ಹುಬ್ಬಳ್ಳಿ: ಮಾರ್ಚ್ 31ರವರೆಗೆ ಹುಬ್ಬಳ್ಳಿ-ಧಾರವಾಡದಲ್ಲಿ ಸಾರಿಗೆ ಸಂಚಾರವನ್ನು ಸ್ಥಗಿತಗೊಳಿಸಲಾಗಿದೆ.
ಧಾರವಾಡ ಜಿಲ್ಲೆಯಲ್ಲಿ ಮೊದಲ ಕೊರೊನಾ ವೈರಸ್ ಪತ್ತೆಯಾಗಿರುವ ಹಿನ್ನಲೆಯಲ್ಲಿ ಧಾರವಾಡ ಜಿಲ್ಲಾಡಳಿತ ಮುಂಜಾಗ್ರತಾ ಕ್ರಮವಾಗಿ ಹಾಗೂ ಕೊರೊನಾ ವೈರಸ್ ನಿಯಂತ್ರಣ ಮಾಡುವ ಸದುದ್ದೇಶದಿಂದ ಅವಳಿನಗರದಲ್ಲಿನ ಬಿಆರ್ ಟಿಎಸ್ ಹಾಗೂ ಬೇಂದ್ರೆ ಬಸ್ ಸಂಚಾರವನ್ನು ಮಾರ್ಚ್ 31ರವರೆಗೂ ಸ್ಥಗಿತಗೊಳಿಸಿ ಎಂದು ಆದೇಶ ಹೊರಡಿಸಿದೆ.
Advertisement
ಜಿಲ್ಲೆಯ ಯಲ್ಲಾಪುರದ ವ್ಯಕ್ತಿಯಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿರುವ ಬೆನ್ನಲ್ಲೇ ಜಿಲ್ಲಾಡಳಿತ ಈಗಾಗಲೇ ಕಟ್ಟುನಿಟ್ಟಿನ ಕ್ರಮ ಜರುಗಿಸಿದ್ದು, ಮಾರ್ಚ್ 31ರವರೆಗೂ ಬಸ್ ಸಂಚಾರ ರದ್ದುಗೊಳಿಸಿದೆ.
Advertisement
Advertisement
ಸೋಂಕು ದೃಢಪಟ್ಟಿರುವ ವ್ಯಕ್ತಿಯು ಧಾರವಾಡ ನಗರದ ಹೊಸಯಲ್ಲಾಪುರ ಪ್ರದೇಶಕ್ಕೆ ಸೇರಿದ 33 ವರ್ಷ ವಯಸ್ಸಿನವನಾಗಿದ್ದು, ಹೊಸಯಲ್ಲಾಪುರ ಪ್ರದೇಶವನ್ನು ಕಂಟೈನಮೆಂಟ್ ಎಂದು ಘೋಷಿಸಲಾಗಿದೆ. ಅಲ್ಲಿಂದ ಸುತ್ತಮುತ್ತಲಿನ 3 ಕಿ.ಮೀ ವ್ಯಾಪ್ತಿಯಲ್ಲಿ ಸಾರ್ವಜನಿಕರ ಆಗಮನ ಮತ್ತು ನಿರ್ಗಮನವನ್ನು ನಿರ್ಬಂಧಿಸಲಾಗಿದೆ.
Advertisement
ಈ ವ್ಯಕ್ತಿಗೆ ಹುಬ್ಬಳ್ಳಿಯ ಕಿಮ್ಸ್ ನಲ್ಲಿ ಈಗಾಗಲೇ ಚಿಕಿತ್ಸೆ ನೀಡಲಾಗುತ್ತಿದೆ. ಪ್ರಕರಣ ಕಂಡು ಬಂದ ಸ್ಥಳದ ಸುತ್ತಮುತ್ತ ನಿಯಮಾನುಸಾರ ಸರ್ವೇ ಕಾರ್ಯ ಕೈಗೊಳ್ಳಲಾಗಿದೆ. ಈ ವ್ಯಕ್ತಿಯ ಸಂಪರ್ಕಕ್ಕೆ ಬಂದವರ ಮಾಹಿತಿ (Contact Tracing) ಸಂಗ್ರಹಿಸಲಾಗುತ್ತಿದೆ.