Public TVPublic TV
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Reading: ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಿಡುಗಡೆ – ಬಿಜೆಪಿ ವಿರುದ್ಧ ‘ಕೈ’ ನಾಯಕರ ಕಿಡಿ
Share
Notification Show More
Font ResizerAa
Font ResizerAa
Public TVPublic TV
  • Home
  • State
  • LIVE
  • Latest
  • Districts
  • National
  • World
  • Cinema
  • Stories
  • Crime
  • Court
  • Sports
  • Tech
  • Automobile
  • Food
  • Videos
Search
  • Home
  • State
  • LIVE
  • Latest
  • Districts
    • Bagalkot
    • Belagavi
    • Ballari
    • Bengaluru City
    • Bengaluru Rural
    • Bidar
    • Chamarajanagar
    • Chikkamagaluru
    • Chikkaballapur
    • Chitradurga
    • Dakshina Kannada
    • Davanagere
    • Dharwad
    • Gadag
    • Hassan
    • Haveri
    • Kalaburagi
    • Kodagu
    • Kolar
    • Koppal
    • Mandya
    • Mysuru
    • Raichur
    • Ramanagara
    • Shivamogga
    • Tumakuru
    • Udupi
    • Uttara Kannada
    • Vijayapura
    • Yadgir
  • National
  • World
  • Cinema
    • Sandalwood
    • Bollywood
    • South cinema
    • TV Shows
  • Stories
  • Crime
  • Court
  • Sports
    • Cricket
    • Other Sports
  • Tech
    • Smartphones
    • Telecom
  • Automobile
  • Food
    • Veg
    • Non Veg
  • Videos
    • Big Bulletin
    • Entertainment Videos
    • News Videos
Follow US
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News

Home | Districts | Bengaluru City | ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಿಡುಗಡೆ – ಬಿಜೆಪಿ ವಿರುದ್ಧ ‘ಕೈ’ ನಾಯಕರ ಕಿಡಿ

Bengaluru City

ಪಾಕಿಸ್ತಾನ ಪರ ಘೋಷಣೆ ಕೂಗಿದವರ ಬಿಡುಗಡೆ – ಬಿಜೆಪಿ ವಿರುದ್ಧ ‘ಕೈ’ ನಾಯಕರ ಕಿಡಿ

Public TV
Last updated: February 16, 2020 10:59 pm
Public TV
Share
2 Min Read
Hubballi KLE Students Pakistan Kashmir Congress BJP
SHARE

ಬೆಂಗಳೂರು : ಹುಬ್ಬಳ್ಳಿಯ ಕೆ.ಎಲ್.ಇ ಕಾಲೇಜ್ ವಿದ್ಯಾರ್ಥಿಗಳು ಪಾಕಿಸ್ತಾನ ಪರ ಘೋಷಣೆ ಕೂಗಿದ ಪ್ರಕರಣ ರಾಜಕೀಯ ಸ್ವರೂಪ ಪಡೆದುಕೊಂಡಿದೆ. ದೇಶದ್ರೋಹದ ಕೇಸ್ ಅಡಿ ಶನಿವಾರ ಆರೋಪಿಗಳನ್ನ ಹುಬ್ಬಳ್ಳಿ ಪೊಲೀಸರು ಬಂಧಿಸಿದ್ದರು. ಆದರೆ ಇಂದು ಆರೋಪಿಗಳನ್ನ ಬಿಡುಗಡೆ ಮಾಡಿದ್ದಾರೆ. ಪೊಲೀಸರ ಈ ವರ್ತನೆಗೆ ವಿಪಕ್ಷ ಕಾಂಗ್ರೆಸ್ ಆಕ್ರೋಶ ಹೊರ ಹಾಕಿದೆ.

