ಕೋಲಾರ: ಒಂದು ವರ್ಷದಲ್ಲಿ ಎತ್ತಿನ ಹೊಳೆ ನೀರು ಕೊಟ್ಟರೆ ತಲೆ ಬೋಳಿಸಿಕೊಳ್ಳುವೆ ಎಂದಿದ್ದೆ. ಅಂದು ತಲೆ ತುಂಬಾ ಕೂದಲಿತ್ತು, ಇಂದು ಇಲ್ಲವಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ ಕುಮಾರಸ್ವಾಮಿ ವ್ಯಂಗ್ಯವಾಡಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಿದ್ದರಾಮಯ್ಯ ಮಾತ್ರ ಬ್ರಿಲಿಯಂಟ್ ಅಲ್ಲ. ನನಗೂ ಜ್ಞಾಪಕ ಶಕ್ತಿ ಇದೆ. ನಾನು ಅಂದೆ ಹೇಳಿದ್ದೆ ಕೋಲಾರಕ್ಕೆ ಒಂದು ವರ್ಷದಲ್ಲಿ ಎತ್ತಿನಹೊಳೆ ನೀರು ಬಂದರೆ ತಲೆ ಬೋಳಿಸಿಕೊಳ್ಳುವೆ ಎಂದಿದ್ದೆ. 2014ರಲ್ಲಿ ಅಡಿಪಾಯ ಹಾಕಿ ಇದುವರೆಗೂ ನೀರು ಕೊಟ್ಟಿಲ್ಲ. ಇನ್ನೂ 50 ವರ್ಷ ಆದರೂ ರಾಷ್ಟ್ರೀಯ ಪಕ್ಷಗಳಿಂದ ನೀರು ಕೊಡಲು ಆಗಿಲ್ಲ ಎಂದು ಟೀಕಿಸಿದರು.
ನಾಳೆ ಎಸ್‍ಎಸ್‍ಎಸ್‍ಎಲ್‍ಸಿ ಪರೀಕ್ಷೆ ವಿಚಾರವಾಗಿ ಮಾತನಾಡಿ, ಯಾವುದೆ ಸಮಾಜದ ಮಕ್ಕಳಾಗಲಿ ಮುಕ್ತವಾಗಿ ಪರೀಕ್ಷೆ ಬರೆಯಲು ಅನುವು ಮಾಡಿಕೊಡಬೇಕು. ಮಕ್ಕಳ ಭವಿಷ್ಯದ ದೃಷ್ಟಿಯಿಂದ ಅವರೆಲ್ಲರನ್ನ ವಿಶ್ವಾಸಕ್ಕೆ ತೆಗೆದುಕೊಳ್ಳಬೇಕು. ವ್ಯಾಪಾರಕ್ಕೆ ನಿರ್ಬಂಧ ವಿಚಾರ, ದೇಶವನ್ನು ಎಲ್ಲಿಗೆ ಕೊಂಡೊಯ್ಯುತ್ತಿದ್ದಾರೆ ಎಂದು ಬಿಜೆಪಿಗೆ ಟಾಂಗ್ ನೀಡಿದರು.
ರಾಜ್ಯಕ್ಕೆ ಈ ರೀತಿಯ ಪರಿಸ್ಥಿತಿ ಬರುತ್ತೆ ಎಂದು ನಾನು ಊಹಿಸಿರಲಿಲ್ಲ. ಶಾಲಾ ಮಕ್ಕಳಲ್ಲಿ ವಿಷ ಬೀಜ ಬಿತ್ತಲಾಗುತ್ತಿದೆ. ಸಿದ್ದರಾಮಯ್ಯ ಬಗ್ಗೆ ಮಾತನಾಡುವ ಅವಶ್ಯಕತೆ ಇಲ್ಲ. ಆದರೂ ರಾಜ್ಯದ ಇವತ್ತಿನ ಪರಿಸ್ಥಿತಿಗೆ ಅವರೆ ಕಾರಣ. ಮೈತ್ರಿ ಸರ್ಕಾರದ ಉಳಿವಿಗಾಗಿ ನಮಗೆ ಇಷ್ಟವಿಲ್ಲದಿದ್ದರೂ ಪ್ರಯತ್ನ ಪಟ್ಟೆ. ಕಾಂಗ್ರೆಸ್, ಬಿಜೆಪಿ ಎರಡು ರಾಷ್ಟ್ರೀಯ ಪಕ್ಷಗಳ ವಿರುದ್ಧ ಹೋರಾಟ ಮಾಡಿದ್ದೇವೆ. 2004 ರಲ್ಲಿ ಕಾಂಗ್ರೆಸ್‍ಗೆ ಬೆಂಬಲ ಕೊಟ್ಟಿದ್ದವು. ಬಿಜೆಪಿ 104 ಸ್ಥಾನ ಪಡೆಯಲು ಸಿದ್ದರಾಮಯ್ಯ ಕಾರಣ ಎಂದು ವಾಗ್ದಾಳಿ ನಡೆಸಿದರು.
