ಹುಬ್ಬಳ್ಳಿ: ಸಿಲಿಂಡರ್ ದುರಂತ ಪ್ರಕರಣ ಗಂಭೀರವಾಗಿ ಗಾಯಗೊಂಡಿದ್ದ ಸರ್ಕಾರಿ ಶಾಲೆಯ ದೈಹಿಕ ಶಿಕ್ಷಕಿ ಚಿಕಿತ್ಸೆ ಫಲಕಾರಿಯಾಗದೆ, ಹುಬ್ಬಳ್ಳಿ ಕೆಎಂಸಿ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಗಂಗಮ್ಮ ಮೃತ ದುರ್ದೈವಿ. ಜು.24 ರಂದು ಹುಬ್ಬಳ್ಳಿಯ ಶಕ್ತಿನಗರದಲ್ಲಿ ಗ್ಯಾಸ್ ಲೀಕ್ ಆಗಿ ಬೆಂಕಿ ಹತ್ತಿಕೊಂಡ ಪರಿಣಾಮ, ಗಂಗಮ್ಮ, ಅವರ ಪತಿ ಮತ್ತು ಇಬ್ಬರು ಮಕ್ಕಳು ಗಾಯಗೊಂಡಿದ್ದರು. ಶಿಕ್ಷಕಿಗೆ 65% ಸುಟ್ಟ ಗಾಯಗಳಾಗಿದ್ದವು. ಅವರನ್ನು ಕೆಎಂಸಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಇದನ್ನೂ ಓದಿ: 162 ಬಾರಿ ಫಾರಿನ್ ಟ್ರಿಪ್, 300 ಕೋಟಿ ಹಗರಣ – ನಕಲಿ ರಾಯಭಾರ ಕಚೇರಿ ರಹಸ್ಯ ಕಂಡು ಬೆಚ್ಚಿಬಿದ್ದ ಅಧಿಕಾರಿಗಳು
ಉಳಿದ ಮೂವರಿಗೆ ಚಿಕಿತ್ಸೆ ಮುಂದುವರಿದಿದೆ. ಹುಬ್ಬಳ್ಳಿ ಅಶೋಕ ನಗರ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ. ಇದನ್ನೂ ಓದಿ: ಭೀಮನ ಅಮಾವಾಸ್ಯೆಯಂದು ಗಂಡನ ಪೂಜೆ ಮಾಡಿ ಆತ್ಮಹತ್ಯೆ ಕೇಸ್ – ಪತಿಗೆ ಅನೈತಿಕ ಸಂಬಂಧದ ಶಂಕೆಯಿಂದ ಪತ್ನಿ ಸೂಸೈಡ್