ಬೆಂಗಳೂರಿನಲ್ಲಿ ಮಾತನಾಡಿದ ಮಾಜಿ ಸಿಎಂ ಸಿದ್ದರಾಮಯ್ಯ, ಈ ಸರ್ಕಾರ ತಾರತಮ್ಯ ಮಾಡುತ್ತಿದೆ. ಪಾಕಿಸ್ತಾನದ ಪರ ಘೋಷಣೆ ಕೂಗೋದು ದೇಶ ದ್ರೋಹದ ಕೆಲಸ. ಅವರ ಮೇಲೆ ದೇಶ ದ್ರೋಹದ ಕೇಸ್ ಹಾಕಬೇಕು. ಅದನ್ನ ಬಿಟ್ಟು ಬೀದರ್ ಕೇಸ್ ನಲ್ಲಿ ಸುಮ್ಮನೆ ದೇಶದ್ರೋಹಿ ಕೇಸ್ ಹಾಕಿದ್ದಾರೆ. ಈ ಸರ್ಕಾರ ಒಬ್ಬರ ಮೇಲೆ ಒಂದೊಂದು ತರಹ ಕೇಸ್ ಹಾಕಿ ತಾರತಮ್ಯ ಕೆಲಸ ಮಾಡ್ತಿದೆ ಅಂತ ಕಿಡಿಕಾರಿದರು.

HBL KLE copy

ಮಾಜಿ ಸಚಿವ ರಾಮಲಿಂಗಾರೆಡ್ಡಿ ಪ್ರತಿಕ್ರಿಯೆ ನೀಡಿ, ಮೊದಲು ರಾಜ್ಯ ಪೊಲೀಸರು ದಕ್ಷರಾಗಿದ್ದರು. ಆದ್ರೆ ಈಗ ಪೊಲೀಸ್ ಇಲಾಖೆಯಲ್ಲೂ ರಾಜಕೀಯ ಹೊಕ್ಕಿದೆ. ದೇಶದ್ರೋಹ ಆರೋಪ ಇರುವ ಕಾಶ್ಮೀರಿ ವಿದ್ಯಾರ್ಥಿಗಳನ್ನು ಬಿಡುಗಡೆ ಮಾಡಿದ್ಯಾಕೆ? ಪೊಲೀಸರ ನಡೆ ಅನುಮಾನ ಮೂಡಿಸುತ್ತಿದೆ ಅಂತ ತಿಳಿಸಿದರು. ಪೊಲೀಸರು ಬಿಜೆಪಿ ಪಕ್ಷದ ಸೂಚನೆ ಪ್ರಕಾರ ಕೆಲಸ ಮಾಡ್ತಿದ್ದಾರೆ. ಯಾರ ಮೇಲೆ ಕೇಸು ದಾಖಲಿಸುವುದು ಅಗತ್ಯವಿಲ್ಲವೋ ಅವರ ಮೇಲೆ ಪ್ರಕರಣ ಹಾಕ್ತಾರೆ. ಆದರೆ ಪಾಕಿಸ್ತಾನದ ಪರ ಘೋಷಣೆ ಕೂಗುವವರನ್ನು ಬಿಟ್ಟು ಕಳಿಸ್ತಾರೆ ಅಂದ್ರೆ ಏನರ್ಥ ಅಂತ ಪ್ರಶ್ನೆ ಮಾಡಿದರು.

ಅನಂತ್ ಕುಮಾರ್ ಹೆಗಡೆ, ಸೋಮಶೇಖರ್ ರೆಡ್ಡಿ, ಸಿಟಿ ರವಿ ಇಂಥವರ ಮೇಲೆ ಯಾವುದೇ ಕ್ರಮ ತೆಗೆದುಕೊಂಡಿಲ್ಲ. ಮಹಾತ್ಮಾ ಗಾಂಧಿ ವಿರುದ್ಧ ಮಾತನಾಡಿದರೂ ಯಾವುದೇ ಪ್ರಕರಣ ದಾಖಲಿಸಿಲ್ಲ. ಆದರೆ ಪಾಕಿಸ್ತಾನ ಪರ ಘೋಷಣೆ ಕೂಗುವವರನ್ನು ತನಿಖೆ ಮಾಡದೇ ಬಿಟ್ಟಿದ್ದಾರೆ. ಪೊಲೀಸ್ ಇಲಾಖೆಯಲ್ಲಿ ಸಣ್ಣಪುಟ್ಟ ಒತ್ತಡಗಳು ಸಹಜವಾಗಿ ಇರುತ್ತವೆ. ಆದರೆ ಬಿಜೆಪಿ ಸರ್ಕಾರದಲ್ಲಿ ಇದು ಮಾತ್ರ ವಿಪರೀತವಾಗಿದೆ ಅಂತ ಬಿಜೆಪಿ ವಿರುದ್ಧ ಆಕ್ರೋಶ ಹೊರ ಹಾಕಿದರು.

