BollywoodCinemaLatestNational

ಯುವ ನಟನೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ ಹೃತಿಕ್ ರೋಶನ್!

ಮುಂಬೈ: ಹೃತಿಕ್ ರೋಶನ್ ಯುವ ನಟನೊಂದಿಗೆ ತೆರೆ ಹಂಚಿಕೊಳ್ಳಲಿದ್ದಾರೆ. ಅದು ಬೇರೆ ಯಾರೂ ಅಲ್ಲ ಟೈಗರ್ ಶ್ರಾಫ್. ಇಬ್ಬರು ಅದ್ಭುತವಾದ ಡ್ಯಾನ್ಸರ್ ಆಗಿದ್ದು ಚಿತ್ರದಲ್ಲಿ ಜೊತೆಯಾಗಿ ನಟಿಸುತ್ತಿದ್ದಾರೆ.

Hrithik Roshan and Tiger Shroof 2

 

ಬ್ಯಾಂಗ್ ಬ್ಯಾಂಗ್ ಚಿತ್ರದ ನಿರ್ದೇಶಕ ಸಿದ್ಧಾರ್ಥ್ ಆನಂದ್ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಈ ಚಿತ್ರದಲ್ಲಿ ನಟಿಸುತ್ತಿರುವ ಬಗ್ಗೆ ಯಶ್ ರಾಜ್ ಫಿಲ್ಮಂ, ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ತಮ್ಮ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ.

Hrithik Roshan and Tiger Shroof 3

ಚಿತ್ರದಲ್ಲಿ ಜೊತೆಯಾಗಿ ನಟಿಸುವುದರ ಬಗ್ಗೆ ಹೃತಿಕ್ ರೋಶನ್ ಮತ್ತು ಟೈಗರ್ ಶ್ರಾಫ್ ಟ್ವಿಟ್ಟರ್ ನಲ್ಲಿ ಹೇಳಿಕೊಂಡಿದ್ದಾರೆ. ಈ ಚಿತ್ರದಲ್ಲಿ ಅಪಾಯಕಾರಿ ಸ್ಟಂಟ್ ಗಳು ಮತ್ತು ಅದ್ಭುತ ಡ್ಯಾನ್ಸ್ ಗಳಿವೆ ಎಂದು ಮೂಲಗಳ ಪ್ರಕಾರ ತಿಳಿದು ಬಂದಿದೆ.

Hrithik Roshan and Tiger Shroof

ಈ ಚಿತ್ರದ ಬಗ್ಗೆ ಯಾವುದೇ ಅಧಿಕೃತ ಮಾಹಿತಿಯನ್ನು ಚಿತ್ರತಂಡ ಬಿಟ್ಟುಕೊಟ್ಟಿಲ್ಲ. ಈ ಚಿತ್ರ ನಮಗೆ ಧೂಮ್ ಚಿತ್ರದ ಅನುಭವ ನೀಡುತ್ತದೆ ಎಂದು ಹೇಳಲಾಗುತ್ತಿದೆ. ಈ ಚಿತ್ರ ಜನವರಿ 25, 2019ರಂದು ಬಿಡುಗಡೆಯಾಗಲಿದೆ.

Related Articles

Leave a Reply

Your email address will not be published. Required fields are marked *