ಹುಬ್ಬಳ್ಳಿ: ಪ್ರೀತಿಸುವ ನೆಪದಲ್ಲಿ ಬಡ ಹೆಣ್ಣು ಮಕ್ಕಳನ್ನು ಬುಟ್ಟಿಗೆ ಹಾಕಿಕೊಂಡು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿ ಬ್ಲ್ಯಾಕ್‌ಮೇಲ್ ಮಾಡುತ್ತಿದ್ದ ಕಾಮುಕನನ್ನು ಹುಬ್ಬಳ್ಳಿ (Hubballi) ಪೊಲೀಸರು (Police) ಬಂಧಿಸಿದ್ದಾರೆ.
ಬಂಧಿತ ಆರೋಪಿಯನ್ನು ಶರಾವತಿ ನಗರದ ಕೆಇಬಿ ಲೇಔಟ್ ನಿವಾಸಿ ಅಶ್ಪಾಕ್ ಜೋಗನ್‌ಕೊಪ್ಪ (38) ಎಂದು ಗುರುತಿಸಲಾಗಿದೆ. ಆತ ಹತ್ತಕ್ಕೂ ಹೆಚ್ಚು ಯುವತಿಯರು, ಮಹಿಳೆಯರು ಹಾಗೂ ಅಪ್ರಾಪ್ತೆಯರ ಜೊತೆ ಪ್ರೀತಿಯ ನಾಟಕವಾಡಿದ್ದಾನೆ. ಅಲ್ಲದೇ ಅವರನ್ನು ಲೈಂಗಿಕವಾಗಿ ಬಳಸಿಕೊಂಡು ವಿಡಿಯೋ ಮಾಡಿಕೊಂಡಿದ್ದ. ವಿಡಿಯೋ ಇಟ್ಟುಕೊಂಡು ಹೇಳಿದಂತೆ ಕೇಳಬೇಕು ಎಂದು ಬೆದರಿಕೆ ಹಾಕುತ್ತಿದ್ದ ಎಂದು ಆರೋಪಿಸಲಾಗಿದೆ.
Advertisement
Advertisement
ಆರೋಪಿ ಹುಬ್ಬಳ್ಳಿಯ ಟಿಪ್ಪು ನಗರದಲ್ಲಿ ಜೆರಾಕ್ಸ್ ಮತ್ತು ಮೊಬೈಲ್ ರೀಚಾರ್ಜ್ ಸ್ಟೋರ್ ಇಟ್ಟುಕೊಂಡಿದ್ದ. ಇದೇ ಅಂಗಡಿಗೆ ಬರುವ ಬಡ ಹೆಣ್ಣು ಮಕ್ಕಳನ್ನ ಬಳಸಿಕೊಂಡಿದ್ದಾನೆ. ಹಣದಾಸೆ ಮತ್ತು ಪ್ರೀತಿಸುವ ಆಟವಾಡಿ ಬಡ ಹೆಣ್ಣುಮಕ್ಕಳ ಜೊತೆಗೆ ರಾಸಲೀಲೆ ನಡೆಸಿದ್ದಾನೆ. ಅಲ್ಲದೇ ವಿಡಿಯೋ ಕಾಲ್‌ನಲ್ಲಿ ಮಹಿಳೆಯರು ಬಟ್ಟೆ ಬಿಚ್ಚಿಸಿ ರೆಕಾರ್ಡ್ ಮಾಡಿಕೊಂಡಿದ್ದಾನೆ.
Advertisement
Advertisement
ಅಪ್ರಾಪ್ತ ಬಾಲಕಿಯೊಬ್ಬಳ ಪೋಷಕರಿಂದ ದುಷ್ಕರ್ಮಿಯ ವಿರುದ್ಧ ದೂರು ದಾಖಲಿಸಿದ್ದಳು. ದೂರಿನ ಅನ್ವಯ ಪೊಲೀಸರು ಆರೋಪಿಯನ್ನು ಠಾಣೆಗೆ ಕರೆತಂದು ವಿಚಾರಣೆ ನಡೆಸಿದಾಗ, ಆರೋಪಿಯ ವಿಕೃತ ಮುಖ ಬಯಲಾಗಿದೆ.