ದಾವಣಗರೆ: ಹುಬ್ಬಳ್ಳಿಯಲ್ಲಿ (Hubballi) ಜಿಮ್ ಟ್ರೈನರ್ (Gym Trainer) ಸಮೀರ್ ವಿರುದ್ಧ ಕೇಳಿ ಬಂದಿರುವ ಅತ್ಯಾಚಾರ ಆರೋಪ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿ ವಿರುದ್ಧ ಗೃಹ ಸಚಿವ ಜಿ.ಪರಮೇಶ್ವರ್ (G. Parameshwar) ಕ್ರಮಕ್ಕೆ ಸೂಚಿಸಿದ್ದಾರೆ.
ಪ್ರಕರಣ ಸಂಬಂಧ ದಾವಣಗೆರೆಯಲ್ಲಿ ಮಾಧ್ಯಮಗಳಿಗೆ ಅವರು ಮಾಹಿತಿ ನೀಡಿದರು. ಈ ವೇಳೆ, ಈ ಪ್ರಕರಣದ ಬಗ್ಗೆ ಎಲ್ಲಾ ಮಾಹಿತಿಯನ್ನು ನೀಡಲು ಅಧಿಕಾರಿಗಳಿಗೆ ತಿಳಿಸಿದ್ದೇನೆ. ಯಾರೇ ಆಗಿದ್ದರೂ ಕೂಡ ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳುತ್ತೇವೆ. ಈಗಾಗಲೇ ಯುವತಿಯನ್ನು ರಕ್ಷಣೆ ಮಾಡಲಾಗಿದೆ. ಜಿಮ್ ಟ್ರೈನರ್ ಮೇಲೆ ಕ್ರಮ ತೆಗೆದುಕೊಳ್ಳಲು ಹೇಳಿದ್ದೇನೆ ಎಂದಿದ್ದಾರೆ. ಇದನ್ನೂ ಓದಿ: ಜ್ಯೂಸ್‌ನಲ್ಲಿ ಮತ್ತಿನ ಔಷಧ ಬೆರಸಿಕೊಟ್ಟು ಸಮೀರ್ ಅತ್ಯಾಚಾರ ಮಾಡಿದ್ದಾನೆ – ಸಂತ್ರಸ್ತೆ ಸ್ಫೋಟಕ ಹೇಳಿಕೆ
ಈಗ ಹುಬ್ಬಳ್ಳಿಗೆ ಹೊರಟಿದ್ದೇನೆ ಬರುವುದರೊಳಗೆ ವರದಿ ನೀಡಿ ಎಂದಿದ್ದೇನೆ. ಈಗ ಮಾಹಿತಿ ಬಂದಿದೆ. ಇಂತಹ ಕೇಸ್‌ಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಅವರು ತಿಳಿಸಿದ್ದಾರೆ. ಇದನ್ನೂ ಓದಿ: ಹುಬ್ಬಳ್ಳಿಯಲ್ಲಿ ಲವ್ ಜಿಹಾದ್ ಗಲಾಟೆ – ಜಿಮ್ ಟ್ರೈನರ್ ವಿರುದ್ಧ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

