ಧಾರವಾಡ: ಇತ್ತೀಚಿನ ದಿನಗಳಲ್ಲಿ ಚಿಕ್ಕಮಕ್ಕಳಿಂದ ಹಿಡಿದು ಎಲ್ಲ ವಯೋಮಾನದವರಲ್ಲಿ ಹೃದಯಾಘಾತ (Heart Attack) ಕಾಣಿಸಿಕೊಂಡು ಸಾವನ್ನಪ್ಪುತ್ತಿರುವವರ ಸಂಖ್ಯೆ ಹೆಚ್ಚಾಗಿದೆ. ಹಾಗಾಗಿ ಸಾವಿನ ಪ್ರಮಾಣ ಕಡಿಮೆ ಮಾಡುವ ಉದ್ದೇಶದಿಂದ ರಾಜ್ಯ ಸರ್ಕಾರ ದಿ. ಪುನೀತ್ ರಾಜಕುಮಾರ್ (Puneeth Rajkumar) ಅವರ ಹೆಸರಿನಲ್ಲಿ ವಿನೂತನ ಯೋಜನೆಯೊಂದನ್ನು ಜಾರಿಗೆ ತಂದಿದೆ.
Advertisement
ರಾಜ್ಯ ಸರ್ಕಾರ ಡಾ.ಪುನೀತ್ ರಾಜಕುಮಾರ್ ಅವರ ಹೆಸರಿನಲ್ಲಿ ʻಹೃದಯ ಜ್ಯೋತಿʼ (Hrudaya Jyoti) ಯೋಜನೆ ಜಾರಿಗೆ ತಂದಿದ್ದು, 2ನೇ ಹಂತದ ಈ ಯೋಜನೆಗೆ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರು ಧಾರವಾಡದ ಡಾ.ವೀರೇಂದ್ರ ಹೆಗ್ಗಡೆ ಕಲಾಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಕಾರ್ಯಕ್ರಮದಲ್ಲಿ ಚಾಲನೆ ನೀಡಿದರು. ಇದನ್ನೂ ಓದಿ: ಮೈಸೂರು ಕಾಂಗ್ರೆಸ್ ಅಭ್ಯರ್ಥಿ ಇಂದೇ ಅಂತಿಮ? – ಯದುವೀರ್ ವಿರುದ್ಧ ಯಾರು ಕಣಕ್ಕೆ?
Advertisement
Advertisement
ಹೃದಯಾಘಾತವಾದ ಕೆಲವೇ ಸಮಯದಲ್ಲಿ ಬಡವರಿಗೂ ಲಭ್ಯವಾಗುವ ರೀತಿಯಲ್ಲಿ ಎಲ್ಲ ತಾಲೂಕು ಹಾಗೂ ಜಿಲ್ಲಾ ಆಸ್ಪತ್ರೆಗಳಲ್ಲಿ 28,000 ರೂ. ಮೌಲ್ಯದ Tenecteplase ಇಂಜಕ್ಷನ್ ಅನ್ನು ಉಚಿತವಾಗಿ ನೀಡುವ ಯೋಜನೆ ಇದಾಗಿದೆ. ಹೃದಯಾಘಾತವಾದ ಕೆಲ ಸಮಯದಲ್ಲಿ ತಕ್ಷಣ ಇಸಿಜಿ ಮಾಡುವ ಸ್ಟೆಮಿ ಕಿಟ್ ಅನ್ನೂ ಈ ಯೋಜನೆಯಡಿ ನೀಡಲಾಗುತ್ತಿದೆ. ಇಡೀ ದೇಶದಲ್ಲೇ ಇದೇ ಮೊದಲ ಬಾರಿಗೆ ಕರ್ನಾಟಕ ಸರ್ಕಾರದಿಂದ ಈ ಯೋಜನೆ ಜಾರಿ ಮಾಡಲಾಗಿದೆ.
Advertisement
ಈಗಾಗಲೇ ರಾಜ್ಯದ 15 ಜಿಲ್ಲೆಯ 71 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿ ಮಾಡಲಾಗಿದೆ. 2ನೇ ಹಂತದಲ್ಲಿ ದಕ್ಷಿಣ ಕನ್ನಡ, ಬೆಳಗಾವಿ, ದಾವಣಗೆರೆ, ಶಿವಮೊಗ್ಗ, ಧಾರವಾಡ, ಬಾಗಲಕೋಟೆ ಸೇರಿದಂತೆ 36 ತಾಲೂಕು ಆಸ್ಪತ್ರೆಗಳಲ್ಲಿ ಈ ಯೋಜನೆ ಜಾರಿಗೊಳಿಸಲಾಗಿದ್ದು, ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಈ ಯೋಜನೆ ಜಾರಿಯಾಗಲಿದೆ ಎಂದು ಆರೋಗ್ಯ ಸಚಿವ ದಿನೇಶ ಗುಂಡೂರಾವ್ ತಿಳಿಸಿದರು. ಇದನ್ನೂ ಓದಿ: ರಾಜಕೀಯ ಪಕ್ಷಗಳಿಗೆ 1,368 ಕೋಟಿ ನೀಡಿದ ಲಾಟರಿ ಕಿಂಗ್ ಪಿನ್ ಮಾರ್ಟಿನ್ ಯಾರು?
ಹೃದಯಾಘಾತವಾದ ವ್ಯಕ್ತಿಗೆ Tenecteplase ಇಂಜಕ್ಷನ್ ನೀಡಿದರೇ ವ್ಯಕ್ತಿ ಬದುಕುವಂತೆ ಮಾಡುತ್ತದೆ, ನಂತರ ಆ ವ್ಯಕ್ತಿಗೆ ಮುಂದಿನ ಚಿಕಿತ್ಸೆ ನೀಡಬಹುದಾಗಿದೆ. ಇಂತಹ ಇಂಜಕ್ಷನ್ ಬಡವರಿಗೂ ಸಿಗಲಿ ಎಂದು ಈ ಯೋಜನೆ ಜಾರಿ ಮಾಡಲಾಗಿದೆ. ಬರುವ ದಿನಗಳಲ್ಲಿ ಈ ಇಂಜಕ್ಷನ್ ಅನ್ನು ರೈಲು ನಿಲ್ದಾಣ, ವಿಮಾನ ನಿಲ್ದಾಣಗಳಲ್ಲೂ ಇಡುವ ಯೋಜನೆ ಸರ್ಕಾರದ ಮುಂದೆ ಇದೆ ಎಂದು ಆರೋಗ್ಯ ಸಚಿವರು ಹೇಳಿದ್ದಾರೆ.