HBL A

ಮಾಜಿ ಸಚಿವ ಯು.ಟಿ.ಖಾದರ್ ಮಾತನಾಡಿ, ಕಳೆದ ಎರಡು ತಿಂಗಳಿಂದ ಬೇರೆ ಬೇರೆ ಘಟನೆಗಳು ನಡೆಯುತ್ತಿವೆ. ಜನರು ಶಾಂತಿಯಾಗಿ, ಸೌಹಾರ್ದವಾಗಿ ಇರಬೇಕು ಅನ್ನೋದು ಈ ಸರ್ಕಾರಕ್ಕೆ ಇಷ್ಟ ಇಲ್ಲದಂತೆ ಕಾಣುತ್ತಿದೆ. ಹೀಗಾಗಿ ಹೀಗೆಲ್ಲ ನಡೆದುಕೊಳ್ತಿದೆ ಅಂತ ಕಿಡಿಕಾರಿದರು. ಪೊಲೀಸ್ ಇಲಾಖೆ ಬಿಜೆಪಿ ಸರ್ಕಾರದ ಕೈಗೊಂಬೆಯಂತೆ ಕೆಲಸ ಮಾಡುತ್ತಿದೆ. ಕಾನೂನು ಎಲ್ಲರಿಗೂ ಒಂದೇ ಇರಬೇಕು. ವರ್ಗಾವಣೆ ಆಗ್ತಾರೆ ಅಂತ ಪೊಲೀಸರು ಒಬ್ಬರಿಗೆ ಒಂದೊಂದು ಕಾನೂನು ಮಾಡೋದು ಸರಿಯಲ್ಲ. ಜನರಿಗೆ ಪೊಲೀಸ್ ಇಲಾಖೆ ಮೇಲೆ ನಂಬಿಕೆ ಹೋಗ್ತಿದೆ. ಡಿಜಿ ಐಜಿ ಅವರ ಗಮನಕ್ಕೆ ತಾರದೇ ಎಸ್ ಪಿ ನಿರ್ಧಾರ ಮಾಡೋಕೆ ಆಗೋದಿಲ್ಲ. ಡಿಜಿ ಐಜಿ ಈ ಬಗ್ಗೆ ಉತ್ತರ ಕೊಡಬೇಕು ಅಂತ ಒತ್ತಾಯ ಮಾಡಿದರು. ಪೊಲೀಸರು ಬಿಜೆಪಿ ಕೈಗೊಂಬೆಯಂತೆ ಕೆಲಸ ಮಾಡೋದು ಬಿಡಬೇಕು. ಕಾನೂನು ಪ್ರಕಾರ ಪೊಲೀಸರು ಕೆಲಸ ಮಾಡಬೇಕು ಅಂತ ಒತ್ತಾಯಿಸಿದರು.

TAGGED:bjpcongresshubliKLE College studentsPublic TVಕಾಂಗ್ರೆಸ್ಕೆಎಲ್‍ಇ ಕಾಲೇಜ್ ವಿದ್ಯಾರ್ಥಿಗಳುಪಬ್ಲಿಕ್ ಟಿವಿಬಿಜೆಪಿಹುಬ್ಬಳ್ಳಿ
Share This Article
Facebook Whatsapp Whatsapp Telegram

