Connect with us

Dharwad

ಸಂಸದೆ ಸುಮಲತಾ ಆರೋಪಕ್ಕೆ ಸರ್ಕಾರದಿಂದ ಉತ್ತರವಿಲ್ಲ – ಸಿದ್ದರಾಮಯ್ಯ ವಾಗ್ದಾಳಿ

Published

on

Share this

– ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ

ಹುಬ್ಬಳ್ಳಿ: ಸಂಸದೆ ಸುಮಲತಾ ಅಕ್ರಮ ಗಣಿಗಾರಿಕೆ ವಿರುದ್ಧ ಧ್ವನಿ ಎತ್ತಿದ್ದಾರೆ. ಆದರೆ ಸ್ವತಃ ರಾಜ್ಯ ಸರ್ಕಾರವೇ ಅಕ್ರಮ ಗಣಿಗಾರಿಕೆಯಲ್ಲಿ ಭಾಗಿಯಾಗಿದೆ. ಸರ್ಕಾರ ಭ್ರಷ್ಟಾಚಾರದಲ್ಲಿ ಭಾಗಿಯಾದ ಪರಿಣಾಮ ಸುಮಲತಾರ ಆರೋಪಕ್ಕೆ ಸರ್ಕಾರದಿಂದ ಉತ್ತರ ದೊರೆಯುತ್ತಿಲ್ಲವೆಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಮಾಜಿ ಸಿಎಂ, ಸುಮಲತಾರವರು ಕೆಆರ್ ಎಸ್ ಡ್ಯಾಂ ಬಿರುಕು ಬಿಟ್ಟಿದೆ ಎಂದು ಆರೋಪ ಮಾಡಿದ್ದಾರೆ. ಅವರು ಆರೋಪ ಮಾಡಿದ ನಂತರ ಸರ್ಕಾರವಾಗಲಿ, ಗಣಿ ಇಲಾಖೆ ಆದರೂ ಸ್ಥಳಕ್ಕೆ ಹೋಗಿ ಪರಿಶೀಲನೆ ನಡೆಸಬೇಕಾಗಿತ್ತು. ಕೆಆರ್ ಎಸ್ ಸುತ್ತಮುತ್ತಲಿನ 20 ಕೀಲೋ ಮೀಟರ್ ಸುತ್ತಮುತ್ತ ಅಕ್ರಮ ಗಣಿಗಾರಿಕೆ ನಡೆಯುತ್ತಿದೆ. ಜೆಡಿಎಸ್ ನಾಯಕರ ಗಣಿ ಕಂಪನಿಗಳು ಇವೆ ಅಂತಾ ಆರೋಪ ಮಾಡಿದ್ದಾರೆ. ಆದರೆ ಸರ್ಕಾರ ಅಕ್ರಮ ಗಣಿಗಾರಿಕೆ ವಿರುದ್ಧ ಕ್ರಮ ಕೈಗೊಳ್ಳುತ್ತಿಲ್ಲ. ಕುಮಾರಸ್ವಾಮಿ ಅವರ ಪುತ್ರನನ್ನ ಸೋಲಿಸಿದ್ದಕ್ಕೆ ಕುಮಾರಸ್ವಾಮಿ ರಾಜಕೀಯ ಮಾಡುತ್ತಿದ್ದಾರೆ ಎಂದು ಸರ್ಕಾರ ಹಾಗೂ ಎಚ್ ಡಿಕೆ ವಿರುದ್ಧ ಸಿದ್ದರಾಮಯ್ಯ ಕಿಡಿಕಾರಿದ್ರು. ಇದನ್ನೂ ಓದಿ: ಮಂಡ್ಯ ಕದನಕ್ಕೆ ಹೆಚ್‍ಡಿಕೆ ವಿರಾಮ – ದಳಪತಿ ಸೈಲೆಂಟ್ ಆಗಿದ್ದರ ಹಿಂದಿದ್ಯಾ ಲೆಕ್ಕಾಚಾರ..?

