– ಕೀಚಕನಿಗೆ ಗುಂಡೇಟು- ಲೇಡಿ ಪಿಎಸ್‌ಐ- ಪೊಲೀಸರ ಕಾರ್ಯಕ್ಕೆ ಜೈಕಾರ
ಹುಬ್ಬಳ್ಳಿ: ಬಿಹಾರದ ಮೂಲದ ಸೂಕೋಪಾತ್‌ನಿಂದ ಕೊಲೆಯಾದ 5 ವರ್ಷದ ಮೃತ ಬಾಲಕಿ ಕುಟುಂಬಕ್ಕೆ ರಾಜ್ಯ ಸರ್ಕಾರ 10 ಲಕ್ಷ ರೂ. ಪರಿಹಾರ ಘೋಷಿಸಿದೆ. ಮುಖ್ಯಮಂತ್ರಿ ನಿರ್ದೇಶನದ ಮೇರೆಗೆ 10 ಲಕ್ಷ ರೂ. ಪರಿಹಾರ ನೀಡುವುದಾಗಿ ವಿಧಾನ ಪರಿಷತ್ ಸದಸ್ಯ ಸಲೀಮ್ ಅಹಮದ್ ತಿಳಿಸಿದ್ದಾರೆ.
ಇಡೀ ರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಹುಬ್ಬಳ್ಳಿಯ 5 ವರ್ಷದ ಬಾಲಕಿ ಮೇಲಿನ ಅತ್ಯಾಚಾರ ಹಾಗೂ ಕೊಲೆ ಕೇಸ್‌ಗೆ ಸಂಬಂಧಿಸಿದಂತೆ ಕಾಮುಕ ಆರೋಪಿಯನ್ನು ಎನ್‌ಕೌಂಟರ್ ಮಾಡಲಾಗಿದೆ. ಬಿಹಾರ ಮೂಲದ ಆರೋಪಿ ರಿತೇಶ್ ಕುಮಾರ್ ಪೊಲೀಸರ ಗುಂಡೇಟಿಗೆ ಬಲಿಯಾದ ಆರೋಪಿಯಾಗಿದ್ದಾನೆ.
ಪೊಲೀಸರು ಆರೋಪಿಯನ್ನು ವಶಕ್ಕೆ ಪಡೆಯಲೆಂದು ಹೋಗಿದ್ರು. ಈ ವೇಳೆ ಪೊಲೀಸರ ಮೇಲೆ ಕಲ್ಲು ತೂರಿ, ಎಸ್ಕೇಪ್ ಆಗಲು ಯತ್ನಿಸಿದ್ದಾನೆ. ಒಮ್ಮೆ ಪೊಲೀಸರು ಗಾಳಿಯಲ್ಲಿ ಗುಂಡು ಹಾರಿಸಿದ್ರೂ ಕೇಳದೇ ಪೊಲೀಸರ ಮೇಲೆ ಕಲ್ಲು ತೂರಿದ್ದಾನೆ. ಈ ವೇಳೆ ಹುಬ್ಬಳ್ಳಿ ಪೊಲೀಸರು ಆತ್ಮರಕ್ಷಣೆಗಾಗಿ ಫೈರಿಂಗ್ ಮಾಡಿದ್ದಾರೆ.
ಅಶೋಕನಗರ ಪೊಲೀಸ್ ಠಾಣೆಯ ಮಹಿಳಾ ಪಿಎಸ್‌ಐ ಅನ್ನಪೂರ್ಣ ಅವರು ಹಾರಿಸಿದ ಗುಂಡು ಎದೆಗೆ ತಾಗಿ ಗಾಯಗೊಂಡಿದ್ದ ಆರೋಪಿಯನ್ನ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದ್ರೆ, ಚಿಕಿತ್ಸೆ ಫಲಿಸದಿದೇ ಆರೋಪಿ ರಿತೇಶ್ ಜೀವ ಹೋಗಿದೆ.
ಇನ್ನೂ, ಆಸ್ಪತ್ರೆಗೆ ಪೊಲೀಸ್ ಕಮಿಷನರ್ ಶಶಿಕುಮಾರ್ ಭೇಟಿ ನೀಡಿ, ಸಿಬ್ಬಂದಿ ಆರೋಗ್ಯ ವಿಚಾರಿಸಿದ್ರು. ಪೊಲೀಸರ ಕಾರ್ಯಕ್ಕೆ ಜನರು ಜೈಕಾರ ಹಾಕಿದ್ದಾರೆ. ಇನ್ನೂ, ಬಾಲಕಿ ಹಾಗೂ ಆರೋಪಿ ಹಿತೇಶ್ ಮೃತದೇಹ ಇನ್ನೂ, ಕಿಮ್ಸ್ ಆಸ್ಪತ್ರೆಯಲ್ಲೇ ಇದ್ದು, ಇಂದು ಕುಟುಂಬಸ್ಥರಿಗೆ ಹಸ್ತಾಂತರಿಲಾಗುತ್ತದೆ.