ಹುಬ್ಬಳ್ಳಿ: ಇಲ್ಲಿನ ಉಣಕಲ್‌ನ ಅಚ್ಚವ್ವ ಕಾಲೊನಿಯಲ್ಲಿ ಸಿಲಿಂಡರ್ ಸೋರಿಕೆ ಪ್ರಕರಣದಲ್ಲಿ ಮತ್ತೊಬ್ಬರು ಅಯ್ಯಪ್ಪ ಮಾಲಾಧಾರಿ (Ayyappa Devotees) ಸಾವಿಗೀಡಾಗಿದ್ದಾರೆ. ಆ ಮೂಲಕ ಸಾವಿನ ಸಂಖ್ಯೆ 3ಕ್ಕೆ ಏರಿಕೆಯಾಗಿದೆ.
ರಾಜೂ ಮೂಗೇರಿ (16) ಮೃತಪಟ್ಟ ಬಾಲಕ. ಮೊದಲು ಗಂಭೀರ ಸ್ಥಿತಿಯಲ್ಲಿದ್ದ ಬಾಲಕನನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಿಕಾರಿಯಾಗದೇ ಮಾಲಾಧಾರಿ ಬಾಲಕ ಮೃತಪಟ್ಟಿದ್ದಾರೆ. ಇದನ್ನೂ ಓದಿ: ಮೃತ ಅಯ್ಯಪ್ಪ ಮಾಲಾಧಾರಿಗಳ ಕುಟುಂಬಕ್ಕೆ ತಲಾ 5 ಲಕ್ಷ ರೂ. ಪರಿಹಾರ ಘೋಷಣೆ
ಉಳಿದ ಅಯ್ಯಪ್ಪ ಮಾಲಾಧಾರಿಗಳಿಗೆ ಚಿಕಿತ್ಸೆ ಮುಂದುವರಿದಿದೆ. ಕಳೆದ ನಾಲ್ಕು ದಿನಗಳ ಹಿಂದೆ ಹುಬ್ಬಳ್ಳಿಯ ಉಣಕಲ್‌ನ ಅಚ್ಚವ್ವ ಕಾಲೊನಿಯಲ್ಲಿ ಸಿಲಿಂಡರ್ ಸೋರಿಕೆಯಿಂದಾಗಿ ಒಂಬತ್ತು ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರಗೊAಡಿದ್ದರು. ಇವರ ಪೈಕಿ ನಿನ್ನೆ ಇಬ್ಬರು ಮತ್ತು ಇಂದು ಓರ್ವ ಮೃತಪಟ್ಟಿದ್ದಾರೆ.
ಪುತ್ರನ ಸಾವಿನ ಸುದ್ದಿ ಕೇಳುತ್ತಿದ್ದಂತೆ ಆಸ್ಪತ್ರೆ ಬಳಿ ರಾಜೂ ತಾಯಿ ಹಾಗೂ ಅಜ್ಜಿಯ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: Hubballi| ಸಿಲಿಂಡರ್ ಬ್ಲಾಸ್ಟ್ ಪ್ರಕರಣ – ಚಿಕಿತ್ಸೆ ಫಲಕಾರಿಯಾಗದೇ ಇಬ್ಬರು ಅಯ್ಯಪ್ಪ ಮಾಲಾಧಾರಿಗಳು ಸಾವು