ಧಾರವಾಡ: ಕಳೆದ ಏಪ್ರಿಲ್ 16 ರಂದು ಹಳೇ ಹುಬ್ಬಳ್ಳಿಯಲ್ಲಿ ನಡೆದಿದ್ದ ಗಲಾಟೆಗೆ ಸಂಬಂಧಿಸಿದಂತೆ ಜಾಮೀನು ಕೋರಿ ಆರೋಪಿಗಳು ಸಲ್ಲಿಸಿದ್ದ ಅರ್ಜಿಯನ್ನು ಧಾರವಾಡ ಹೈಕೋರ್ಟ್ ತಿರಸ್ಕರಿಸಿದೆ.
Advertisement
ಕಳೆದ ಏಪ್ರಿಲ್ 16 ರಂದು ಹಳೇ ಹುಬ್ಬಳ್ಳಿಯಲ್ಲಿ ವಿವಾದಾತ್ಮಕ ಪೋಸ್ಟ್ ಹಾಕಿದ್ದ ವಿಚಾರವಾಗಿ ಗುಂಪೊಂದು ಪೊಲೀಸ್ ವಾಹನಗಳ ಮೇಲೆ ಕಲ್ಲು ತೂರಾಟ ನಡೆಸಿತ್ತು. ಈ ವೇಳೆ 156 ಜನರ ಮೇಲೆ 12 ಎಫ್‌ಐಆರ್ ದಾಖಲು ಮಾಡಲಾಗಿತ್ತು. ಇದನ್ನೂ ಓದಿ: ಮೋದಿ, ಅಮಿತ್ ಶಾ, ಯೋಗಿಗೆ ಜೀವ ಬೆದರಿಕೆ – ಆರೋಪಿಯನ್ನು ಬಂಧಿಸಿ ಬಿಟ್ಟು ಕಳುಹಿಸಿದ ಪೊಲೀಸರು
Advertisement
ಆರೋಪಿಗಳ ಪೈಕಿ 8 ಜನರಿಗೆ ಈಗಾಗಲೇ ಜಾಮೀನು ಮಂಜೂರಾಗಿದೆ. ಬಾಕಿ ಇರುವ ಆರೋಪಿಗಳ ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಲಯ, ಎಲ್ಲಾ ಆರೋಪಿಗಳ ಜಾಮೀನು ಅರ್ಜಿಯನ್ನು ತಿರಸ್ಕೃತಗೊಳಿಸಿದೆ.
Advertisement
Advertisement
ಹಳೇ ಹುಬ್ಬಳ್ಳಿ ಠಾಣೆಯ ಪೊಲೀಸರು ನ್ಯಾಯಾಲಯಕ್ಕೆ ಜಾರ್ಜ್ ಶೀಟ್ ಸಲ್ಲಿಕೆ ಮಾಡದ ಹಿನ್ನೆಲೆಯಲ್ಲಿ ನ್ಯಾಯಾಲಯ ಆರೋಪಿಗಳ ಜಾಮೀನು ಅರ್ಜಿ ತಿರಸ್ಕಾರ ಮಾಡಿದ್ದಾರೆ ಎಂದು ಆರೋಪಿಗಳ ಪರ ವಕೀಲರು ತಿಳಿಸಿದ್ದಾರೆ. ಇದನ್ನೂ ಓದಿ: ದೇಶೀಯ ಭಯೋತ್ಪಾದನೆಗೆ ಮದರಸಾಗಳೇ ಕಾರಣ – ಹಿಂದೂ ಜಾಗರಣಾ ವೇದಿಕೆ ಕಿಡಿ