ಹುಬ್ಬಳ್ಳಿ: ರಾಜ್ಯವನ್ನೇ ಬೆಚ್ಚಿಬೀಳಿಸಿದ್ದ ನೇಹಾ ಹತ್ಯೆ ಪ್ರಕರಣದ (Neha Hiremath) ಆರೋಪಿ ಫಯಾಜ್, ಜಾಮೀನಿಗಾಗಿ ಕೋರ್ಟ್‌ಗೆ (Darshan) ಅರ್ಜಿ ಸಲ್ಲಿಸಿದ್ದಾನೆ. ಅರ್ಜಿಯಲ್ಲಿ ರೇಣುಕಾಸ್ವಾಮಿ ಕೊಲೆ ಪ್ರಕರಣದ ಆರೋಪಿ ನಟ ದರ್ಶನ್‌ಗೆ (Darshan) ಹೇಗೆ ಜಾಮೀನು ನೀಡಲಾಗಿದೆಯೋ ಹಾಗೇ ನನಗೂ ನೀಡಿ ಎಂದು ಬೇಡಿಕೆ ಇಟ್ಟಿದ್ದಾನೆ. ಇದನ್ನೂ ಓದಿ: ನೇಹಾ ಹತ್ಯೆ ನಿಜವಾಗಿಯೂ ಲವ್ ಜಿಹಾದ್ ಕೇಸ್, ನಾವು ಬಣ್ಣ ಕಟ್ಟಿಲ್ಲ: ಅಮಿತ್ ಶಾ
ಹುಬ್ಬಳ್ಳಿಯ (Hubballi) 1ನೇ ಹೆಚ್ಚುವರಿ ಜಿಲ್ಲಾ ಮತ್ತು ಸೆಷನ್ಸ್ ನ್ಯಾಯಾಲಯದಲ್ಲಿ ಅರ್ಜಿ ವಿಚಾರಣೆ ನಡೆಯುತ್ತಿದೆ. ಇದೇ ತಿಂಗಳು 4ರಂದು ಜಾಮೀನು ಅರ್ಜಿ ಅಂತಿಮ ಆದೇಶವನ್ನು ನ್ಯಾಯಾಲಯ ನೀಡಲಿದೆ. ಇದನ್ನೂ ಓದಿ: ನೇಹಾ ಹತ್ಯೆ ಪ್ರಕರಣ ಫಾಸ್ಟ್‌ಟ್ರ್ಯಾಕ್ ಕೋರ್ಟ್‌ಗೆ ಕೊಡುವ ಅವಶ್ಯಕತೆ ಇಲ್ಲ: ಪರಮೇಶ್ವರ್
ಈ ಬಗ್ಗೆ ʻಪಬ್ಲಿಕ್ ಟಿವಿʼ ಮುಂದೆ ನೇಹಾ ತಂದೆ ನಿರಂಜನ್ ಅಸಮಾಧಾನ ಹೊರಹಾಕಿದ್ದಾರೆ. ನಟ ದರ್ಶನ ತಮ್ಮ ನಟನೆ ಮತ್ತು ಒಳ್ಳೆಯ ಕಾರ್ಯದಿಂದ ಜನರಿಗೆ ಮಾದರಿ ಆಗಬೇಕಿತ್ತು. ಆದರೆ ಹತ್ಯೆ ಪ್ರಕರಣದಲ್ಲಿ ಇತರೇ ಆರೋಪಿಗಳಿಗೆ ಮಾದರಿಯಾಗಿದ್ದು ನಿಜಕ್ಕೂ ನೋವು ತಂದಿದೆ. ನನ್ನ ಮಗಳಿಗೆ ಆದ ಅನ್ಯಾಯ ಯಾರಿಗೂ ಆಗಬಾರದು ಎಂದು ಅಸಮಾಧಾನ ಹೊರಹಾಕಿದ್ದಾರೆ. ಇದನ್ನೂ ಓದಿ: ಕಾಂಗ್ರೆಸ್‌ಗೆ ತನ್ನ ಸದಸ್ಯನ ಮಗಳನ್ನೇ ರಕ್ಷಣೆ ಮಾಡೋಕೆ ಆಗ್ಲಿಲ್ಲ: ನೇಹಾ ಹತ್ಯೆ ಖಂಡಿಸಿದ ಮೋದಿ
ಏನಿದು ಪ್ರಕರಣ?
ಏ.18ರ ಸಂಜೆ 4:45ರ ಸುಮಾರಿಗೆ ಫಯಾಜ್ ಎಂಬಾತ, ವಿದ್ಯಾರ್ಥಿನಿ ನೇಹಾ ಹಿರೇಮಠ ಕಾಲೇಜಿನಿಂದ ಹೊರಬರುತ್ತಿದ್ದ ಸಂದರ್ಭದಲ್ಲಿ ಏಕಾಏಕಿ ಆಕೆಯ ಕುತ್ತಿಗೆ, ಹೊಟ್ಟೆ ಹಾಗೂ ಬೆನ್ನಿನ ಭಾಗಕ್ಕೆ ಮನಬಂದಂತೆ ಚಾಕುವಿನಿಂದ ಇರಿದು ಹತ್ಯೆಗೈದಿದ್ದ. ಬಳಿಕ ಆರೋಪಿ ಕಿಮ್ಸ್ ಆಸ್ಪತ್ರೆಯ ಹಿಂಬದಿ ಅವಿತು ಕುಳಿತಿದ್ದ, ಆತನನ್ನು ಕೂಡಲೇ ಬಂಧಿಸಲಾಗಿತ್ತು. ಆರೋಪಿಗೆ ಕಠಿಣ ಶಿಕ್ಷೆಗೆ ಆಗ್ರಹಿಸಿ ರಾಜ್ಯಾದ್ಯಂತ ಪ್ರತಿಭಟನೆಗಳಾಗಿದ್ದವು. ಇದನ್ನೂ ಓದಿ: ಹುಬ್ಬಳ್ಳಿ ನೇಹಾ ಹತ್ಯೆ ಕೇಸ್ – ಚಾರ್ಜ್ ಶೀಟ್ ಸಲ್ಲಿಸಲು ಸಿಐಡಿ ತಯಾರಿ