ಧಾರವಾಡ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆಯ (Hubli-Dharwad Municipal Corporation) 22ನೇ ಅವಧಿಗೆ ಮೇಯರ್, ಉಪಮೇಯರ್ ಸ್ಥಾನಕ್ಕೆ ಜೂನ್ 20ರಂದು ಚುನಾವಣೆ ನಡೆಯಲಿದೆ.
ಧಾರವಾಡ (Dharwad) ಪಾಲಿಕೆಯ ಸ್ವಾತಂತ್ರ್ಯ ಅಮೃತಮಹೋತ್ಸವ ಸಭಾಭವನದಲ್ಲಿ ಚುನಾವಣೆ ನಡೆಯಲಿದ್ದು, ಬೆಳಗ್ಗೆ 11 ಗಂಟೆವರೆಗೆ ನಾಮಪತ್ರ ಸಲ್ಲಿಕೆಗೆ ಅವಕಾಶವಿರಲಿದೆ. ಬೆಳಗಾವಿ ಪ್ರಾದೇಶಿಕ ಆಯುಕ್ತ ನಿತೇಶ ಪಾಟೀಲ್ ನೇತೃತ್ವದಲ್ಲಿ ಚುನಾವಣೆ ನಡೆಯುತ್ತಿದ್ದು, ಮಧ್ಯಾಹ್ನ 1 ಗಂಟೆಗೆ ಮಹತ್ವದ ಸಭೆ ನಡೆಯಲಿದೆ.
Advertisement
22ನೇ ಅವಧಿಯ ಹು-ಧಾ ಪಾಲಿಕೆ ಚುನಾವಣೆಯ ಮೇಯರ್ ಸ್ಥಾನಕ್ಕೆ ಸಾಮಾನ್ಯ ಮಹಿಳೆ, ಉಪಮೇಯರ್ ಸ್ಥಾನಕ್ಕೆ ಸಾಮಾನ್ಯ ಮೀಸಲು ನಿಗದಿಯಾಗಿದೆ. ಇದನ್ನೂ ಓದಿ: ಬಸ್ ಸೀಟಿಗಾಗಿ ಕೈಕೈ ಮಿಲಾಯಿಸಿದ ಮೈಸೂರು ಮಹಿಳೆಯರು – ನಾರಿ ʻಶಕ್ತಿʼ ಪ್ರದರ್ಶನ
Advertisement
82 ಸದಸ್ಯರ ಬಲಾಬಲ ಹೊಂದಿರುವ ಮಹಾನಗರ ಪಾಲಿಕೆಯಲ್ಲಿ 39 ಮಂದಿ ಬಿಜೆಪಿ (BJP) ಸದಸ್ಯರು, 33 ಮಂದಿ ಕಾಂಗ್ರೆಸ್ (Congress) ಸದಸ್ಯರು, AIMIM 3, ಜೆಡಿಎಸ್ 1 ಹಾಗೂ 6 ಪಕ್ಷೇತರ ಸದಸ್ಯರು ಇದ್ದಾರೆ. ಸಂಸದ, ಶಾಸಕರು, ಪರಿಷತ್ ಸದಸ್ಯರು ಸೇರಿ ಒಟ್ಟು ಸದಸ್ಯರ ಬಲ 91 ಇದೆ. ಅಡ್ಡಮತದಾನ ಮಾಡಬಹುದೆಂಬ ಕಾರಣಕ್ಕೆ ಉಭಯ ಪಕ್ಷದ ಅಧ್ಯಕ್ಷರಿಂದ ವಿಪ್ ಜಾರಿ ಮಾಡಲಾಗಿದೆ.
Advertisement
Advertisement
ಬಿಜೆಪಿ ಅಧ್ಯಕ್ಷರಿಂದ ಕಳೆದ 10 ದಿನಗಳ ಹಿಂದೆಯೇ ವಿಪ್ ಜಾರಿ ಮಾಡಿದರೆ, ಕಾಂಗ್ರೆಸ್ ತಮ್ಮ ಪಕ್ಷದ ಸದದ್ಯರಿಗೆ ಸೋಮವಾರ ವಿಪ್ ಜಾರಿಗೊಳಿಸಿದೆ. ಇದನ್ನೂ ಓದಿ: ಹೆಂಡತಿ ನನ್ನ ಮಾತು ಕೇಳುತ್ತಿಲ್ಲ, ದಯಮಾಡಿ ಪರಿಹರಿಸಿ- ಶಾಸಕರಿಗೆ ವ್ಯಕ್ತಿ ದೂರು