ಜೆಡಿಎಸ್, ಬಿಜೆಪಿ ಬಿಟೀಂ ಎಂದು ಹೇಳಿಕೆಯಿಂದ ಆ ಪಕ್ಷ ಅಧಿಕಾರಕ್ಕೆ ಬರಲು ಕಾರಣವಾಯಿತು. ಎರಡು ರಾಷ್ಟ್ರೀಯ ಪಕ್ಷಗಳು ಸಮಾಜದ ಸಾಮರಸ್ಯವನ್ನು ಹಾಳು ಮಾಡುತ್ತಿವೆ. ಎರಡು ರಾಷ್ಟ್ರೀಯ ಪಕ್ಷಗಳಿಂದ ಜನರು ಎಚ್ಚೆತ್ತುಕೊಳ್ಳಬೇಕು ಎಂದು ಸಲಗೆ ನೀಡಿದರು. ಇದನ್ನೂ ಓದಿ: SSLC ವಿದ್ಯಾರ್ಥಿಗಳಿಗೆ ಆಲ್ ದಿ ಬೆಸ್ಟ್ : ಬೊಮ್ಮಾಯಿ
ಮುಂದಿನ ಚುನಾವಣೆಯಲ್ಲಿ ಬಿಜೆಪಿ ಜೊತೆಗೆ ಜೆಡಿಎಸ್ ಹೊಂದಾಣಿಕೆ ಸಂಬಂಧ ಸಿದ್ದರಾಮಯ್ಯ ಹೇಳಿಕೆ ವಿಚಾರವಾಗಿ ಮಾತನಾಡಿ, ಅವರ ಬಳಿ ಬೇರೆ ಯಾವುದೇ ವಿಷಯ ಇಲ್ಲ, ಅದು ಬಿಟ್ಟು ಅವರದ್ದು ಮುಂದೆ ನಡೆಯಲ್ಲ. ಸಿದ್ದರಾಮಯ್ಯ ಅವರನ್ನು ನಂಬಿ ಮುಸಲ್ಮಾನರು ಸಹ ಬೀದಿಗೆ ಬಂದಿದ್ದಾರೆ. ಅವರಲ್ಲೂ ಸಹ ಮರು ಚಿಂತನೆ ಆರಂಭವಾಗಿದೆ. ಅವಧಿಗೂ ಮುನ್ನ ಚುನಾವಣೆ ನಡೆದರೆ ನಾವು ಸಹ ಚುನಾವಣೆಗೆ ಸಿದ್ಧ ಎಂದರು. ಇದನ್ನೂ ಓದಿ: ಮೂಲ ಕಾಂಗ್ರೆಸ್‍ನವರು ಈ ರೀತಿ ಮಾತಾಡಲ್ಲ, ಸಿದ್ದರಾಮಯ್ಯ ಕನ್ವರ್ಟ್ ಕಾಂಗ್ರೆಸ್: ಬಿ.ಸಿ ನಾಗೇಶ್
ಇಂದಿನ ಬಿಜೆಪಿ ರಾಷ್ಟ್ರೀಯ ಯುವ ಮೋರ್ಚಾ ಸೈಕಲ್ ಥಾನ್ ವಿಚಾರವಾಗಿ ಮಾತನಾಡಿ, ಕೋಲಾರದಲ್ಲೂ ಕೋಮು ಸಂಘರ್ಷಕ್ಕೆ ಪ್ರಯತ್ನ ಮಾಡುತ್ತಿದ್ದಾರೆ. ಕೋಲಾರ ಶಾಂತಿಯಾಗಿತ್ತು. ಈಗ ಹಾಳು ಮಾಡಲು ಬಿಜೆಪಿ ನಾಯಕರು ಮುಂದಾಗಿದ್ದಾರೆ. ಇದನ್ನೂ ಓದಿ: ಸೋಮವಾರದಿಂದ SSLC ಪರೀಕ್ಷೆ- ಹಿಜಬ್ ನಿಷೇಧ, ಸಮವಸ್ತ್ರ ಕಡ್ಡಾಯ