ರಾಜ್ಯ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ. ಸರ್ಕಾರಕ್ಕೆ ಮಾನ, ಮರ್ಯಾದೆ, ನಾಚೀಕೆ ಏನೂ ಇಲ್ಲವೆಂದು ವಾಗ್ದಾಳಿ ನಡೆಸಿದ ಸಿದ್ದರಾಮಯ್ಯ, ಮಾಲಿನ್ಯ ಮಂಡಳಿಯ ಅಧಿಕಾರಿಯನ್ನ ವರ್ಗಾವಣೆ ಮಾಡೋಕೆ 16 ಕೋಟಿ ಡೀಲಿಂಗ್ ಮಾಡಿದ್ದು ಸುಳ್ಳಾ ಎಂದು ಪ್ರಶ್ನೆ ಮಾಡಿದ್ದಾರೆ. ಅಲ್ಲದೆ ಸರ್ಕಾರಕ್ಕೆ ಕೋವಿಡ್ ಹೆಸರಿನಲ್ಲಿ ಭ್ರಷ್ಟಾಚಾರ ಮಾಡೋಕೆ ಅನೂಕೂಲವಾಗಿದೆ. ಕೋವಿಡ್ ಸಂದರ್ಭದಲ್ಲಿ ಪ್ರತಿಪಕ್ಷಗಳು ಸಹ ಪ್ರತಿಭಟನೆ ಮಾಡೋಕೆ ಬರಲ್ಲ ಅನ್ನೋದು ಗೊತ್ತಿದೆ. ಹೀಗಾಗಿ ಸರ್ಕಾರ ಭ್ರಷ್ಟಾಚಾರದಲ್ಲಿ ಮುಳುಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.  ಇದನ್ನೂ ಓದಿ: ಅಕ್ಕಾ ನಮ್ಮ ಕ್ಷೇತ್ರಕ್ಕೂ ಬನ್ನಿ, ಅಕ್ರಮ ಗಣಿಗಾರಿಕೆ ನಿಲ್ಲಿಸಿಕೊಡಿ: ಸುರೇಶ್‍ಗೌಡ

ಡಿಕೆ ಹಾಗೂ ತಮ್ಮ ಮಧ್ಯದಲ್ಲಿ ಯಾವುದೇ ಬಣಗಳಿಲ್ಲ, ಕಾಂಗ್ರೆಸ್ ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಸಹ ಇಲ್ಲ. ರಾಜ್ಯದಲ್ಲಿ ಜಾತಿ ಸಮೀಕ್ಷೆ ನಡೆದು ಎರಡೂವರೆ ಆಯ್ತು. ಅದರ ವರದಿಯನ್ನ ಸಲ್ಲಿಕೆ ಮಾಡಲಾಗಿದ್ರು. ಆ ಕುರಿತು ಸದನದಲ್ಲಿ ಚರ್ಚೆ ಆಗುತ್ತಿಲ್ಲ. ಚರ್ಚೆ ಮಾಡಿದ್ರೆ ಸಾಮಾಜಿಕ ನ್ಯಾಯ ಒದಗಿಸಬೇಕಾಗುತ್ತದೆ. ಹೀಗಾಗಿ ಆ ಬಗ್ಗೆ ಚರ್ಚೆ ಮಾಡುತ್ತಿಲ್ಲವೆಂದು ಸಿದ್ದರಾಮಯ್ಯ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದರು. ಇದನ್ನೂ ಓದಿ: ಕುಮಾರಣ್ಣ ಕೈಕಟ್ಟಿ ನಿಲ್ಲುವುದು ಭಯದಿಂದ ಅಲ್ಲ, ಸಂಸ್ಕಾರದಿಂದ – ಜೆಡಿಎಸ್ ಅಭಿಮಾನಿಗಳು

Click to comment

Leave a Reply

Your email address will not be published. Required fields are marked *

Advertisement