– ಮನೆಯಲ್ಲೇ ಕುಳಿತು ತೆರಿಗೆ ಪಾವತಿ ಮಾಡಬಹುದು – ಹೇಗೆ ಗೊತ್ತಾ?
ಹುಬ್ಬಳ್ಳಿ: ಪ್ರಸಕ್ತ ಆರ್ಥಿಕ ವರ್ಷ 2024-25ನೇ ಸಾಲಿನ ಆಸ್ತಿ ತೆರಿಗೆಯನ್ನು (Property Tax) ಪಾವತಿಸಲು ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ (Hubballi Dharwad Municipal Corporation) ಬಂಪರ್ ಆಫರ್ ಮಾಡಿಕೊಟ್ಟಿದೆ. 5% ರಿಯಾಯಿತಿಯೊಂದಿಗೆ ತೆರಿಗೆ ಪಾವತಿಸಲು ಏಪ್ರೀಲ್ 1 ರಿಂದ 30ರ ವರೆಗೆ ಅವಕಾಶ ಕಲ್ಪಿಸಿದೆ.
ಎಲ್ಲಾ ವಲಯ ಕಚೇರಿಗಳಲ್ಲಿ ಬೆಳಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆ ವರೆಗೆ ಆಸ್ತಿ ತೆರಿಗೆ ಚಲನ್‌ಗಳನ್ನ ವಿತರಿಸಲಾಗುತ್ತಿದೆ. ಸಾರ್ವಜನಿಕರು ಮನೆಯಲ್ಲಿಯೇ ಕುಳಿತು ತಮ್ಮ ಮೋಬೈಲ್‌ನಲ್ಲಿ ಹೆಚ್‌ಡಿಎಂಸಿ ಆ್ಯಪ್ (HDMC App) ಡೌನ್ಲೋಡ್ ಮಾಡಿಕೊಂಡು, ಆ್ಯಪ್‌ನಲ್ಲೂ ಆಸ್ತಿ ತೆರಿಗೆ ಪಾವತಿ ಮಾಡಬಹುದಾಗಿದೆ. ಇದನ್ನೂ ಓದಿ: ಸಿದ್ದರಾಮಯ್ಯಗೆ ಕುರ್ಚಿ ಉಳಿಸಿಕೊಳ್ಳೋದೆ ಚಿಂತೆ, ಯಾಕಂದ್ರೆ ಇನ್ನೊಬ್ಬರು ಸಿಎಂ ಕುರ್ಚಿ ಎಳೆಯುತ್ತಿದ್ದಾರೆ: ಅಮಿತ್ ಶಾ
Advertisement
Advertisement
ಸಾರ್ವಜನಿಕರು ಆಸ್ತಿ ತೆರಿಗೆಯನ್ನು 2024-25 ನೇ ಸಾಲಿನಲ್ಲಿ ಕೇವಲ ಹುಬ್ಬಳ್ಳಿ ಧಾರವಾಡ-1 (ಕರ್ನಾಟಕ ಒನ್ ) ಸೇವಾ ಕೇಂದ್ರಗಳ ಮುಖಾಂತರ ಅಥವಾ ಪರ್ಯಾಯ ವ್ಯವಸ್ಥೆಯಾಗಿ ಸಂದಾಯ ಮಾಡಲು http://www.hdmc.in ವೆಬ್ ಸೈಟ್‌ನಲ್ಲಿ ಎಲ್ಲ ವಿಧದ ಆನ್‌ಲೈನ್ ಪಾವತಿ ವ್ಯವಸ್ಥೆಗಳ ಮುಖಾಂತರ ಆಸ್ತಿ ಕರ ಸಂದಾಯ ಮಾಡಲು ಅವಕಾಶ ಕಲ್ಪಿಸಲಾಗಿದ್ದು, ಸಾರ್ವಜನಿಕರು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು.
Advertisement
Advertisement
ಹಿಂದಿನ ವರ್ಷದ ಆಸ್ತಿ ತೆರಿಗೆ ಬಾಕಿ ಪಾವತಿಸದಿದ್ದವರೂ ಸಹ ತಮ್ಮ ಆಸ್ತಿ ತೆರಿಗೆಯನ್ನು ಕೂಡಲೇ ಪಾವತಿಸಿ, ಪಾಲಿಕೆ ಕೈಗೊಳ್ಳಲಿರುವ ಅಭಿವೃದ್ಧಿ ಕಾರ್ಯಗಳಲ್ಲಿ ಜವಾಬ್ದಾರಿಯುತ ಪಾಲುದಾರರಾಗಿ ಎಂದು ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆಯ ಆಯುಕ್ತರಾದ ಡಾ.ಈಶ್ವರ ಉಳ್ಳಾಗಡ್ಡಿ ಅವರು ಪ್ರಕಟಣೆಯಲ್ಲಿ ಕೋರಿದ್ದಾರೆ. ಇದನ್ನೂ ಓದಿ: ಡಿಕೆ ಬ್ರದರ್ಸ್ ಭದ್ರಕೋಟೆಯಲ್ಲಿ ಅಮಿತ್ ಶಾ ಶಕ್ತಿ ಪ್ರದರ್ಶನ; ರೋಡ್ ಶೋನಲ್ಲೂ ಜೈ ಶ್ರೀರಾಮ್ ಘೋಷಣೆ