ಕಾಂಗ್ರೆಸ್ ದೃಷ್ಟಿಯಲ್ಲಿ ಗಲಭೆ ಆರೋಪಿಗಳಿಗೆ ಹಲಾಲ್, ಕಬಾಬ್ ನೀಡಿ ಉಪಚರಿಸಬೇಕಿತ್ತೇ?: ಬಿಜೆಪಿ ಕಿಡಿ

Public TV
1 Min Read
bjp congress 1

ಬೆಂಗಳೂರು: ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ. ಮತಾಂಧ ಅಲ್ಪಮತೀಯ ಆರೋಪಿಗಳ ಬಂಧನವಾಗಿದೆ. ಕಾಂಗ್ರೆಸ್ ದೃಷ್ಟಿಯಲ್ಲಿ ಆರೋಪಿಗಳಿಗೆ ಹಲಾಲ್ ಕಬಾಬ್ ನೀಡಿ ಉಪಚರಿಸಬೇಕಿತ್ತೇ? ಎಂದು ಬಿಜೆಪಿ ಟ್ವಿಟ್ಟರ್ ಮೂಲಕ ಕಾಂಗ್ರೆಸ್ ವಿರುದ್ಧ ಕಿಡಿಕಾರಿದೆ.

HUBBALLI MOULVI 2

ಟ್ವೀಟ್‍ನಲ್ಲಿ ಏನಿದೆ?:
ಹುಬ್ಬಳ್ಳಿ ಗಲಭೆಯನ್ನು ರಾಜ್ಯ ಸರ್ಕಾರ ಕೇವಲ ಮೂರು ಗಂಟೆಯಲ್ಲಿ ತಹಬದಿಗೆ ತಂದಿದೆ. ಮತಾಂಧ ಅಲ್ಪಮತೀಯ ಆರೋಪಿಗಳ ಬಂಧನವಾಗಿದೆ. ಆದರೆ, ಕಾನೂನು ಸುವ್ಯವಸ್ಥೆ ಹದೆಗೆಟ್ಟಿದೆ ಎಂದು ಕಾಂಗ್ರೆಸ್ ಹುಯಿಲೆಬ್ಬಿಸುತ್ತಿದೆ. ಕಾಂಗ್ರೆಸ್ ರಣಹದ್ದುಗಳಿಗೆ ಹುಬ್ಬಳ್ಳಿ ಘಟನೆ ನಿರೀಕ್ಷಿತ ಪ್ರಮಾಣದಲ್ಲಿ ಸಂತೋಷ ನೀಡಿಲ್ಲ. ಡಿ.ಜೆಹಳ್ಳಿ ಗಲಭೆ ಪ್ರಕರಣದಲ್ಲಿ ಕಾಂಗ್ರೆಸ್ ಮುಖಂಡ ಸಂಪತ್ ರಾಜ್ ಸೇರಿದಂತೆ 110 ಕ್ಕೂ ಹೆಚ್ಚು ಮತಾಂಧರ ಬಂಧನ. ಪಾದರಾಯನಪುರ ಗಲಭೆಯಲ್ಲಿ 116 ದಂಗೆಕೋರರ ಬಂಧನ. ಉಪ್ಪಿನಂಗಡಿಯ ಠಾಣೆಯ ಮುಂದೆ ಗಲಭೆ ಮಾಡಿದವರ ಬಂಧನ. ಹುಬ್ಬಳ್ಳಿ ಗಲಭೆಯಲ್ಲಿ ಮೌಲ್ವಿ ಸೇರಿದಂತೆ 126 ಸಮಾಜ ಘಾತುಕರ ಬಂಧನವಾಗಿದೆ. ಇದನ್ನೂ ಓದಿ: ಧರ್ಮ ಸಂಸತ್‍ನಲ್ಲಿ ದ್ವೇಷ ಭಾಷಣ – ದೆಹಲಿ ಪೊಲೀಸ್ ಸಲ್ಲಿಸಿದ್ದ ಅಫಿಡವಿಟ್‍ಗೆ ಸುಪ್ರೀಂ ಅಸಮಾಧಾನ

ಸಮಾಜದ ಶಾಂತಿ ಸರ್ವನಾಶವಾಗುವಂಥ ಫಲಿತಾಂಶವನ್ನು ಕಾಂಗ್ರೆಸ್ಸಿಗರು ಬಯಸಿದ್ದರು. ಆದರೆ ರಾಜ್ಯ ಬಿಜೆಪಿ ಸರ್ಕಾರ ಮಿಂಚಿನ ಕಾರ್ಯಾಚರಣೆ ನಡೆಸಿ, ಪರಿಸ್ಥಿತಿ ನಿಭಾಯಿಸಿದ್ದು ಹರಳೆಣ್ಣೆ ಕುಡಿಸಿದ ಅನುಭವ ನೀಡಿದೆ. ಹುಬ್ಬಳ್ಳಿ ಗಲಭೆಯ ಮಾಸ್ಟರ್ ಮೈಂಡ್ ಬಂಧನವಾಗಿದೆ. ಆದರೆ ರಿಂಗ್ ಮಾಸ್ಟರ್ ಯಾರೆಂದು ತಿಳಿಯಬೇಕಲ್ಲವೇ? ಆ ರಿಂಗ್ ಮಾಸ್ಟರ್ ಮಹಾನಾಯಕ ಆಗಿರಬಹುದೇ ಅಥವಾ ಮೀರ್‍ಸಾದಿಕ್ ಆಗಿರಬಹುದೇ?. ಇದನ್ನೂ ಓದಿ: ಹಿಜಬ್ ಧರಿಸಿ ಪರೀಕ್ಷಾ ಕೇಂದ್ರಕ್ಕೆ ಬಂದ ಖಾಸಗಿ ಕಾಲೇಜಿನ ಶಿಕ್ಷಕಿ

Share This Article
Leave a Comment

Leave a Reply

Your email address will not be published. Required fields are marked *