ಹುಬ್ಬಳ್ಳಿ: ಧಾರವಾಡ-ಹುಬ್ಬಳ್ಳಿ ಅವಳಿ ನಗರದ ವಿವಿಧೆಡೆ ಮನೆಗಳ ಕಳ್ಳತನ ಮಾಡಿದ ಕಳ್ಳನನ್ನು ಬಂಧಿಸುವಲ್ಲಿ ಎಂಪಿಎಂಸಿ ಪೊಲೀಸರು ಯಶ್ವಸಿಯಾಗಿದ್ದಾರೆ.
ಕೃಷ್ಣ್ ಲಚ್ಚಪ್ಪ ಲಮಾಣಿ ಬಂಧಿತ ಆರೋಪಿ. ಬಂಧಿತ ಮನೆಗಳ್ಳನಿಂದ 75 ಸಾವಿರ ರೂ. ಮೌಲ್ಯದ ಬೆಳ್ಳಿ ಬಂಗಾರವನ್ನ ಪೊಲೀಸರು ಜಪ್ತಿ ಮಾಡಿದ್ದಾರೆ. ಹುಬ್ಬಳ್ಳಿಯ ನವನಗರದ ಪಂಚಾಕ್ಷರಿ ನಗರ ಹಾಗೂ ಶಿವಾನಂದನಗರದಲ್ಲಿ ಆದ ಮನೆಗಳ್ಳತನ ಮಾಡಿದ ಆರೋಪಿಯಿಂದ 75 ಸಾವಿರ ಮೌಲ್ಯದ ಬೆಳ್ಳಿ ಬಂಗಾರದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ಹಲವಾರು ತಿಂಗಳುಗಳಿಂದ ಮನೆಗಳ್ಳತನ ಮಾಡಿ ಪೊಲೀಸರಿಗೆ ಕೈಗೆ ಸಿಗದೇ ಪರಾರಿಯಾಗುತ್ತಿದ್ದ ಆರೋಪಿಯನ್ನ ಬಂಧಿಸುವಲ್ಲಿ ಯಶ್ವಸಿಯಾಗಿದ್ದಾರೆ. ಹೀಗಾಗಿ ಎಂಪಿಎಂಸಿ ಠಾಣೆಯ ಇನ್ಸಪೆಕ್ಟರ್ ಪ್ರಭು ಸೂರಿನ ಹಾಗೂ ಠಾಣೆಯ ಸಿಬ್ಬಂದಿ ಕಾರ್ಯವೈಖರಿ ಮೆಚ್ಚಿ ಹುಬ್ಬಳ್ಳಿ ಧಾರವಾಡ ಪೊಲೀಸ್ ಆಯುಕ್ತ ಆರ್ ದಿಲೀಪ್ ಸಿಬ್ಬಂದಿಗೆ ಬಹುಮಾನ ಘೋಷಣೆ ಮಾಡಿದ್ದಾರೆ.