Connect with us

Dharwad

ಹುಬ್ಬಳ್ಳಿಯಲ್ಲಿ ಹೆಚ್‍ಡಿಕೆ-ಡಿಕೆಶಿ ಭೇಟಿ

Published

on

ಹುಬ್ಬಳ್ಳಿ: ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಮತ್ತು ಮಾಜಿ ಸಚಿವ ಡಿ.ಕೆ.ಶಿವಕುಮಾರ್ ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ.

ಬೆಳಗಾವಿಯಿಂದ ಚಿಕ್ಕಬಳ್ಳಾಪುರಕ್ಕೆ ಹೆಚ್.ಡಿ.ಕುಮಾರಸ್ವಾಮಿ ತೆರಳುತ್ತಿದ್ದರು. ಹವಾಮಾನ ವೈಪರಿತ್ಯದಿಂದಾಗಿ ಹುಬ್ಬಳ್ಳಿಯಲ್ಲಿ ಹೆಲಿಕಾಪ್ಟರ್ ತುರ್ತು ಭೂಸ್ಪರ್ಶ ಮಾಡಿತ್ತು. ಡಿ.ಕೆ.ಶಿವಕುಮಾರ್ ಹುಬ್ಬಳ್ಳಿಯಿಂದ ಬೆಂಗಳೂರಿಗೆ ತೆರಳುತ್ತಿದ್ದರು. ಈ ವೇಳೆ ಇಬ್ಬರು ನಾಯಕರು ವಿಮಾನ ನಿಲ್ದಾಣದಲ್ಲಿ ಭೇಟಿಯಾಗಿ ರಹಸ್ಯ ಮಾತುಕತೆ ನಡೆಸಿದ್ದಾರೆ ಎಂಬ ಮಾಹಿತಿ ಪಬ್ಲಿಕ್ ಟಿವಿಗೆ ಲಭ್ಯವಾಗಿದೆ.

ಉಪಚುನಾವಣೆ ಬಳಿಕ ಕಾಂಗ್ರೆಸ್ ಮತ್ತು ಜೆಡಿಎಸ್ ಮತ್ತೆ ಮೈತ್ರಿ ಮಾಡಿಕೊಳ್ಳುತ್ತವೆ ಎಂಬ ಸುದ್ದಿಗಳ ಬೆನ್ನಲ್ಲೇ ಹೆಚ್‍ಡಿಕೆ ಮತ್ತು ಡಿಕೆಶಿ ಮಾತುಕತೆ ಕುತೂಹಲಕ್ಕೆ ಎಡೆಮಾಡಿಕೊಟ್ಟಿದೆ. ಭಾನುವಾರ ಸುದ್ದಿಗೋಷ್ಠಿ ನಡೆಸಿದ್ದ ಕಾಂಗ್ರೆಸ್ ಹಿರಿಯ ನಾಯಕ ಮಲ್ಲಿಕಾರ್ಜುನ ಖರ್ಗೆ ಡಿಸೆಂಬರ್ 9ರ ಬಳಿಕ ಗುಡ್ ನ್ಯೂಸ್ ನೀಡುತ್ತೇವೆ. ಅಲ್ಲಿಯವರೆಗೂ ತಾಳ್ಮೆಯಿಂದ ವೇಟ್ ಮಾಡಿ ಎಂದು ಹೇಳುವ ಮೂಲಕ ಮೈತ್ರಿಯ ಸುಳಿವು ನೀಡಿದ್ದರು. ಮಾಜಿ ಡಿಸಿಎಂ ಜಿ.ಪರಮೇಶ್ವರ್ ನಮ್ಮ ಮುಂದೆ ಎರಡು ಆಯ್ಕೆಗಳಿವೆ ಎಂದಿದ್ದಾರೆ.

Click to comment

Leave a Reply

Your email address will not be published. Required fields are marked *