Connect with us

Corona

ಕೊರೊನಾ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ

Published

on

– ಆರೋಗ್ಯವಂತ ಹೆಣ್ಣು ಮಗುವಿಗೆ ಜನ್ಮ ನೀಡಿದ ತಾಯಿ

ಹುಬ್ಬಳ್ಳಿ: ಜಿಲ್ಲೆಯಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಶಸ್ತ್ರಚಿಕಿತ್ಸೆ ಮೂಲಕ ಯಶಸ್ವಿಯಾಗಿ ಹೆರಿಗೆ ಮಾಡಿಸಲಾಗಿದೆ.

ಕೊರೊನಾ ಸೋಂಕು ಪಾಸಿಟಿವ್ ಇದ್ದ ಹುಬ್ಬಳ್ಳಿ ತಾಲೂಕು ಉಮಚಗಿ ಗ್ರಾಮದ 25 ವರ್ಷದ ತುಂಬು ಗರ್ಭಿಣಿಗೆ, 39 ವಾರಗಳು ಹಾಗೂ 04 ದಿನಗಳು ಪೂರ್ಣಗೊಂಡಿದ್ದರೂ ಸಹಜ ಹೆರಿಗೆ ಸಾಧ್ಯವಿಲ್ಲದ ಲಕ್ಷಣಗಳಿದ್ದವು. ಹೀಗಾಗಿ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆ ಮಾಡಿಸುವಲ್ಲಿ ಕಿಮ್ಸ್ ವೈದ್ಯರ ತಂಡ ಯಶಸ್ವಿಯಾಗಿದೆ.

ಕಿಮ್ಸ್ ನಲ್ಲಿ ಇಂದು ಬೆಳಿಗ್ಗೆ ಶಸ್ತ್ರಚಿಕಿತ್ಸೆ ಮೂಲಕ ಹೆರಿಗೆಯಾಗಿದ್ದು, 3.5 ಕೆ.ಜಿ ತೂಕದ ಹೆಣ್ಣು ಮಗುವಿಗೆ ತಾಯಿ ಜನ್ಮ ನೀಡಿದ್ದಾಳೆ. ವಿಭಾಗದ ಮುಖ್ಯಸ್ಥೆ ಡಾ.ಕಸ್ತೂರಿ ಡೋಣಿಮಠ, ಶಸ್ತ್ರಚಿಕಿತ್ಸಕ ಡಾ.ವೈ.ಎಂ.ಕಬಾಡಿ, ಅರವಳಿಕೆ ತಜ್ಞೆ ಡಾ.ವೀಣಾ, ಸ್ನಾತಕೋತ್ತರ ವೈದ್ಯಕೀಯ ವಿದ್ಯಾರ್ಥಿಗಳಾದ ಡಾ.ಅಕ್ಷತಾ ನಿಂಗನೂರೆ, ಡಾ.ಸಹನಾ, ಡಾ.ರೂಪಾ, ನರ್ಸಿಂಗ್ ವಿಭಾಗದ ಶ್ವೇತಾ, ರೇಷ್ಮಾ, ಸಹಾಯಕ ಸಿಬ್ಬಂದಿ ಕಳಕಪ್ಪ ಮತ್ತಿತರರ ತಂಡ ಈ ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದೆ.

ಕಿಮ್ಸ್ ತಜ್ಞರ ಕಾರ್ಯಕ್ಕೆ ಜಿಲ್ಲಾಧಿಕಾರಿಗಳಾದ ದೀಪಾ ಚೋಳನ್, ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರಠಾಣಿ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.