ ಹೋಟೆಲ್‌ನ ಫ್ರಿಜ್, ಟೇಬಲ್, ಚೇರ್ ಸೇರಿ ಅಂದಾಜು 30 ಲಕ್ಷದ ವಸ್ತುಗಳು ಬೆಂಕಿಗಾಹುತಿಯಾಗಿವೆ. ಇದನ್ನೂ ಓದಿ: Hand Luggage On Flights | ಇನ್ಮುಂದೆ 7 ಕೆಜಿ ಮೀರದ ಕೇವಲ 1 ಬ್ಯಾಗ್‌ಗೆ ಮಾತ್ರ ಅನುಮತಿ
ಇನ್ನೂ ಬೆಂಕಿ ತಗುಲಿ ದಟ್ಟ ಹೊಗೆ ಆವರಿಸಿದರಿಂದ ಸ್ಥಳೀಯರು ಆತಂಕಕ್ಕೆ ಒಳಗಾಗಿದ್ದರು. ಮಾಹಿತಿ ತಿಳಿದು ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಬರುವಷ್ಟರಲ್ಲಿ ಮೂರೂ ಅಂಗಡಿಗಳು ಸುಟ್ಟು ಕರಕಲಾಗಿದ್ದವು. ಘಟನೆ ಸಂಬಂಧ ತೋರಣಗಲ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಕೋಲಾರದ ರಾಜಕೀಯ ವ್ಯಕ್ತಿಯಿಂದ ಥಾರ್ ಗಿಫ್ಟ್ – ʼಮೈಸೂರ್‌ಪಾಕ್ʼ ಖೆಡ್ಡಾಕ್ಕೆ ಕೆಡವಲು ಶ್ವೇತಾ ಪ್ಲ್ಯಾನ್!