ಹುಬ್ಬಳ್ಳಿ: ಸಿಲಿಂಡರ್ ಸೋರಿಕೆಯಿಂದ (Hubballi Cylinder Blast) ಅಗ್ನಿ ಅವಘಡ ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ (Ayyappa Devotee) ಸಾವಿಗೀಡಾಗಿದ್ದಾರೆ. ಮೃತರ ಸಂಖ್ಯೆ 5 ಕ್ಕೆ ಏರಿಕೆಯಾಗಿದೆ.
ಹುಬ್ಬಳ್ಳಿಯ ಉಣಕಲ್ ನಿವಾಸಿ ಮಾಲಾಧಾರಿ ಶಂಕರ ಚವ್ಹಾಣ್ (30) ಮೃತಪಟ್ಟವರು. ಗಂಭೀರ ಸ್ಥಿತಿಯಲ್ಲಿದ್ದ ಇವರು ಕಳೆದ ಏಳು ದಿನಗಳಿಂದ ಹುಬ್ಬಳ್ಳಿಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇದನ್ನೂ ಓದಿ: Hubballi| ಮಲಗಿದ್ದ ವೇಳೆ ಸಿಲಿಂಡರ್ ಗ್ಯಾಸ್ ಸ್ಫೋಟ – 9 ಅಯ್ಯಪ್ಪ ಮಾಲಾಧಾರಿಗಳಿಗೆ ಗಂಭೀರ ಗಾಯ
Advertisement
Advertisement
ಬಾಲ್ಯದಲ್ಲೇ ತಂದೆ-ತಾಯಿಯನ್ನ ಕಳೆದುಕೊಂಡು ದೊಡ್ಡಮ್ಮನ ಮನೆಯಲ್ಲಿ ಶಂಕರ್ ಬೆಳೆದಿದ್ದ. ಅಯ್ಯಪ್ಪನ ವೃತ ಮಾಡಲು ಮೊದಲ ಬಾರಿಗೆ ಮಾಲೆ ಹಾಕಿದ್ದ. ಕಳೆದ ಭಾನುವಾರ ರಾತ್ರಿ ಸಿಲಿಂಡರ್ ಸೋರಿಕೆ ಅವಘಡ ನಡೆದಿತ್ತು.
Advertisement
ಸಾಯಿನಗರದ ಅಚ್ಚವ್ವಳ ಕಾಲೊನಿಯಲ್ಲಿ ಈ ದುರ್ಘಟನೆ ಸಂಭವಿಸಿತ್ತು. ಗ್ಯಾಸ್ ಸೋರಿಕೆಯಿಂದ ಬೆಂಕಿ ಹೊತ್ತಿಕೊಂಡಿತ್ತು. ಅವಘಡದಲ್ಲಿ 9 ಮಾಲಾಧಾರಿಗಳಿಗೆ ತೀವ್ರ ಗಾಯವಾಗಿತ್ತು. ಗಾಯಾಳುಗಳು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಸಿಲಿಂಡರ್ ಸ್ಫೋಟ ಪ್ರಕರಣ – ಮೃತರ ಸಂಖ್ಯೆ 4ಕ್ಕೆ ಏರಿಕೆ
Advertisement
ಇದುವರೆಗೆ 5 ಮಂದಿ ಮಾಲಾಧಾರಿಗಳು ಮೃತಪಟ್ಟಿದ್ದಾರೆ. ಇನ್ನುಳಿದ ನಾಲ್ವರು ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ.