Wednesday, 11th December 2019

Recent News

8 ತಿಂಗಳ ಹಿಂದೆ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣು

– ವರದಕ್ಷಿಣೆ ಕಿರುಕುಳದ ಆರೋಪ

ಹುಬ್ಬಳ್ಳಿ: ಎಂಟು ತಿಂಗಳ ಹಿಂದೆಯಷ್ಟೇ ಮದುವೆಯಾಗಿದ್ದ ಗೃಹಿಣಿ ಆತ್ಮಹತ್ಯೆಗೆ ಶರಣಾದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಹುಬ್ಬಳ್ಳಿಯ ಶಿವಪ್ಪ ಚಲವಾದಿ ಅವರ ಪುತ್ರಿ ಶಿಲ್ಪಾ ಆತ್ಮಹತ್ಯೆಗೆ ಶರಣಾದ ಯುವತಿ. ಶಿಲ್ಪಾ ವರದಕ್ಷಿಣೆ ಕಿರುಕುಳದಿಂದ ಬೇಸತ್ತು ವಿಷ ಕುಡಿದು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಮೃತ ಯುವತಿ ಕುಟುಂಬಸ್ಥರ ಆಕ್ರಂದನ ಮುಗಿಲು ಮುಟ್ಟಿದೆ. ಇದನ್ನೂ ಓದಿ: ವರ್ಷದ ಹಿಂದೆ ಮದುವೆಯಾಗಿದ್ದ ಮಾಜಿ ಏಮ್ಸ್ ವೈದ್ಯೆ ಶವವಾಗಿ ಪತ್ತೆ

ಬೆಳಗಾವಿ ಜಿಲ್ಲೆಯ ಖಾನಾಪುರ ತಾಲೂಕಿನ ಹುಲ್ಯಾಳಿ ಗ್ರಾಮದ ಅನಿಲ ಚಲವಾದಿ ಜೊತೆಗೆ ಶಿಲ್ಪಾಳ ಮದುವೆ ಮಾಡಿದ್ದೆವು. ಆದರೆ ಪತಿ ಅನಿಲ್ ಚಲವಾದಿ ವರದಕ್ಷಿಣೆ ತರುವಂತೆ ಶಿಲ್ಪಾಳಿಗೆ ಪದೇ ಪದೇ ಕಿರುಕುಳ ನೀಡಿದ್ದ. ಇದರಿಂದಾಗಿ ತವರು ಮನೆಗೆ ವಾಪಸ್ ಆಗಿದ್ದ ಶಿಲ್ಪಾ ಪತಿಯ ಕಿರುಕುಳದ ಬಗ್ಗೆ ಹೇಳಿಕೊಂಡಿದ್ದಳು ಎಂದು ಶಿವಪ್ಪ ಚಲವಾದಿ ದೂರಿದ್ದಾರೆ.

ಶಿಲ್ಪಾ ಮನೆಯಲ್ಲಿ ಯಾರು ಇಲ್ಲದೆ ಇದ್ದಾಗ ವಿಷ ಕುಡಿದು ಆತ್ಮಹತ್ಯೆಗೆ ಶರಣಾಗಿದ್ದಾಳೆ. ಈ ಕುರಿತು ಮಾಹಿತಿ ಪಡೆದು ಸ್ಥಳಕ್ಕೆ ದೌಡಾಯಿಸಿದ ಪೊಲೀಸರು ಮೃತ ಶಿಲ್ಪಾ ದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳಹಿಸಿದ್ದಾರೆ. ಈ ಸಂಬಂಧ ಆರೋಪಿ ಅನಿಲ್ ಚಲವಾದಿ ವಿರುದ್ಧ ನಂದಗಡ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

Your email address will not be published. Required fields are marked *