ಬೆಂಗಳೂರು: 108 ಆರೋಗ್ಯ ಸೇವೆಯನ್ನ ಬರುವ ಮೂರು ತಿಂಗಳೊಳಗೆ ಪರಿಣಾಮಕಾರಿಯಾಗಿ ಕಾರ್ಯನಿರ್ವಹಿಸುವ ನಿಟ್ಟಿನಲ್ಲಿ ಕ್ರಮ ಕೈಗೊಳ್ಳಲು ಆರೋಗ್ಯ ಸಚಿವ (Minister of State for Health and Family Welfare) ದಿನೇಶ್ ಗುಂಡೂರಾವ್ (Dinesh Gundu Rao) ಮುಂದಾಗಿದ್ದಾರೆ. ಬೆಂಗಳೂರಿನಲ್ಲಿ 108 ಸೇವೆ ಕುರಿತಂತೆ ಆರೋಗ್ಯ ಸೌಧದಲ್ಲಿ (Arogya Soudha) ಆರೋಗ್ಯ ಅಧಿಕಾರಿಗಳ ಜೊತೆ ಸಭೆ ನಡೆಸಿದ ಸಚಿವರು, 108 ಸಮರ್ಪಕವಾಗಿ ಜನರಿಗೆ ದೊರಕುವಂತೆ ನಿಟ್ಟಿನಲ್ಲಿ ಇರುವ ಸಮಸ್ಯೆಗಳನ್ನ ಬಗೆಹರಿಸುವ ಕುರಿತಂತೆ ಚರ್ಚೆ ನಡೆಸಿದರು.
Advertisement
ಸಭೆಗೂ ಮುನ್ನ ಇ.ಎಂ.ಆರ್.ಐ. ಗ್ರೀನ್ ಹೆಲ್ತ್ ಸರ್ವೀಸ್ ಸೆಂಟರ್ (Green Health Centre) ಗೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಸರ್ವೀಸ್ ಸೆಂಟರ್ ನ ಅಧಿಕಾರಿಗಳು ಹಾಗೂ ಸಿಬ್ಬಂದಿಗಳ ಜೊತೆ ಚರ್ಚಿಸಿ ಸಮಸ್ಯೆಗಳನ್ನ ಆಲೀಸಿದರು. ಕಾಲ್ ಸೆಂಟರ್ ನ ತಂತ್ರಜ್ಞಾನ ಕುರಿತು ಮಾಹಿತಿ ಪಡೆದು ಪರಿಶೀಲನೆ ನಡೆಸಿದ ಸಚಿವರು, ತಂತ್ರಜ್ಞಾನದಲ್ಲಿ ಬದಲಾವಣೆ ತರುವಂತೆ ಸೂಚಿಸಿದರು. 108 ಸೇವೆ ಪಡೆಯಲು ಸಾರ್ವಜನಿಕರ ಕರೆಗಳಿಗೆ ಸೂಕ್ತ ಸ್ಪಂದನೆ ಏಕೆ ಸಿಗುತ್ತಿಲ್ಲ ಎಂದು ಅಧಿಕಾರಿಗಳನ್ನ ಪ್ರಶ್ನಿಸಿದ ಗುಂಡೂರಾವ್, ಅತಿ ಶೀಘ್ರದಲ್ಲಿ ಸಮಸ್ಯೆಗಳನ್ನ ಪರಿಹರಿಸಲು ಅಧಿಕಾರಿಗಳಿಗೆ ಸೂಚಿಸಿದರು. ಇದನ್ನೂ ಓದಿ: ಫ್ರೀ ಬಸ್ ಟಿಕೆಟ್ ಎಫೆಕ್ಟ್; ಚಾಮರಾಜನಗರದಲ್ಲಿ ಬಸ್ ಡೋರ್ ಮುರಿದ ಮಹಿಳೆಯರು!
Advertisement
Advertisement
2017 ರಿಂದ 108 ಆರೋಗ್ಯವಾಹಿನಿ ಹೊಸ ಟೆಂಡರ್ ಕರೆದಿಲ್ಲ. ಈ ಹಿಂದೆ ಗುತ್ತಿಗೆ ಪಡೆದವರೇ ತಮ್ಮ ಮನಸೋ ಇಚ್ಚೆ ಕಾರ್ಯನಿರ್ವಹಿಸುತ್ತಿರುವ ಬಗ್ಗೆ ಗರಂ ಆದ ಸಚಿವರು, ಸಮರ್ಪಕವಾಗಿ 108 ಆರೋಗ್ಯ ವಾಹಿನಿ ಸೇವೆ ಜನರಿಗೆ ತಲುಪಿಸುವ ನಿಟ್ಟಿನಲ್ಲಿ ಹೆಚ್ಚು ಗಮನ ವಹಿಸುವಂತೆ ಆರೋಗ್ಯ ಅಧಿಕಾರಿಗಳಿಗೆ ಸೂಚನೆ ನೀಡಿದರು.
Advertisement
ಮುಂಬರುವ ಮೂರು ತಿಂಗಳ ಒಳಗಾಗಿ ನನಗೆ ಉತ್ತಮ ಫಲಿತಾಂಶ ಬೇಕು ಎಂದು ಅಧಿಕಾರಿಗಳಿಗೆ ತಾಕೀತ ಮಾಡಿದ ಆರೋಗ್ಯ ಸಚಿವ ದಿನೇಶ್ ಗುಂಡೂರಾವ್, ಜನರು 108 ಆರೋಗ್ಯ ಸೇವೆ ಪಡೆಯಲು ಪರಿತಪಿಸುವ ಪರಿಸ್ಥಿತಿ ನಿರ್ಮಾಣವಾದರೆ ಸಹಿಸಲ್ಲ ಎಂದು ಎಚ್ಚರಿಕೆ ನೀಡಿದರು. ಇದನ್ನೂ ಓದಿ: ಸರ್ಕಾರಿ ಬಸ್ಸಿನಲ್ಲಿ ನಾರಿಯರ ತೀರ್ಥಯಾತ್ರೆ- ಕುಕ್ಕೆ, ಧರ್ಮಸ್ಥಳ ಕ್ಷೇತ್ರದಲ್ಲಿ ಮಹಿಳಾ ಜನಸಾಗರ