ಹುಬ್ಬಳ್ಳಿ: ಪಾಸಿಟಿವ್ ಬಂದಿದ್ದ ಇಬ್ಬರು ವಿದ್ಯಾರ್ಥಿಗಳಿಗೆ ಎರಡೇ ದಿನದಲ್ಲಿ ನೆಗೆಟಿವ್ ಬಂದಿರುವುದರಿಂದ ಈಗ ಜನರಿಗೆ ಕೋವಿಡ್ ರಿಪೋರ್ಟ್ ಮೇಲೆ ಅನುಮಾನ ಶುರುವಾಗಿದೆ.
ಅಯೋಧ್ಯೆಯಲ್ಲಿ ನಡೆದ ಸೆಮಿನಾರ್‌ನಲ್ಲಿ ವಿದ್ಯಾರ್ಥಿಗಳು ಭಾಗವಹಿಸಿದ್ದರು. ಈ ಹಿನ್ನೆಲೆಯಲ್ಲಿ ಕೊರೊನಾ ಟೆಸ್ಟ್ ಮಾಡಿಸಿದ್ದರು. ಡಿ.2ರಂದು ಹುಬ್ಬಳ್ಳಿಯ ಆಯುರ್ವೇದ ಕಾಲೇಜಿನ ಇಬ್ಬರು ವಿದ್ಯಾರ್ಥಿಗಳಿಗೆ ಪಾಸಿಟಿವ್ ಬಂದಿತ್ತು. ಆದರೆ ಮತ್ತೆ ಶನಿವಾರ (ಡಿ.4) ಟೆಸ್ಟ್ ಮಾಡಿಸಿದಾಗ ನೆಗೆಟಿವ್ ರಿಪೋರ್ಟ್ ಬಂದಿದೆ.
Advertisement
Advertisement
ಈ ರಿಪೋರ್ಟ್ ನೋಡಿದ ವಿದ್ಯಾರ್ಥಿಗಳು ಹಾಗೂ ಪೋಷಕರು ಶಾಕ್ ಆಗಿದ್ದಾರೆ. ಎರಡೇ ದಿನದಲ್ಲಿ ಕೊರೊನಾ ಹೋಯ್ತಾ ಎನ್ನುವ ಪ್ರಶ್ನೆ ಪಾಲಕರಲ್ಲಿ ಕಾಡುತ್ತಿದೆ. ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಇಬ್ಬರು ವಿದ್ಯಾರ್ಥಿಗಳನ್ನು ಟೆಸ್ಟ್ ಮಾಡಿಸಿದ್ದರು. ಎರಡು ಬಾರಿಯೂ ಅದೇ ಲ್ಯಾಬ್‌ನಲ್ಲಿ ಟೆಸ್ಟಿಂಗ್ ಮಾಡಿಸಿದ್ದಾರೆ. ಇದರಿಂದಾಗಿ ಕಿಮ್ಸ್ ಲ್ಯಾಬ್ ರಿಸಲ್ಟ್ ಮೇಲೆ ಈಗ ಅನುಮಾನ ಪ್ರಾರಂಭವಾಗಿದೆ. ಇದನ್ನೂ ಓದಿ: ಮಣ್ಣಿನ ಸವಕಳಿಯನ್ನು ತಡೆಗಟ್ಟಿ, ಉತ್ಪಾದಕತೆ ಹೆಚ್ಚಿಸಿ: ಬಿ.ಸಿ ಪಾಟೀಲ್
Advertisement
Advertisement
ಎರಡೇ ದಿನದಲ್ಲಿ ವಿದ್ಯಾರ್ಥಿಗಳಿಗೆ ಕೊರೊನಾ ನೆಗೆಟಿವ್ ಬಂದಿದ್ದರಿಂದ ಕಾಲೇಜು ಆಡಳಿತ ಮಂಡಳಿಯಿಂದ ಜಿಲ್ಲಾಡಳಿತದ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ. ಇದನ್ನೂ ಓದಿ: ಒಂದೇ ದಿನ ಕೋಟಿ ಲಸಿಕೆ ನೀಡಿಕೆ-5ನೇ ಸಲ ದಾಖಲೆ