– ಇಬ್ಬರು ಅಯ್ಯಪ್ಪ ಮಾಲಾಧಾರಿಗಳ ಸ್ಥಿತಿ ಗಂಭೀರ
ಹುಬ್ಬಳ್ಳಿ: ಕಳೆದ ಭಾನುವಾರ ತಡರಾತ್ರಿ ಹುಬ್ಬಳ್ಳಿಯ ಅಚ್ಚವ್ವನ ಕಾಲೋನಿಯಲ್ಲಿ ನಡೆದಿದ್ದ ಸಿಲಿಂಡರ್ ಸ್ಫೋಟ ಪ್ರಕರಣ (Hubballi Cylinder Blast Case) ಇಡೀ ಹುಬ್ಬಳ್ಳಿ-ಧಾರವಾಡ ಜನರನ್ನು ಬೆಚ್ಚಿ ಬಿಳಿಸಿತ್ತು.
ಈಶ್ವರ ದೇವಸ್ಥಾನದಲ್ಲಿ ಮಲಗಿದ್ದ ಒಂಬತ್ತು ಅಯ್ಯಪ್ಪ ಮಾಲಾಧಾರಿಗಳು ಬೆಂಕಿಗೆ ಬೆಂದಿದ್ದರು. ಕೂಡಲೇ ಅವರನ್ನು ಆಸ್ಪತ್ರೆಗೆ ದಾಖಲಿಸಿದ್ರೂ ಮೂವರು ಮೃತಪಟ್ಟಿದ್ರು. ಉಳಿದವರಿಗೆ ಕಿಮ್ಸ್‌ನಲ್ಲಿ ಚಿಕಿತ್ಸೆ ಮುಂದುವರೆದಿತ್ತು. ಆದ್ರೆ ಚಿಕಿತ್ಸೆ ಫಲಿಸದೇ ಮತ್ತಿಬ್ಬರು ಅಯ್ಯಪ್ಪ ಮಾಲಾಧಾರಿಗಳು ಕೊನೆಯುಸಿರೆಳೆದಿದ್ದು, ಸಾವಿನ ಸಂಖ್ಯೆ 6ಕ್ಕೇರಿದೆ. ಇದನ್ನೂ ಓದಿ: ಬೈಕ್‌ಗಳ ನಡುವೆ ಮುಖಾಮುಖಿ ಡಿಕ್ಕಿ – ಓರ್ವ ಸಾವು, ಮತ್ತೊಬ್ಬನ ಕಾಲು ಕಟ್
30 ವರ್ಷದ ಶಂಕರ್, 22 ವರ್ಷದ ಮಂಜುನಾಥ ವಾಗ್ಮೋಡೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಮೃತ ಶಂಕರ್ ಕಿಮ್ಸ್ ಆಸ್ಪತ್ರೆಯಲ್ಲಿ ಹೊರ ಗುತ್ತಿಗೆ ಆಧಾರದಲ್ಲಿ ಕೆಲಸ ಮಾಡ್ತಿದ್ರು. ಬಾಲ್ಯದಲ್ಲಿ ತಂದೆ ತಾಯಿ ಕಳೆದುಕೊಂಡು ಅನಾಥವಾಗಿದ್ದ ಶಂಕರ್ ದೊಡ್ಡಮ್ಮನ ಮನೆಯಲ್ಲಿ ವಾಸವಿದ್ದ. ಶಂಕರ್ ಚವ್ಹಾಣ್ ಮೊದಲ ಬಾರಿ ಅಯ್ಯಪ್ಪನ ಮಾಲೆ ಧರಿಸಿದ್ದರು. ಕಳೆದ ಏಳು ದಿನಗಳಿಂದ ಕಿಮ್ಸ್ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದಿದ್ದಾರೆ. ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ಪಾಕ್ ವಿರುದ್ಧ ರೋಚಕ ಜಯ – WTC ಫೈನಲ್‌ಗೆ ದ.ಆಫ್ರಿಕಾ, ಭಾರತಕ್ಕೆ ಗೆಲುವೊಂದೇ ದಾರಿ
ಇನ್ನೂ ಮಂಜುನಾಥ ವಾಗ್ಮೋಡೆಯ ದೇಹ ಶೇ.70ರಷ್ಟು ಸುಟ್ಟಿತ್ತು. 2ನೇ ವರ್ಷ ಡಿಪ್ಲೊಮಾ ಕೋರ್ಸ್ ವಿದ್ಯಾರ್ಥಿಯಾಗಿದ್ದ ಮಂಜುನಾಥ್. ಅಯ್ಯಪ್ಪ ಮಾಲೆ ಧರಿಸಿದ್ರು. ಒಂದು ವಾರದಿಂದ ಚಿಕಿತ್ಸೆಗೆ ಸ್ಪಂದಿಸಿದ್ರೂ ಇಂದು ಮೃತಪಟ್ಟಿದ್ದಾರೆ. ಕಿಮ್ಸ್ ಸಿಬ್ಬಂದಿ ಕೂಡ ತಮ್ಮ ಸಹೋದ್ಯೋಗಿಯ ಅಂತಿಮ ದರ್ಶನ ಪಡೆದು ಕಣ್ಣಿರು ಹಾಕಿದ್ದಾರೆ. ಪ್ರಕಾಶ್ ಬಾರಕೇರ್ ದೇಹ ಶೇ.91 ರಷ್ಟು, ತೇಜಸ್ವರ್ ಸಾತರೆಯ ದೇಹ ಶೇ.74 ರಷ್ಟು ಸುಟ್ಟಿದೆ. ವಿನಾಯಕ್ ಭಾರಕೇರ್ ದೇಹ ಶೇ.25 ರಷ್ಟು ಸುಟ್ಟಿದ್ದು, ಅಪಾಯದಿಂದ ಪಾರಾಗಿದ್ದಾರೆ. ಇಬ್ಬರ ಸ್ಥಿತಿ ಚಿಂತಾಜನಕವಾಗಿದ್ದು, ಕಿಮ್ಸ್ನಲ್ಲಿ ಚಿಕಿತ್ಸೆ ಮುಂದುವರೆದಿದೆ. ಇದನ್ನೂ ಓದಿ: ಸಾರಿಗೆ ಮುಷ್ಕರ ಕೈಬಿಡುವಂತೆ ಸರ್ಕಾರ ಮನವಿ – ಸಿಎಂ 2,000 ಕೋಟಿ ಬಿಡುಗಡೆ ಮಾಡಿದ್ದಾರೆ: ರಾಮಲಿಂಗಾ ರೆಡ್ಡಿ