ಹುಬ್ಬಳ್ಳಿ: ಬಿಹಾರ (Bihar) ಮೂಲದ ಸೈಕೋಪಾತ್‌ನಿಂದ ಕೊಲೆಯಾದ 5 ವರ್ಷದ ಬಾಲಕಿಯ ಅಂತ್ಯಕ್ರಿಯೆ ಇಂದು ಹುಬ್ಬಳ್ಳಿಯ (Hubballi) ದೇವಾಂಗ ಪೇಟ ರುದ್ರಭೂಮಿಯಲ್ಲಿ ನೇರವೇರಿತು. ಕುಟುಂಬಸ್ಥರು ವಿಧಿವಿಧಾನಗಳೊಂದಿಗೆ ಕುರುಬ ಸಂಪ್ರದಾಯದಂತೆ ಅಂತ್ಯಕ್ರಿಯೆ ನೆರವೇರಿಸಿದರು.
ಕಿಮ್ಸ್ (KIMS) ಆಸ್ಪತ್ರೆಯಲ್ಲಿ ನಡೆದ ಮರಣೋತ್ತರ ಪರೀಕ್ಷೆಯ ಬಳಿಕ ಬಾಲಕಿಯ ಶವವನ್ನು ಕುಟುಂಬಸ್ಥರಿಗೆ ಹಸ್ತಾಂತರಿಸಲಾಯಿತು. ಮಗಳ ಶವವನ್ನು ಕೈಯಲ್ಲಿ ಹೊತ್ತು ತಂದ ತಂದೆ, ದೇವಾಂಗ ಪೇಟ ಸ್ಮಶಾನಕ್ಕೆ ತೆರಳಿ ಕುರುಬ ಸಂಪ್ರದಾಯದಂತೆ ಪೂಜೆ ಮಾಡಿದರು. ಬಳಿಕ ಅಗ್ನಿಸ್ಪರ್ಶ ಮಾಡುವ ಮೂಲಕ ಅಂತ್ಯಕ್ರಿಯೆ ನೆರವೇರಿಸಿದ್ದು, ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.ಇದನ್ನೂ ಓದಿ: ಹುಬ್ಬಳ್ಳಿ | ಬಾಲಕಿ ಕೊಲೆ ಕೇಸ್ – ಆರೋಪಿಗೆ ಗುಂಡಿಟ್ಟ `ಲೇಡಿ ಸಿಂಗಂ’ಗೆ ಮುಂದಿನ ತಿಂಗಳಲ್ಲೇ ಮದುವೆ!
ಘಟನೆ ಏನು?
ಸೈಕೋಪಾತ್ ಒಬ್ಬ ಐದು ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿ, ಕತ್ತು ಹಿಸುಕಿ ಕೊಲೆ ಮಾಡಿರುವ ಘಟನೆ ಹುಬ್ಬಳ್ಳಿಯ ಅಶೋಕನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿತ್ತು. ಬಿಹಾರ ಮೂಲದ ಸೈಕೋಪಾತ್ ಬಾಲಕಿಯನ್ನ ಶೆಡ್‌ಗೆ ಕರೆದೊಯ್ದು ಅತ್ಯಾಚಾರಕ್ಕೆ ಯತ್ನಿಸಿದ್ದನು. ಬಾಲಕಿ ಚೀರಾಟ ಕೇಳಿ ಅಲ್ಲೇ ಇದ್ದ ಸ್ಥಳೀಯರು ಶೆಡ್‌ನತ್ತ ಬಂದಿದ್ದರು. ಜನ ಬರುತ್ತಿರುವುದನ್ನು ಕಂಡ ಸೈಕೋಪಾತ್ ಭಯದಿಂದ ಬಾಲಕಿಯ ಕತ್ತು ಹಿಸುಕಿ ಕೊಲೆ ಮಾಡಿ, ಎಸ್ಕೇಪ್ ಆಗಿದ್ದನು.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ದರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್ ಆಗಲು ಯತ್ನಿಸಿದ್ದ. ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದರು. ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನ್ನಪೂರ್ಣ (PSI Annapurna) ಅವರು ಹಾರಿಸಿದ ಗುಂಡು ಬೆನ್ನಿಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದಿದೇ ಆರೋಪಿ ರಿತೇಶ್ ಸಾವನ್ನಪ್ಪಿದ್ದ.ಇದನ್ನೂ ಓದಿ: ಹುಬ್ಬಳ್ಳಿ ಕೊಲೆ ಪ್ರಕರಣ – ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರದಿಂದ 10 ಲಕ್ಷ ಪರಿಹಾರ