ಹುಬ್ಬಳ್ಳಿ: ವಾಣಿಜ್ಯ ನಗರಿಯಲ್ಲಿ ಬೆಚ್ಚಿ ಬೀಳಿಸುವಂತಹ ಘಟನೆಗಳಿಗೆ ಕಾರಣವಾಗುವ ರೌಡಿ ಶೀಟರ್‌ಗಳನ್ನು (Rowdy Sheeter) ಸನ್ನಡತೆ ಸೇರಿ ಇತರ ಆಧಾರದ ಮೇಲೆ ಪಟ್ಟಿಯಿಂದ ಕೈಬಿಡಲಾಗಿದೆ. ಹುಬ್ಬಳ್ಳಿ-ಧಾರವಾಡ ಪೊಲೀಸ್ ಆಯುಕ್ತಾಲಯ (Hubballi – Dharwad Police Department) ವ್ಯಾಪ್ತಿಯಲ್ಲಿ ಒಟ್ಟು 530 ಮಂದಿಯ ಹೆಸರನ್ನು ರೌಡಿ ಶೀಟರ್ ಪಟ್ಟಿಯಿಂದ ಹೊರಹಾಕಲಾಗಿದೆ.
ಕೆಲ ಮಾಹಿತಿಗಳನ್ನು ಆಧರಿಸಿ ರೌಡಿಗಳ ಹೆಸರನ್ನು ಪಟ್ಟಿಯಿಂದ ಕೈಬಿಡಲಾಗುತ್ತದೆ. ಹು-ಧಾ ವ್ಯಾಪ್ತಿಯಲ್ಲಿ 2018ರಿಂದ 2023ರವರೆಗೆ ಬಹಳಷ್ಟು ರೌಡಿಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಹು-ಧಾ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 2 ಸಾವಿರಕ್ಕೂ ಹೆಚ್ಚು ರೌಡಿಗಳಿದ್ದಾರೆ. ಪ್ರತಿ ರೌಡಿ ಪಟ್ಟಿಯಲ್ಲಿ ಹಲವರ ಹೆಸರು ಸೇರ್ಪಡೆಯಾಗುತ್ತ ಹೋಗುತ್ತದೆ. ಕೊಲೆ, ಸುಲಿಗೆ, ಕಳ್ಳತನ, ದರೋಡೆ ಸೇರಿ ಹಲವು ಪ್ರಕರಣಗಳಲ್ಲಿ ಭಾಗಿಯಾದವರು ರೌಡಿ ಶೀಟರ್‌ಗೆ ಸರ್ಪಡೆಯಾಗುತ್ತಾರೆ. ಅದೂ ಒಬ್ಬರ ಮೇಲೆ ಒಂದಕ್ಕಿಂತ ಹೆಚ್ಚು ಪ್ರಕರಣಗಳು ದಾಖಲಾದರೆ ಮಾತ್ರ. ಇದನ್ನೂ ಓದಿ: ತಳ್ಳಾಟ ನೂಕಾಟದಲ್ಲಿ ಅಸ್ವಸ್ಥರಾಗಿ ಕುಸಿದು ಬಿದ್ದ ಯತ್ನಾಳ್ – ಆಸ್ಪತ್ರೆಗೆ ರವಾನೆ
Advertisement
Advertisement
ಇದೇ ಆಧಾರದಲ್ಲಿ ಪ್ರತಿ ರೌಡಿಗಳ ಹೊಸ ಪಟ್ಟಿ ಸನ್ನಡತೆ ಆಧರಿಸಿ ಬಿಡುಗಡೆ ಪ್ರಕ್ರಿಯೆ ನಡೆಯುತ್ತದೆ. ಹು-ಧಾ ಪೊಲೀಸ್ ಆಯುಕ್ತಾಲಯ ವ್ಯಾಪ್ತಿಯಲ್ಲಿ 2018ರಲ್ಲಿ 13, 2019ರಲ್ಲಿ 20, 2020ರಲ್ಲಿ 11, 2021ರಲ್ಲಿ 17, 2022ರಲ್ಲಿ 9 ಹಾಗೂ 2023ರಲ್ಲಿ 480 ರೌಡಿಗಳನ್ನು ಪಟ್ಟಿಯಿಂದ ಕೈಬಿಡಲಾಗಿದೆ. ಎಲ್ಲ ವರ್ಷಗಳಿಗಿಂತ 2023ರಲ್ಲಿಯೇ ಅತಿ ಹೆಚ್ಚು ರೌಡಿಗಳನ್ನು ಪಟ್ಟಿಯಿಂದ ವಿಮುಕ್ತಗೊಳಿಸಲಾಗಿದೆ. ಇದನ್ನೂ ಓದಿ: ಗೃಹಲಕ್ಷ್ಮಿ ಯೋಜನೆಗೆ ಸರ್ಕಾರದಿಂದ ಕೊನೆಗೂ ಚಾಲನೆ – ಆ್ಯಪ್ ಬಿಡುಗಡೆ ಮಾಡಿದ ಸಿದ್ದರಾಮಯ್ಯ
Advertisement
Web Stories