ಹುಬ್ಬಳ್ಳಿ : ಹುಬ್ಬಳ್ಳಿ – ಅಂಕೋಲಾ (Hubballi – Ankola) ರೈಲು ಮಾರ್ಗ ಅಭಿವೃದ್ಧಿಗೆ ಪೂರಕವಾಗಲಿದೆ. ಅಲ್ಲದೇ ಗೋವಾ, ಕಾರವಾರ ಹಾಗೂ ಮಂಗಳೂರು ಬಂದರುಗಳಿಂದ ವಿದೇಶ ವ್ಯಾಪಾರಕ್ಕೆ ಸಹಕಾರಿಯಾಗಲಿದೆ ಎಂದು ಕೇಂದ್ರ ಸಂಸದೀಯ ವ್ಯವಹಾರಗಳ, ಗಣಿ ಮತ್ತು ಕಲ್ಲಿದ್ದಲು ಸಚಿವ ಪ್ರಹ್ಲಾದ್ ಜೋಶಿ (Pralhad Joshi) ಹೇಳಿದ್ದಾರೆ.
Advertisement
ಹುಬ್ಬಳ್ಳಿಯ ಸರ್ಕ್ಯೂಟ್ ಹೌಸ್‍ನಲ್ಲಿಂದು ಹುಬ್ಬಳ್ಳಿ – ಅಂಕೋಲಾ ರೈಲು ಮಾರ್ಗದ ಕುರಿತು ರಾಷ್ಟ್ರೀಯ ವನ್ಯಜೀವಿ ಮಂಡಳಿಯ ತಜ್ಞರ ತಂಡದೊಂದಿಗೆ ವಿವಿಧ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಹಾಗೂ ಅಧಿಕಾರಿಗಳ ಸಭೆಯನ್ನುದ್ದೇಶಿಸಿ ಮಾತನಾಡಿದ ಅವರು, ಈ ಮಾರ್ಗದಿಂದ ಸಾರಿಗೆ ವೆಚ್ಚ ಸಹ ತಗ್ಗಲಿದೆ. ದೇಶದ ದೊಡ್ಡದಾದ ಸೀಬರ್ಡ್ ನೌಕಾನೆಲೆಗೆ ಉಪಯುಕ್ತಕರವಾಗಲಿದೆ. ಇದನ್ನೂ ಓದಿ: ಲಕ್ಷಾಂತರ ಅಭಿಮಾನಿಗಳನ್ನು ಹೊಂದಿದ್ದ ಯೂಟ್ಯೂಬರ್ ಭೀಕರ ಅಪಘಾತದಲ್ಲಿ ಸಾವು
Advertisement
Advertisement
ಜಾಗತಿಕ ಮಟ್ಟದಲ್ಲಿ ದೇಶದ ಉತ್ಪನ್ನಗಳು ಗುರುತಿಸಿಕೊಳ್ಳಲು ಮತ್ತು ವಹಿವಾಟು ನಡೆಸಲು ಈ ರೈಲ್ವೆ ಮಾರ್ಗ ಅವಶ್ಯಕವಾಗಿ ಬೇಕಾಗಿದೆ. ಲಾಜಿಸ್ಟಿಕ್ ವೆಚ್ಚವು ಬೇರೆ ದೇಶಗಳಿಗೆ ಹೋಲಿಸಿದರೆ ದೇಶದಲ್ಲಿ ಹೆಚ್ಚಾಗಿದೆ. ಅರಣ್ಯ ಸಂಪತ್ತು, ವನ್ಯ ಮೃಗಗಳು, ಜಲಚರಗಳಿಗೆ ಆದ್ಯತೆ ಇರಬೇಕು. ನಮ್ಮ ದೇಶದ ಆರ್ಥಿಕತೆಯು 2025ಕ್ಕೆ 5 ಟ್ರಿಲಿಯನ್ ಮತ್ತು 2047 ಕ್ಕೆ 32 ಟ್ರಿಲಿಯನ್ ಡಾಲರ್ 10 ಪಟ್ಟು ಹೆಚ್ಚಾಗಬೇಕಿದೆ. ದೇಶವು ಜಗತ್ತಿನಲ್ಲಿ ಎರಡನೇ ಹೆಚ್ಚು ಜನಸಂಖ್ಯೆಯನ್ನು ಹೊಂದಿದೆ. ಹೀಗಾಗಿ ಕೈಗಾರಿಕೆಗಳು, ಉದ್ಯೋಗಾವಕಾಶ ಸೇರಿದಂತೆ ಇತರೆ ಜನರ ಅವಶ್ಯಕತೆಗಳನ್ನು ಪೂರೈಸಬೇಕಾಗಿದೆ. ರೈಲು ಮಾರ್ಗದ ಕುರಿತು ತಂಡದೊಂದಿಗೆ ಚರ್ಚಿಸಲಾಗಿದೆ ಎಂದಿದ್ದಾರೆ. ಇದನ್ನೂ ಓದಿ: ಇಂದು ಸ್ಯಾನಿಟರಿ ಪ್ಯಾಡ್, ನಾಳೆ ಕಾಂಡೋಮ್ ಕೇಳ್ತೀರಿ – ವಿವಾದಿತ ಹೇಳಿಕೆಗೆ ಕ್ಷಮೆಯಾಚಿಸಿದ ಐಎಎಸ್ ಅಧಿಕಾರಿ