ಧಾರವಾಡ: ಹುಬ್ಬಳ್ಳಿಯಿಂದ (Dharwad Bus) ವಿಜಯಪುರ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಅಮರಗೋಳ ಗ್ರಾಮದ ಬಳಿ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ಪರಿಣಾಮ ಹಲವು ಪ್ರಯಾಣಿಕರು ಗಾಯಗೊಂಡಿದ್ದಾರೆ.
ಬಸ್‌ನ ಮುಂಭಾಗದ ಟೈರ್ ಬಸ್ಟ್ ಆದ ಕಾರಣ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ ಎನ್ನಲಾಗಿದೆ. ಘಟನೆ ಸಂಭವಿಸಿದ ತಕ್ಷಣ ಸ್ಥಳದಲ್ಲಿದ್ದ ಸಾರ್ವಜನಿಕರು ಹಾಗೂ ಬಸ್‌ನಲ್ಲಿದ್ದ ಇತರ ಪ್ರಯಾಣಿಕರು ಗಾಯಾಳುಗಳ ನೆರವಿಗೆ ಧಾವಿಸಿದ್ದಾರೆ.
ಗಾಯಗೊಂಡವರನ್ನು ತಕ್ಷಣವೇ ಆಸ್ಪತ್ರೆಗೆ ದಾಖಲಿಸಲಾಗಿದೆ. ಕೆಲವರನ್ನು ಗದಗ ಜಿಲ್ಲೆಯ ನರಗುಂದ ಸರ್ಕಾರಿ ಆಸ್ಪತ್ರೆಗೆ, ಇನ್ನೂ ಕೆಲವರನ್ನು ನವಲಗುಂದ ಸರ್ಕಾರಿ ಆಸ್ಪತ್ರೆಗೆ ರವಾನೆ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.ಇದನ್ನೂ ಓದಿ: ಟೀಂ ಇಂಡಿಯಾಗೆ ಆಘಾತ; ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಯಿಂದ ಬುಮ್ರಾ ಔಟ್
ಘಟನೆಯ ಮಾಹಿತಿ ತಿಳಿಯುತ್ತಿದ್ದಂತೆ ನವಲಗುಂದ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಸ್ ಪಲ್ಟಿಯಾಗಲು ನಿಖರ ಕಾರಣವೇನು ಎಂಬ ಬಗ್ಗೆ ತನಿಖೆ ಮುಂದುವರಿದಿದೆ.ಇದನ್ನೂ ಓದಿ: ʼಬೆಂಕಿಗೆ ತುಪ್ಪ ಸುರಿಯಬೇಡಿʼ – ಹಳೇ ವಿವಾದಕ್ಕೆ ಹೃತಿಕ್ ವಿರುದ್ಧ ಕಂಗನಾ ಗರಂ