Cinema news

Asha Bhosle Funeral
ಸರ್ಕಾರಿ ಗೌರವಗಳೊಂದಿಗೆ ನೆರವೇರಿದ ಗಾಯಕಿ ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest National Top Stories
Jogi Prem
ಕನ್ನಡ ಸಿನಿಮಾ ಅಂತಲೇ ರಾಜಕಾರಣ – ಸೆನ್ಸಾರ್ ಬೋರ್ಡ್ ವಿರುದ್ಧ ಪ್ರೇಮ್ ಕಿಡಿ
Cinema Latest Sandalwood Top Stories
Dhruva Sarja
LPG ಗ್ಯಾಸ್‌ ಬಿಕ್ಕಟ್ಟಿನಿಂದ ಕಂಗಾಲಾದ ಆಟೋ ಚಾಲಕರಿಗೆ ಆಸರೆ – 25 ಲಕ್ಷ ನೆರವು ನೀಡಿದ ಧ್ರುವ ಸರ್ಜಾ!
Bengaluru City Cinema Latest Sandalwood Top Stories
Asha Bhosle 3
`ಅಭೀ ನಾ ಜಾವೋ ಛೋಡ್ ಕರ್’ ಗಾಯಕಿ ಸಂಗೀತದಲ್ಲಿ ಲೀನ – ಇಂದು ಆಶಾ ಭೋಸ್ಲೆ ಅಂತ್ಯಕ್ರಿಯೆ
Cinema Latest Main Post Top Stories

You Might Also Like

MLAs Meet Mallikarjun Kharge in Delhi
Bengaluru City

ದೆಹಲಿಯಲ್ಲಿ ಮಲ್ಲಿಕಾರ್ಜುನ ಖರ್ಗೆ ಭೇಟಿಯಾದ ಶಾಸಕರು – ಮೇ 15ರೊಳಗೆ ಕ್ಯಾಬಿನೆಟ್ ಪುನಾರಚನೆಗೆ ಒತ್ತಾಯ

Public TV
By Public TV
29 minutes ago
Strait of Hormuz 1
Latest

1 ದಿನಕ್ಕೆ 4 ಸಾವಿರ ಕೋಟಿ ರೂ. – ನೌಕಾ ದಿಗ್ಬಂಧನದಿಂದ ಇರಾನ್‌ ಆರ್ಥಿಕತೆಗೆ ಭಾರೀ ನಷ್ಟ!

Public TV
By Public TV
58 minutes ago
Rohini Sindhuri Supreme Court
Court

ರೋಹಿಣಿ ಸಿಂಧೂರಿ ವಿರುದ್ಧ ತನಿಖೆ – ಹೈಕೋರ್ಟ್ ಆದೇಶಕ್ಕೆ ಸುಪ್ರೀಂ ಕೋರ್ಟ್ ತಡೆ

Public TV
By Public TV
2 hours ago
Irans Ambassador to India Mohammad Fathali
Latest

ಭಾರತೀಯ ಟ್ಯಾಂಕರ್‌ಗಳಿಗೆ ಯಾವುದೇ ಶುಲ್ಕ ವಿಧಿಸಿಲ್ಲ: ಇರಾನ್‌ ಸ್ಪಷ್ಟನೆ

Public TV
By Public TV
2 hours ago
Vinobanagar Police Station
Crime

ಗಾಂಜಾ ಸೇವಿಸಿ ವಿಚಿತ್ರ ವರ್ತನೆ – ವಿದ್ಯಾರ್ಥಿ ವಿರುದ್ಧ ಸುಮೊಟೊ ಕೇಸ್ ದಾಖಲು

Public TV
By Public TV
3 hours ago
hd kumaraswamy mb patil 1
Automobile

2 ವರ್ಷದ ಬಳಿಕ ವಿಧಾನಸೌಧಕ್ಕೆ ಬಂದ ಹೆಚ್‌ಡಿಕೆ – ಮಂಡ್ಯದಲ್ಲಿ ARAI ಕೇಂದ್ರದ ಜೊತೆ ಕೈಗಾರಿಕಾ ಹಬ್‌ ಸ್ಥಾಪನೆಗೆ ಚಿಂತನೆ

Public TV
By Public TV
3 hours ago
Public TVPublic TV
Follow US
© Public TV. Design Company - Knowtable. All Rights Reserved.
  • Privacy Policy
  • CSR-Policy
  • Terms of Service
  • Complaints Redressal
  • Terms and Conditions
  • Contact
  • Election News
Welcome Back!

Sign in to your account

Username or Email Address
Password

Lost your password?