ಪೊಲೀಸ್ ಜೀಪ್, ಬೈಕ್ ಮುಖಾಮುಖಿ ಡಿಕ್ಕಿ- ಸವಾರ ಸಾವು

Public TV
1 Min Read
HBL Accident

ಹುಬ್ಬಳ್ಳಿ: ಪೊಲೀಸ್ ಜೀಪ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದ ಪರಿಣಾಮ ಸವಾರ ಸಾವನ್ನಪ್ಪಿದ ಘಟನೆ ನಗರದ ವಿಮಾನ ನಿಲ್ದಾಣದ ರಸ್ತೆಯ ಪೊಲೀಸ್ ಕ್ವಾಟರ್ಸ್ ಬಳಿ ನಡೆದಿದೆ.

ಹುಬ್ಬಳ್ಳಿ ನಿವಾಸಿ ಪ್ರಸಾದ್ ಶೆಟ್ಟಿ (36) ಮೃತ ದುರ್ದೈವಿ. ಪ್ರಸಾದ್ ಶೆಟ್ಟಿ ಪತ್ನಿ ವನಿತಾ ಶೆಟ್ಟಿ ಘಟನೆ ಗಾಯಗೊಂಡಿದ್ದು, ಅವರನ್ನು ಸಮೀಪದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

HBL Accident A

ಪ್ರಸಾದ್ ಶೆಟ್ಟಿ ದಂಪತಿಯ ಮಕ್ಕಳ ಶಾಲೆಯಲ್ಲಿ ಇಂದು ಪೋಷಕರ ಸಭೆ ಕರೆಯಲಾಗಿತ್ತು. ಹೀಗಾಗಿ ಇಬ್ಬರೂ ಬೈಕ್ ಮೇಲೆ ಶಾಲೆಗೆ ಹೋಗಿ, ಸಭೆಗೆ ಹಾಜರಾಗಿ ಮನೆಗೆ ಮರಳುತ್ತಿದ್ದರು. ಈ ವೇಳೆ ವಿಮಾನ ನಿಲ್ದಾಣದ ರಸ್ತೆಯ ಪೊಲೀಸ್ ಕ್ವಾಟರ್ಸ್ ಬಳಿ ಪೊಲೀಸ್ ಜೀಪ್ ಹಾಗೂ ಬೈಕ್ ಮುಖಾಮುಖಿ ಡಿಕ್ಕಿ ಹೊಡೆದಿವೆ. ಪರಿಣಾಮ ಸವಾರ ಪ್ರಸಾದ್ ಗಂಭೀರವಾಗಿ ಗಾಯಗೊಂಡು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಘಟನಾ ಸ್ಥಳದಲ್ಲಿದ್ದ ಕೆಲವರು ತಕ್ಷಣವೇ ವನಿತಾ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದ್ದಾರೆ. ಪೊಲೀಸ್ ಜೀಪ್ ಜಾಲಕ ವೇಗವಾಗಿ ಬರುತ್ತಿದ್ದ. ಪರಿಣಾಣ ನಿಯಂತ್ರಣ ತಪ್ಪಿ ಪ್ರಸಾದ್ ಶೆಟ್ಟಿ ಅವರ ಬೈಕ್‍ಗೆ ಡಿಕ್ಕಿ ಹೊಡೆದಿದ್ದಾರೆ ಎಂದು ಸ್ಥಳೀಯರು ದೂರಿದ್ದಾರೆ.

Police Jeep

ಪ್ರಸಾದ್ ಶೆಟ್ಟಿ ಅವರ ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಈ ಸಂಬಂಧ ಹುಬ್ಬಳ್ಳಿಯ ಉತ್ತರ ಸಂಚಾರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share This Article